ಒಮ್ಮೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೆ ಬೀಗ ತೆಗೆಯೋದು ಸರಿಯಲ್ಲ: ಸಚಿವ ರಾಮಲಿಂಗಾರೆಡ್ಡಿ

Date:

ಒಂದು ಬಾರಿ ಬಿಗ್‌ಬಾಸ್ ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗುವವರೆಗೂ ಬೀಗ ತೆಗೆಯುವುದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಗ್‌ಬಾಸ್ ವಿಚಾರದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ನಡೆಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ಬಿಗ್‌ಬಾಸ್‌ಗೆ ಬೀಗ ಹಾಕಿ ಮತ್ತೆ ತೆಗೆದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ವಿಷಯವನ್ನು ಮಾಧ್ಯಮಗಳ ಮೂಲಕ ನೋಡಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿ ಅವರು ಬಿಗ್‌ಬಾಸ್ ನಿಯಮ ಮೀರಿದ್ದಾರೆ ಅಂತ ನೋಟಿಸ್ ಕೊಟ್ಟಿದ್ದರು. ಜಾಲಿಡೇಸ್‌ ಸಂಸ್ಥೆ ನೋಟಿಸ್‌ಗೂ ಉತ್ತರಿಸಿರಲಿಲ್ಲ ಎಂದು ಬೀಗ ಹಾಕಿದ್ದರು. ಈಗ ನಿನ್ನೆ ಡಿಕೆ ಶಿವಕುಮಾರ್ ಅನುಮತಿ ನೀಡಿ ಅಂತ ಹೇಳಿದ್ದಾರೆ ಅಂತ ಮಾಧ್ಯಮಗಳಲ್ಲಿ ನೋಡಿದೆ. ನನಗೆ ಇಷ್ಟೇ ಮಾಹಿತಿ ಗೊತ್ತಿರುವುದು. ನಾನು ಊರಲ್ಲಿ ಇರಲಿಲ್ಲ. ಇಷ್ಟೇ ಗೊತ್ತಿರೋದು ಅಂತ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಬಿಗ್‌ ಬಾಸ್ | ಮನೆಯನ್ನು ತಕ್ಷಣವೇ ಬಂದ್​ ಮಾಡಲು ನೋಟಿಸ್!

ಒಂದು ಸಾರಿ ನೋಟಿಸ್ ಕೊಟ್ಟ ಮೇಲೆ, ಮುಚ್ಚಿದ ಮೇಲೆ ಅದು ಸರಿಯಾಗುವವರೆಗೂ ತೆಗೆಯುವುದಕ್ಕೆ ಅವಕಾಶ ಕೊಡಬಾರದು. ನನಗೆ ಡಿಸಿ ಮಾಹಿತಿ ಕೊಡುವುದಕ್ಕೆ ನಾನು ಊರಲ್ಲಿ ಇರಲಿಲ್ಲ. ಮಾಲಿನ್ಯ ‌ಮಂಡಳಿ ಸ್ವಾಯತ್ತ ಸಂಸ್ಥೆ. ಅದರ ಕೆಲಸ ಅದು ಮಾಡಿದೆ. ಏನಾಗಿದೆ ತಿಳಿದುಕೊಳ್ಳುತ್ತೇನೆ. ಈಗ ಏನ್ ಆಯ್ತು ಅಂತ ಡಿ ಕೆ ಶಿವಕುಮಾರ್ ಅವರನ್ನೇ ಕೇಳಿ ಎಂದರು.

ಪರಿಸರ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಿಡದಿಯಲ್ಲಿರುವ ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ ಮಾಡಲಾಗಿತ್ತು. ಅಲ್ಲೇ ಇರುವ ಬಿಗ್‌ಬಾಸ್‌ ಮನೆಗೂ ಇದರ ಬಿಸಿ ತಟ್ಟಿತ್ತು. ರಾತ್ರೋರಾತ್ರಿ ಬಿಗ್‌ಬಾಸ್‌ ಸ್ಪರ್ಧಿಗಳನ್ನು ಮನೆಯಿಂದ ಹೊರಹಾಕಲಾಗಿತ್ತು. ಒಂದು ದಿನದ ಬೆಳವಣಿಗೆ ಬೆನ್ನಲ್ಲೇ, ಜಾಲಿವುಡ್‌ ಸ್ಟುಡಿಯೋಸ್‌ ಗೇಟ್‌ಗೆ ಹಾಕಿರುವ ಬೀಗ ತೆಗೆಯುವಂತೆ ಡಿಸಿಎಂ ಸೂಚನೆ ನೀಡಿದ್ದರು. ಈಗ ಜಾಲಿವುಡ್‌ ಸ್ಟುಡಿಯೋ ತೆರೆಯಲಾಗಿದ್ದು, ಸ್ಪರ್ಧಿಗಳು ಕೂಡ ಬಿಗ್‌ಬಾಸ್‌ ಮನೆಗೆ ವಾಪಸ್‌ ಆಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....