ಆನ್‌ಲೈನ್‌ ಬೆಟ್ಟಿಂಗ್ | ಶಾಸಕ ವೀರೇಂದ್ರ ಪಪ್ಪಿ ಮತ್ತೆ 4 ದಿನ ಇ.ಡಿ ವಶಕ್ಕೆ

Date:

ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಹಗರಣ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಉದ್ಯಮಿ ಕೆ.ಸಿ.ವೀರೇಂದ್ರ ಅಲಿಯಾಸ್ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.

- Advertisement -

ಆನ್‌ಲೈನ್‌ ಮತ್ತು ಆಫ್‌ಲೈನ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಅಕ್ರಮ ಚಟುವಟಿಕೆ ಆರೋಪದಡಿ ಸದ್ಯ ಜಾರಿ ನಿರ್ದೇಶನಾಲಯದ (ಇ ಡಿ) ವಶದಲ್ಲಿರುವ ವೀರೇಂದ್ರ ಪಪ್ಪಿ ಅವರ ಕಸ್ಟಡಿ ಅವಧಿ ಗುರುವಾರಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ಮಧ್ಯಾಹ್ನ ಹಾಜರುಪಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಚಾರಣೆ ವೇಳೆ ಇ ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಐ ಎಸ್‌ ಪ್ರಮೋದ್‌ ಚಂದ್ರ ಅವರು “ಆರೋಪಿ ವೀರೇಂದ್ರ ಅವರ ಕಸ್ಟಡಿ ಅವಧಿಯನ್ನು ಪುನಾ 15 ದಿನಗಳ ಕಾಲ ಮುಂದುವರಿಸಿ ಆದೇಶಿಸಬೇಕು” ಎಂದು ಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಈ ವೇಳೆ ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಆರೋಪಿಯನ್ನು ಮತ್ತೆ ವಶಕ್ಕೆ ನೀಡುವಂತೆ ಇ.ಡಿ ಸಲ್ಲಿಸಿದ ಮನವಿ ಪುರಸ್ಕರಿಸಿದ ನ್ಯಾಯಾಲಯ, ನಾಲ್ಕು ದಿನಗಳ ಕಾಲ ಪಪ್ಪಿ ಅವರನ್ನು ವಶಕ್ಕೆ ನೀಡಿತು.

“ನಮಗೆ ಲಭ್ಯವಿರುವ ಡಿಜಿಟಲ್‌ ಸಾಕ್ಷ್ಯ ಮತ್ತು ವೆಬ್‌ಸೈಟ್‌ಗಳಲ್ಲಿ ದೊರಕುತ್ತಿರುವ ಬೆಟ್ಟಿಂಗ್‌ ಪುರಾವೆಗಳ ಬಗ್ಗೆ ವಿವರಣೆ ಪಡೆಯಲು ಆರೋಪಿಯನ್ನು ಮುಖಾಮುಖಿಯಾಗಿ ಇರಿಸಿಕೊಂಡು ವಿಚಾರಣೆ ಮಾಡಬೇಕಿದೆ. ಆದ್ದರಿಂದ, ಕಸ್ಟಡಿ ಅವಧಿ ವಿಸ್ತರಿಸಬೇಕು” ಎಂದು ಮನವಿ ಮಾಡಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವೀರೇಂದ್ರ ಪರ ವಾದಿಸಿದ ಹಿರಿಯ ವಕೀಲರಾದ ಎಚ್‌ ಎಸ್‌ ಚಂದ್ರಮೌಳಿ ಮತ್ತು ಕಿರಣ್ ಜವಳಿ ಅವರು “ಈಗಾಗಲೇ ವೀರೇಂದ್ರ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದಾರೆ. ಹೀಗಿರುವಾಗ ಅವರನ್ನು ಮತ್ತೆ ಕಸ್ಟಡಿಗೆ ಕೇಳುವುದು ಉಚಿತವಲ್ಲ” ಎಂದು ಪ್ರತಿಪಾದಿಸಿದರು. ಅಂತಿಮವಾಗಿ ನ್ಯಾಯಾಧೀಶರು ಆರೋಪಿಯನ್ನು ಮತ್ತೆ ನಾಲ್ಕು ದಿನಗಳ ಕಾಲ ಇ ಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.

ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್‌ಗಳನ್ನು ನಡೆಸಿ ಬಹುಕೋಟಿ ಹಣ ಗಳಿಸಿರುವ ಬಗ್ಗೆ ಶಾಸಕ ವೀರೇಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಆ.23 ರಂದು ವೀರೇಂದ್ರ ಅವರನ್ನು ಇ.ಡಿ ಬಂಧಿಸಿತ್ತು. ಇದಕ್ಕೂ ಮುನ್ನ ವೀರೇಂದ್ರ ಅವರ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳನ್ನು ಇ.ಡಿ ಶೋಧಿಸಿತ್ತು. ಈ ವೇಳೆ ಐಷಾರಾಮಿ ಕಾರುಗಳು, ಕೆ.ಜಿ. ಗಟ್ಟಲೆ ಚಿನ್ನ ಹಾಗೂ ಕೋಟ್ಯಂತರ ರು. ನಗದು ಜಪ್ತಿಯಾಗಿತ್ತು. ಬೆಟ್ಟಿಂಗ್ ಆ್ಯಪ್‌ಗಳಿಂದ ಕಡಿಮೆ ಅವಧಿಯಲ್ಲಿ ಸುಮಾರು 2000 ಕೋಟಿ ರು. ಗಳಿಸಿದ್ದಾರೆ ಎಂದು ತನಿಖೆ ವೇಳೆ ಪತ್ತೆಯಾಗಿರುವುದಾಗಿ ಇ.ಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...