ತೈಲ ಬೆಲೆ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಹೆಚ್ಚಿದ ಕರೆಂಟ್ ಡಿಮ್ಯಾಂಡ್!

Date:

ಕಳೆದ ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆಯಲ್ಲಿ ಶೇಕಡಾ 2 ರಷ್ಟು ಹೆಚ್ಚಳವಾಗಿದೆ. ವಿಶೇಷವೆಂದರೆ, ಶೋರೂಮ್‌ಗಳಿಂದ ರಸ್ತೆಗಿಳಿಯುತ್ತಿರುವ ಹೊಸ ವಾಹನಗಳಿಗಿಂತ, ಈಗಾಗಲೇ ಬಳಕೆಯಲ್ಲಿರುವ ಎಲೆಕ್ರ್ಟಿಕ್ ವಾಹನಗಳ ಚಾರ್ಜಿಂಗ್ ಅಗತ್ಯತೆಯೇ ಈ ವಿದ್ಯುತ್ ಬೇಡಿಕೆ ಹೆಚ್ಚಾಗಲು ಮುಖ್ಯ ಕಾರಣ ಎಂದು ಎಸ್ಕಾಂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸದ್ಯ ವಸತಿ ಸಮುಚ್ಚಯಗಳು, ಕೈಗಾರಿಕೆಗಳು ಹಾಗೂ ವಾಣಿಜ್ಯ ವಿಭಾಗ ಸೇರಿದಂತೆ ಎಲ್ಲಾ ವಲಯಗಳಲ್ಲೂ ಇವಿ ಚಾರ್ಜಿಂಗ್‌ಗಾಗಿ ವಿದ್ಯುತ್ ಬಳಕೆ ಸತತವಾಗಿ ಏರುತ್ತಲೇ ಇದೆ.

- Advertisement -

ಪರಿಸರಸ್ನೇಹಿ ಹಸಿರು ಸಂಚಾರಕ್ಕೆ ಸಾರ್ವಜನಿಕರಿಂದ ಸಿಗುತ್ತಿರುವ ಬೆಂಬಲ ಮತ್ತು ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇವಿ ವಾಹನಗಳ ಬುಕ್ಕಿಂಗ್ ಗಣನೀಯವಾಗಿ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ನಗರ ಹಾಗೂ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ‘ಫಾಸ್ಟ್ ಚಾರ್ಜಿಂಗ್’ ಕೇಂದ್ರಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಈ ಸವಾಲನ್ನು ಎದುರಿಸಲು ಇಂಧನ ಇಲಾಖೆಯು ಖಾಸಗಿ ಸಂಸ್ಥೆಗಳ ಜೊತೆ ಕೈಜೋಡಿಸಿದ್ದು, ಸೌರಶಕ್ತಿ ಆಧಾರಿತ ಚಾರ್ಜಿಂಗ್ ತಾಣಗಳನ್ನು ನಿರ್ಮಿಸಲು ಮುಂದಾಗಿದೆ. ಇದಕ್ಕಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (KREDL) ಮತ್ತು ಹೆದ್ದಾರಿ ಪ್ರಾಧಿಕಾರಗಳೊಂದಿಗೆ ಸಹಭಾಗಿತ್ವ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದರ ಭಾಗವಾಗಿ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಈಗಾಗಲೇ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ 45-50 ಕಿಲೋವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಚಾರ್ಜಿಂಗ್ ಘಟಕದ ಮಾದರಿಯಲ್ಲೇ, ಅತ್ಯಾಧುನಿಕ ಸುಧಾರಿತ ತಂತ್ರಜ್ಞಾನದ ಎರಡನೇ ಘಟಕವನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ವಾಹನಗಳು 30 ರಿಂದ 90 KWH ಸಾಮರ್ಥ್ಯದ ದೊಡ್ಡ ಬ್ಯಾಟರಿಗಳನ್ನು ಹೊಂದಿರುವುದರಿಂದ, ಗ್ರಾಹಕರು ಕೇವಲ 30 ನಿಮಿಷಗಳಲ್ಲಿ ಶೇ.100 ರಷ್ಟು ಚಾರ್ಜ್ ಆಗುವ ಡಿಸಿ (DC) ಫಾಸ್ಟ್ ಚಾರ್ಜರ್‌ಗಳನ್ನು ಬಯಸುತ್ತಿದ್ದಾರೆ. ಇದಕ್ಕಾಗಿ ಹೆಚ್ಚು ಸೌರ ಪ್ಯಾನೆಲ್‌ಗಳ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ಆನ್‌ಲೈನ್ ಹಣ ವರ್ಗಾವಣೆಗೆ 1 ಗಂಟೆ ವಿಳಂಬ ನಿಯಮ: RBI ಪ್ರಸ್ತಾಪಕ್ಕೆ ಬ್ಯಾಂಕ್‌ಗಳ ವಿರೋಧ

ಇವಿ ವಾಹನಗಳು ಎಷ್ಟು ಪ್ರಮಾಣದ ವಿದ್ಯುತ್ ಬಳಸುತ್ತಿವೆ ಎಂಬುದನ್ನು ನಿಖರವಾಗಿ ಪತ್ತೆಹಚ್ಚಲು ಪ್ರತ್ಯೇಕ ಮೀಟರ್ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ರಾಜ್ಯ ಲೋಡ್ ಡಿಸ್ಪ್ಯಾಚ್ ಸೆಂಟರ್ (SLDC) ಇಂಧನ ಇಲಾಖೆಯನ್ನು ಒತ್ತಾಯಿಸಿದೆ. ಸದ್ಯ ಬಹುತೇಕ ಗ್ರಾಹಕರು ತಮ್ಮ ಮನೆಬಳಕೆಯ ಮೀಟರ್‌ಗಳ ಮೂಲಕವೇ ವಾಹನಗಳನ್ನು ಚಾರ್ಜ್ ಮಾಡುತ್ತಿರುವುದರಿಂದ ಇಲಾಖೆಗೆ ನಿಖರವಾದ ಡೇಟಾ ಸಿಗುತ್ತಿಲ್ಲ. ಪ್ರತ್ಯೇಕ ಮೀಟರ್ ಅಳವಡಿಸಿದರೆ ಭವಿಷ್ಯದಲ್ಲಿ ಇವಿ ವಾಹನಗಳಿಗೆ ಸಂಬಂಧಿಸಿದಂತೆ ಸೂಕ್ತ ನೀತಿ-ನಿಯಮಗಳನ್ನು ರೂಪಿಸಲು ಮತ್ತು ವಿದ್ಯುತ್ ಲೋಡ್ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಸದ್ಯದ ಅಂಕಿ-ಅಂಶಗಳ ಪ್ರಕಾರ, ಬೆಸ್ಕಾಂ ವತಿಯಿಂದ ರಾಜ್ಯದಲ್ಲಿ 209 ಇವಿ ಚಾರ್ಜಿಂಗ್ ಕೇಂದ್ರಗಳು ಹಾಗೂ 471 ಚಾರ್ಜಿಂಗ್ ಪಾಯಿಂಟ್‌ಗಳು ಸಕ್ರಿಯವಾಗಿವೆ. ಒಟ್ಟಾರೆಯಾಗಿ ಸರ್ಕಾರಿ ಮತ್ತು ಖಾಸಗಿ ವಲಯ ಸೇರಿದಂತೆ ಕರ್ನಾಟಕದಲ್ಲಿ ಸದ್ಯ ಸುಮಾರು 8,000 ಚಾರ್ಜಿಂಗ್ ಕೇಂದ್ರಗಳಿದ್ದು, ಇವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜಾಲ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲೇ ಹರಡಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ...