ಸೌಜನ್ಯ ಹತ್ಯೆ & ನಿಗೂಢ ಸಾವುಗಳ ನ್ಯಾಯಕ್ಕಾಗಿ ಒತ್ತಾಯಿಸಿ ಆನ್‌ಲೈನ್‌ ಸಹಿ ಸಂಗ್ರಹ ಅಭಿಯಾನ

Date:

ಸೌಜನ್ಯ ಹತ್ಯೆ ಮತ್ತು ಧರ್ಮಸ್ಥಳದಲ್ಲಿ ದಶಕಗಳಿಂದ ಆದ ನಿಗೂಢ ಸಾವುಗಳ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಆನ್‌ಲೈನ್‌ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ.

- Advertisement -

ಆನ್‌ಲೈನ್‌ ಸಹಿ ಸಂಗ್ರಹ ಅಭಿಯಾನಕ್ಕೆ ಬಹುಭಾಷಾ ನಟ ಪ್ರಕಾಶ್‌ ರೈ ಬೆಂಬಲ ಘೋಷಿಸಿದ್ದಾರೆ. “ಈ ಹೋರಾಟದಲ್ಲಿ ನಾನೂ ಭಾಗಿಯಾಗಿದ್ದೇನೆ. ನೀವೂ ಭಾಗಿಯಾಗಿ” ಎಂದು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಅಭಿಯಾನದಲ್ಲಿ ಒಂದು ಲಕ್ಷ ಸಹಿ ಸಂಗ್ರಹ ಮಾಡುವ ಗುರಿ ಹೊಂದಲಾಗಿದೆ. ಸೌಜನ್ಯ ಹತ್ಯೆ ಮತ್ತು ಧರ್ಮಸ್ಥಳದಲ್ಲಿ ದಶಕಗಳಿಂದ ಆದ ನಿಗೂಢ ಸಾವುಗಳ ಸುಪ್ರೀಂ ಕೋರ್ಟ್​​ನ ಹಾಲಿ, ನಿವೃತ್ತ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್​ಐಟಿ ತನಿಖೆ ಆಗಬೇಕು. ಕೋರ್ಟ್‌ ತೀರ್ಪಿನಲ್ಲೇ ಸ್ಪಷ್ಟವಾಗಿ ಉಲ್ಲೇಖವಾಗಿರುವಂತೆ, ‘ತನಿಖೆಯನ್ನು ಹಾಳು ಮಾಡಿದ ಅಧಿಕಾರಿಗಳ ಮೇಲೆ ಕ್ರಮ’ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ.

‘ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಮೇಲೆ 2012ರಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ’ ಎಂಬ ಆರೋಪದ ಈ ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪ್ರಾಥಮಿಕವಾಗಿ ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2012ರ ನವೆಂಬರ್ 6ರಂದು ಸಿಐಡಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸರ್ಕಾರ ಆದೇಶಿಸಿತ್ತು. ಸಿಬಿಐ, ಕಾರ್ಕಳದ ಸಂತೋಷ್ ರಾವ್ ಆರೋಪಿ ಎಂದು ಗುರುತಿಸಿತ್ತು. 2023ರ ಜುಲೈ 16ರಂದು ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್ ಖುಲಾಸೆಗೊಳಿಸಿತ್ತು.

ಸೌಜನ್ಯ ಪ್ರಕರಣ ಮತ್ತೆ ಈಗ ಮುನ್ನೆಲೆಗೆ ಬಂದಿದೆ. ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ ಮಾಡಿದ ಸಾಕ್ಷಿದಾರ ಸಾಕ್ಷಿ ಹೇಳಲು ಮುಂದೆ ಬಂದಿದ್ದಾನೆ. ಈಗಾಗಲೇ ನ್ಯಾಯಾಲಯಕ್ಕೆ ಪೊಲೀಸ್‌ ರಕ್ಷಣೆಯಲ್ಲಿ ಹಾಜರಾಗಿ ತನ್ನ ಅಭಿಪ್ರಾಯ ದಾಖಲಿಸಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...