ಬೆಂಗಳೂರು | ನೌಕರ ಆತ್ಮಹತ್ಯೆ ಪ್ರಕರಣ; ಓಲಾ ಸಿಇಒ ಭವೀಶ್ ಅಗರ್‌ವಾಲ್ ವಿರುದ್ಧ ಎಫ್‌ಐಆರ್

Date:

ಓಲಾ ಕಂಪನಿಯ ಸಂಸ್ಥಾಪಕ ಮತ್ತು ಸಿಇಒ ಭವೀಶ್ ಅಗರ್‌ವಾಲ್ ಮತ್ತು ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ದಾಸ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರೇರೇಪಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. 38 ವರ್ಷದ ಓಲಾ ಎಂಜಿನಿಯರ್ ಕೆ ಅರವಿಂದ್ ಅವರು ಕೆಲಸದ ಸ್ಥಳದಲ್ಲಿ ನಿರಂತರ ಕಿರುಕುಳಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು 28 ಪುಟಗಳ ಮರಣ ಪತ್ರದಲ್ಲಿ ಆರೋಪಿಸಿದ್ದಾರೆ.

- Advertisement -

ಅರವಿಂದ್ ಅವರ ಸಹೋದರ ಅಶ್ವಿನ್ ಕಣ್ಣನ್‌ ದಾಖಲಿಸಿದ ದೂರಿನ ಆಧಾರದಲ್ಲಿ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 108ನೇ ಕಲಂನಡಿ ಪ್ರಕರಣ ದಾಖಲಿಸಲಾಗಿದೆ. ದೂರದಾರರ ಪ್ರಕಾರ, ಅರವಿಂದ್ ಅವರ ವೇತನ ಮತ್ತು ಭತ್ಯೆಗಳನ್ನು ಕಂಪನಿ ನಿರ್ಬಂಧಿಸಿಟ್ಟುಕೊಂಡಿತು. ಅವರ ಮರಣದ ನಂತರ ಕಂಪನಿಯಿಂದ ಅರವಿಂದ್‌ ಅವರ ಖಾತೆಗೆ ಅಕ್ರಮವಾಗಿ ₹17.46 ಲಕ್ಷ ರೂಪಾಯಿ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸೆಪ್ಟೆಂಬರ್ 28ರಂದು ಚಿಕ್ಕಲಸಂದ್ರದಲ್ಲಿರುವ ತನ್ನ ಮನೆಯಲ್ಲಿ ಅರವಿಂದ್ ಅವರು ವಿಷ ಸೇವಿಸಿದ್ದಾರೆ. ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದೊರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಮರಣ ಪತ್ರವನ್ನು ಪತ್ತೆ ಮಾಡಿ, ಓಲಾ ಹಿರಿಯ ನಿರ್ವಾಹಕರಾದ ಸುಬ್ರತ್ ಕುಮಾರ್ ದಾಸ್ ಮತ್ತು ಭವೀಶ್ ಅಗರ್‌ವಾಲ್ ಅವರ ವಿರುದ್ಧ ಕೆಲಸದ ಸ್ಥಳದಲ್ಲಿ ಕಿರುಕುಳ ನೀಡಿದ್ದಕ್ಕೆ ದೂರು ದಾಖಲಿಸಿದ್ದಾರೆ. ಕಂಪನಿಯ ಎಚ್‌ಆರ್ ವಿಭಾಗವು ಅರವಿಂದ್‌ರ ಖಾತೆಗೆ ಮಾಡಿದ ಹಣದ ವರ್ಗಾವಣೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಲು ವಿಫಲವಾಗಿದೆ ಎಂದು ದೂರದಾರರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ವ್ಯವಸ್ಥೆಯ ಕ್ರೂರತೆಗೆ ಸಾಮರಸ್ಯದ ಬಣ್ಣ; ಮಧ್ಯಪ್ರದೇಶ ಸರ್ಕಾರದ ಬೌದ್ಧಿಕ ದಾರಿದ್ರ್ಯ

ಹಿರಿಯ ಪೊಲೀಸ್ ಅಧಿಕಾರಿ ಅವರ ಪ್ರಕಾರ, ದೂರು ಸಲ್ಲಿಕೆಯ ನಂತರ ಎಫ್‌ಐಆರ್‌ನಲ್ಲಿ ನಮೂದಿಸಲಾಗಿರುವವರಿಗೆ ನೋಟಿಸ್‌ಗಳನ್ನು ಜಾರಿ ಮಾಡಲಾಗಿದ್ದು, ತನಿಖೆಯು ಮುಂದುವರಿದಿದೆ ಎಂದರು.

ಈ ನಡುವೆ ಓಲಾ ಸಂಸ್ಥೆಯು ಕರ್ನಾಟಕ ಹೈಕೋರ್ಟ್‌ನಲ್ಲಿ ಎಫ್‌ಐಆರ್‌ನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ತಾತ್ಕಾಲಿಕ ರಕ್ಷಣಾ ಆದೇಶಗಳನ್ನು ಪಡೆದಿರುವುದಾಗಿ ತಿಳಿಸಿದೆ.

“ಅರವಿಂದ್ ಅವರು ತಮ್ಮ ಸೇವಾ ಅವಧಿಯಲ್ಲಿ ಯಾವುದೇ ರೀತಿಯ ಹಿಂಸೆ ಅಥವಾ ಅಸಮಾಧಾನವನ್ನು ಕಂಪನಿಗೆ ತಿಳಿಸಿರಲಿಲ್ಲ. ಅವರ ಹುದ್ದೆಗೂ ಉನ್ನತ ನಿರ್ವಾಹಕ ಮಂಡಳಿಯೊಂದಿಗೆ ನೇರ ಸಂಪರ್ಕವಿರಲಿಲ್ಲ” ಎಂದು ಕಂಪನಿಯ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....