ಮೇ 26 ರಂದು ಎಚ್.ಎಸ್. ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

Date:

ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿ. ಎಚ್.ಎಸ್. ದೊರೆಸ್ವಾಮಿ ಅವರ ನೆನಪಿನಲ್ಲಿ ‘ಕರ್ನಾಟಕದ ಗೌರವಾರ್ಪಣೆ’ ಎಂಬ ವಿಶೇಷ ಕಾರ್ಯಕ್ರಮವನ್ನು ನಾಳೆ (ಮೇ 26) ಬೆಳಿಗ್ಗೆ 10.30ಕ್ಕೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್. ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ, ಡಾ. ಮನ್ಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ, ಗೌರಿ ಮೀಡಿಯಾ ಟ್ರಸ್ಟ್ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಂಯುಕ್ತವಾಗಿ ಈ ಅರ್ಥಪೂರ್ಣ ಸಮಾರಂಭವನ್ನು ಏರ್ಪಡಿಸಿವೆ.

- Advertisement -

ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಿಸಿರುವ, ದೊರೆಸ್ವಾಮಿ ಅವರ ಅಂಕಣ ಬರಹಗಳ ಅಂತ್ಯ ಭಾಗವಾದ ‘ನೂರರ ನೋಟ – ಭಾಗ 2’ ಕೃತಿಯನ್ನು ಲೋಕಾರ್ಪಣೆ ಮಾಡಲಾಗುವುದು. ಜೊತೆಗೆ, ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನದ ಪರವಾಗಿ ಟ್ರಸ್ಟಿ ಸಿರಿಮನೆ ನಾಗರಾಜ್ ಅವರು ಸರ್ಕಾರದ ಗಮನ ಸೆಳೆಯಲು ಒಂದು ಪ್ರಮುಖ ಮನವಿ ಪತ್ರವನ್ನು ಮಂಡಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನು ಓದಿದ್ದೀರಾ? IPL 2026 ಕಪ್ ಯಾರಿಗೆ; ಹೇಗಿದೆ ಪ್ಲೇ-ಆಫ್ ತಲುಪಿದ ನಾಲ್ಕು ದಿಗ್ಗಜ ತಂಡಗಳ ಬಲಾಬಲ?

ಬೆಳಿಗ್ಗೆಯಿಂದ ಸಂಜೆ 5 ಗಂಟೆಯವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ, ದೊರೆಸ್ವಾಮಿ ಅವರ ಬದುಕು, ಸ್ವಾತಂತ್ರ್ಯ ಚಳವಳಿ, ಅವರ ರಚನಾತ್ಮಕ ಕಾರ್ಯಗಳು, ಜನಪರ ಹೋರಾಟಗಳು ಮತ್ತು ಅವರ ಕನಸುಗಳ ಪ್ರಸ್ತುತತೆಯ ಬಗ್ಗೆ ಸುದೀರ್ಘ ವಿಚಾರಗೋಷ್ಟಿಗಳು ಹಾಗೂ ಚರ್ಚೆಗಳು ನಡೆಯಲಿವೆ. ಇದು ಅವರ ಶ್ರೇಷ್ಠ ಬದುಕು ಮತ್ತು ಮೌಲ್ಯಗಳನ್ನು ಸಮಾಜಕ್ಕೆ ಮತ್ತೊಮ್ಮೆ ನೆನಪಿಸುವ ವೇದಿಕೆಯಾಗಲಿದೆ.

ಈ ಸಮಾರಂಭದಲ್ಲಿ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಸಚಿವರಾದ ದಿನೇಶ್ ಗುಂಡೂರಾವ್, ಎಂ.ಸಿ. ಸುಧಾಕರ್, ಗುಜರಾತ್ ಶಾಸಕ ಹಾಗೂ ಯುವ ಹೋರಾಟಗಾರ ಜಿಗ್ನೇಶ್ ಮೆವಾನಿ ಮತ್ತು ಶಾಸಕ ರಿಜ್ವಾನ್ ಅರ್ಷದ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇವರೊಂದಿಗೆ, ನ್ಯಾ. ವಿ. ಗೋಪಾಲಗೌಡ, ಡಾ. ಸಿ.ಎನ್. ಮಂಜುನಾಥ್, ದರ್ಶನ್ ಪುಟ್ಟಣ್ಣಯ್ಯ, ಡಾ. ಎಲ್. ಹನುಮಂತಯ್ಯ, ಟಿ.ಎ. ನಾರಾಯಣಗೌಡ ಹಾಗೂ ಪ್ರೊ. ಬಿ.ಕೆ. ಚಂದ್ರಶೇಖರ್ ಅವರಂತಹ ನಾಡಿನ ಹಲವಾರು ಗಣ್ಯರು ಉಪಸ್ಥಿತರಿರಲಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...