ಏ.12 ರಂದು ಡಾ. ರಾಜ್‌ ನೆನಪಿನಂಗಳದಲ್ಲಿ: ‘ಕಥಾನಾಯಕನ ಕಥೆ’ ಕೃತಿ ಜನಾರ್ಪಣೆ, ಗ್ಯಾಲರಿ ಉದ್ಘಾಟನೆ

Date:

ಕನ್ನಡ ಚಿತ್ರರಂಗದ ಖ್ಯಾತ ನಟ, ನಾಡೋಜ ಡಾ. ರಾಜಕುಮಾರ್ ಅವರ ಆತ್ಮಚರಿತ್ರೆ ‘ಕಥಾನಾಯಕನ ಕಥೆ’ ಪುಸ್ತಕ ಜನಾರ್ಪಣೆ ಹಾಗೂ ಅವರ ಕಲಾಬದುಕಿನ ಛಾಯಾಚಿತ್ರಗಳ ಗ್ಯಾಲರಿಯ ಉದ್ಘಾಟನಾ ಸಮಾರಂಭವು ಏಪ್ರಿಲ್ 12 (ಭಾನುವಾರ) ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಸೆಂಟ್ರಲ್ ಕಾಲೇಜು ಕ್ಯಾಂಪಸ್‌ನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.

- Advertisement -

​ಹಂಪಿಯ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಡಾ. ರಾಜಕುಮಾರ್ ಅಧ್ಯಯನ ಪೀಠ ಹಾಗೂ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ಸಂಯುಕ್ತಾಶ್ರಯದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

​ನಟ ಡಾ. ಶಿವರಾಜಕುಮಾರ್ ಮತ್ತು ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಅವರು ‘ಕಥಾನಾಯಕನ ಕಥೆ’ ಪುಸ್ತಕವನ್ನು ಜನಾರ್ಪಣೆ ಮಾಡಲಿದ್ದಾರೆ. ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿ.ವಿ.ಯ ಕುಲಪತಿ ಪ್ರೊ. ಬಿ. ರಮೇಶ್ ಅವರು ಛಾಯಾಚಿತ್ರಗಳ ಗ್ಯಾಲರಿಯನ್ನು ಉದ್ಘಾಟಿಸಲಿದ್ದಾರೆ. ಹಂಪಿ ಕನ್ನಡ ವಿ.ವಿ.ಯ ಕುಲಪತಿ ಪ್ರೊ. ಡಿ.ವಿ. ಪರಮಶಿವಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನು ಓದಿದ್ದೀರಾ? IPL | ಒಂದೆಡೆ ಮನರಂಜನೆಯ ಮಹಾಪೂರ, ಮತ್ತೊಂದೆಡೆ ಜೂಜಾಟದ ಕರಾಳ ಘೋರ

​ಖ್ಯಾತ ಲೇಖಕ ಹಾಗೂ ಹಿರಿಯ ಚಲನಚಿತ್ರ ನಿರ್ದೇಶಕ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಆಶಯ ನುಡಿಯನ್ನಾಡಲಿದ್ದಾರೆ. ನಾಡೋಜ ಡಾ. ರಾಜಕುಮಾರ್ ಅಧ್ಯಯನ ಪೀಠದ ಸಂಚಾಲಕ ಡಾ. ಎ.ಎಸ್. ಪ್ರಭಾಕರ್ ಅವರು ಸ್ವಾಗತ ಮತ್ತು ಆರಂಭಿಕ ನುಡಿಯನ್ನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ. ಜಯಮಾಲಾ ಮತ್ತು ಹಿರಿಯ ಚಲನಚಿತ್ರ ನಿರ್ದೇಶಕ ಭಾರ್ಗವ ಅವರು ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹಿರಿಯ ಕಲಾವಿದ ಬಿ. ಗುರುದತ್ ಉಪಸ್ಥಿತರಿರುವರು.

​ಉಭಯ ವಿಶ್ವವಿದ್ಯಾಲಯಗಳ ಕುಲಸಚಿವರಾದ ಪ್ರೊ. ವಿರೂಪಾಕ್ಷಿ ಪೂಜಾರಹಳ್ಳಿ, ಶ್ರೀ ನವೀನ್ ಜೋಸೆಫ್ ಎ. (ಆಡಳಿತ), ಪ್ರಸಾರಾಂಗದ ನಿರ್ದೇಶಕರುಗಳಾದ ಡಾ. ಪಿ. ಮಹಾದೇವಯ್ಯ, ಡಾ. ತಾಂಡವ ಗೌಡ ಟಿ.ಎನ್. ಅವರೊಂದಿಗೆ, ಡಾ. ರಾಜಕುಮಾರ್ ಅವರ ಕುಟುಂಬ ವರ್ಗದವರು ಹಾಗೂ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

​ಪುಸ್ತಕದ ವಿಶೇಷತೆ
ಕುವೆಂಪು, ಅ.ನ.ಕೃ, ಡಾ. ಶಿವರಾಮ ಕಾರಂತ, ದೇವನೂರ ಮಹಾದೇವ ಹಾಗೂ ಬರಗೂರು ರಾಮಚಂದ್ರಪ್ಪ ಮುಂತಾದ ಸಾಹಿತ್ಯ ದಿಗ್ಗಜರು ಡಾ. ರಾಜಕುಮಾರ್ ಅವರ ಸರಳ ವ್ಯಕ್ತಿತ್ವ, ಕಲಾಪ್ರತಿಭೆ ಮತ್ತು ಗೋಕಾಕ್ ಚಳುವಳಿಯಂತಹ ನಾಡಿನ ಹೋರಾಟಗಳಲ್ಲಿ ಅವರ ಪಾತ್ರದ ಬಗ್ಗೆ ಆಡಿರುವ ಮೆಚ್ಚುಗೆಯ ನುಡಿಗಳು ಈ ಕೃತಿಯಲ್ಲಿದ್ದು, ಇದು ಕನ್ನಡದ ಅಸ್ಮಿತೆಯ ಪ್ರತೀಕವಾಗಿರುವ ಅಣ್ಣಾವ್ರ ಬದುಕಿನ ಮೌಲ್ಯಯುತ ದಾಖಲೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...