ಕರ್ನಾಟಕದಲ್ಲಿ ಗುಟ್ಕಾ, ತಂಬಾಕು, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷ ನಿಷೇಧ

Date:

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಗುಟ್ಕಾ ಹಾಗೂ ತಂಬಾಕು ಮತ್ತು/ಅಥವಾ ನಿಕೋಟಿನ್‌ ಒಳಗೊಂಡ ಪಾನ್‌ ಮಸಾಲಾ ಉತ್ಪನ್ನಗಳ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ಇಂತಹ ಉತ್ಪನ್ನಗಳ ತಯಾರಿಕೆ, ದಾಸ್ತಾನು, ಸಾಗಣೆ, ವಿತರಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಸೂಚನೆ ಹೊರಡಿಸಿದೆ.

- Advertisement -

ಆಗಸ್ಟ್‌ 10ರಂದು ಹೊರಡಿಸಿರುವ ಅಧಿಸೂಚನೆಯು ಜಾರಿಯಾದ ದಿನದಿಂದ ಒಂದು ವರ್ಷದವರೆಗೆ ಅನ್ವಯವಾಗಲಿದೆ. ಪಾನ್‌ ಮಸಾಲಾದೊಂದಿಗೆ ಬೆರೆಸಿ ಬಳಸುವ ಉದ್ದೇಶದಿಂದ ಪ್ರತ್ಯೇಕವಾಗಿ ಪ್ಯಾಕ್‌ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಸೆಕ್ಷನ್‌ 30(2)(ಎ) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ, 2011ರ ನಿಯಮ 2.3.4ರ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಬಳಸಿಕೊಂಡು ಈ ಅಧಿಸೂಚನೆ ಹೊರಡಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತ ಕೆ ಶ್ರೀನಿವಾಸ್ ತಿಳಿಸಿದ್ದಾರೆ.

ತಂಬಾಕು ಮತ್ತು ನಿಕೋಟಿನ್‌ ಒಳಗೊಂಡ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ. ನಿಷೇಧದ ವ್ಯಾಪ್ತಿಗೆ ಕೇವಲ ಅಂಗಡಿಗಳಲ್ಲಿ ನಡೆಯುವ ಮಾರಾಟ ಮಾತ್ರ ಸೀಮಿತವಾಗಿಲ್ಲ. ಗುಟ್ಕಾ, ಪಾನ್‌ ಮಸಾಲಾ ಹಾಗೂ ತಂಬಾಕು ಅಥವಾ ನಿಕೋಟಿನ್‌ ಹೊಂದಿರುವ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ದಾಸ್ತಾನು, ಸಾಗಣೆ, ವಿತರಣೆ ಮತ್ತು ಮಾರಾಟ ಎಲ್ಲವೂ ನಿಷೇಧಕ್ಕೆ ಒಳಪಡಲಿವೆ. ನಿಷೇಧಿತ ಉತ್ಪನ್ನಗಳ ವಿರುದ್ಧ ರಾಜ್ಯಾದ್ಯಂತ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಂತಹ ಉತ್ಪನ್ನಗಳ ತಯಾರಿಕೆ ಮತ್ತು ಪೂರೈಕೆ ಸರಪಳಿಯ ಮೇಲೂ ನಿಗಾ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಷೇಧ ಜಾರಿಯಾದ ಬಳಿಕವೂ ಉತ್ಪನ್ನಗಳ ತಯಾರಿಕೆ ಅಥವಾ ಮಾರಾಟ ಮುಂದುವರಿಸುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು. ತಯಾರಕರು, ವಿತರಕರು ಮತ್ತು ಚಿಲ್ಲರೆ ವ್ಯಾಪಾರಿಗಳ ಮಟ್ಟದಲ್ಲೂ ತಪಾಸಣೆ ನಡೆಸಿ ಉಲ್ಲಂಘನೆ ಕಂಡುಬಂದರೆ ಕ್ರಮ ಜರುಗಿಸುವುದಾಗಿ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆನೆಗಳ ನಾಡು ಕರ್ನಾಟಕ: ಹೆಮ್ಮೆಯ ಜೊತೆಗೆ ಸಂರಕ್ಷಣೆಯ ಹೊಣೆಗಾರಿಕೆಯೂ ಅಗತ್ಯ

ನಿಷೇಧಿತ ತಂಬಾಕು ಮತ್ತು ನಿಕೋಟಿನ್‌ ಉತ್ಪನ್ನಗಳ ತಯಾರಿಕೆ, ದಾಸ್ತಾನು, ಸಾಗಣೆ, ವಿತರಣೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ತಂಬಾಕು ಹಾಗೂ ನಿಕೋಟಿನ್‌ ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ಮೂಲಕ ಆರೋಗ್ಯಕರ ಮತ್ತು ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

ಒಂದು ವರ್ಷದ ಈ ನಿಷೇಧ ಎಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ನಡೆಯುವ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳ ಮೇಲೆ ಅವಲಂಬಿತವಾಗಿದ್ದು, ನಿಷೇಧಿತ ಉತ್ಪನ್ನಗಳ ಅಕ್ರಮ ಮಾರಾಟದ ಮೇಲೂ ಅಧಿಕಾರಿಗಳು ನಿಗಾ ವಹಿಸುವ ಅಗತ್ಯವಿದೆ.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...