ಒಂದಲ್ಲಾ ಒಂದು ದಿನ ನಾನು ರಾಜ್ಯದ ಮುಖ್ಯಮಂತ್ರಿ ಆಗುವೆ: ಸಚಿವ ಎಂ ಬಿ ಪಾಟೀಲ್ ಭವಿಷ್ಯ

Date:

ಒಂದಲ್ಲಾ ಒಂದು ದಿನ ನಾನು ಕರ್ನಾಟಕದ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಚಿವ ಎಂ ಬಿ ಪಾಟೀಲ್ ಭವಿಷ್ಯ ನುಡಿದಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಶನಿವಾರ ‘ಎಂ ಬಿ ಪಾಟೀಲ್‌ ಸಿಎಂ ಆಗುವುದಿಲ್ಲ’ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ‌ಪ್ರತಿಕ್ರಿಯೆ ನೀಡಿ, “ಈಗ ನಾನು ಸಿಎಂ ಆಗುವ ಸನ್ನಿವೇಶ ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ, ಮುಂದೆಯೂ ಸಿಎಂ ಆಗಿಯೇ ಇರುತ್ತಾರೆ. ನಾನೂ ಹಿರಿಯನಿದ್ದೇನೆ. ಒಂದಲ್ಲಾ ಒಂದು ದಿನ ರಾಜ್ಯದ ಮುಖ್ಯಮಂತ್ರಿಯಾಗುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಶಿವಾನಂದ ಪಾಟೀಲರು ಸಿಎಂ‌ ಆಗಲ್ಲ, ಅವರು ಜೆಡಿಎಸ್ ನಿಂದ ಬಂದವರು. ಬದಲಾಗಿ ವಿಜಯಪುರದಿಂದ ಸಿಎಂ ಆಗೋದು ನಾನೇ” ಎಂದು ಪರೋಕ್ಷವಾಗಿ ಕುಟುಕಿದರು.

“ನಾನು ಗೃಹ ಸಚಿವನಾಗಿದ್ದೆ. ಆಗಲೂ ಜೈಲಿನಲ್ಲಿ ಇಂತ ವ್ಯವಸ್ಥೆ ನೋಡಿದ್ದೇನೆ. ಘಟನೆಯನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅದಕ್ಕಾಗಿ ದರ್ಶನ್ ಅಂಡ್ ಟೀಮ್ ಚದುರಿಸಲಾಗಿದೆ. ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ” ಎಂದರು.

“ಮುಡಾ ಸೈಟ್ ಹಂಚಿಕೆ ಆಗಿದ್ದು ಬಿಜೆಪಿ ಅವಧಿಯಲ್ಲಿ. ಇದರಲ್ಲಿ ಸಿದ್ದರಾಮಯ್ಯನವರ ಪಾಲೇನಿದೆ. ಮುಡಾದಿಂದ ಯಾರು ಭಯಗೊಂಡಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡ್ತಿದ್ದೇವೆ. ಇದರಲ್ಲಿ ನಮಗೆ‌ ಜಯ ಸಿಕ್ಕೇ ಸಿಗುತ್ತದೆ. ಹಗಲು ಗನಸು ಬೇಡ. ಆದರೆ ಗವರ್ನರ್ ನಡವಳಿಕೆ ಮಾತ್ರ ಕಾನೂನು ಬಾಹಿರ” ಎಂದು ತಿಳಿಸಿದರು.

“ವಿಜಯೇಂದ್ರ ಅವರು ತಮ್ಮ ತಂದೆ ಸಿಲುಕಿಸಿದ್ದು ಹೇಗೆ ಎಂಬುದನ್ನು ತಿಳಿದುಕೊಳ್ಳಬೇಕು. ಏನೇನೋ‌ ಮಾಡಿ ಅವರ ರಾಜೀನಾಮೆ ಕೊಡಿಸಿದ್ರಲ್ಲ. ಬಿಜೆಪಿಯವರೇ ಅವರನ್ನು ಕೆಳಗೆ ಇಳಿಸಿದ್ದು. ಇದನ್ನು ಮೊದಲು ವಿಜಯೇಂದ್ರ ಅರಿಯಲಿ” ಎಂದು ಪ್ರಶ್ನೆಯೊಂದಕ್ಕೆ

“ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದ್ದು, ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ. ಇದನ್ನ ನಾನು ಹೇಳಿಲ್ಲ‌,ಯತ್ನಾಳ್ ಹೇಳಿದ್ದಾರೆ. ಜೋಶಿ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಾರಾ? ಬಿಜೆಪಿಯವರು ಆ ಹಣವನ್ನು ಚುನಾವಣೆಗೆ ಖರ್ಚು ಮಾಡಿದ್ರಾ? ಇಲ್ಲ ಬಿಜೆಪಿ ಹೈಕಮಾಂಡ್‌ಗೆ ಹೋಯ್ತಾ” ಎಂದು ಪ್ರಶ್ನಿಸಿದರು.

ಡಿಕೆಶಿ ಅವರನ್ನು ಬದಲಾಯಿಸುವ ಒತ್ತಡ ಇಲ್ಲ

“ತೆಲಂಗಾಣ ಮಾದರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗಮನದಲ್ಲಿ ಇದೆ. ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ . ಪಾರ್ಲಿಮೆಂಟ್ ಚುನಾವಣೆಗೂ ಅವರನ್ನು ಮುಂದುವರಿಸಲಾಗಿದೆ. ಸ್ವಾಭಾವಿಕವಾಗಿ ಅವರ ಮೇಲೆ ಒತ್ತಡ ಇದೆ . ಅವರನ್ನ ತೆಗೆಯಬೇಕು ಎಂಬ ಒತ್ತಡ ಇಲ್ಲ”‌ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...