ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಡೋಂಗಿಗಳು, ಧರ್ಮಾಂಧರು: ಸಿಎಂ

Date:

Advertisements

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ಸೂಕ್ತವಾಗಿದೆ. ಇದನ್ನು ವಿರೋಧಿಸುತ್ತಿರುವವರು ಡೋಂಗಿಗಳು, ಧರ್ಮಾಂಧರು ಹಾಗೂ ಇತಿಹಾಸದ ಅರಿವಿಲ್ಲದವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸುರು ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸಕ್ಕೆಂದು ಭಾನುವಾರ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ಉದ್ಘಾಟಕರ ಆಯ್ಕೆ ಅಧಿಕಾರವನ್ನು ಉನ್ನತ ಮಟ್ಟದ ಸಮಿತಿ ನನಗೆ ಕೊಟ್ಟಿತ್ತು. ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಅವರನ್ನು ನಾನು ಆಯ್ಕೆ ಮಾಡಿದ್ದೇನೆ. ಹಿಂದೆ ಮುಸ್ಲಿಮರೇ ಆದ ಕವಿ ಕೆ.ಎಸ್.ನಿಸಾರ್ ಅಹಮದ್‌ ಉದ್ಘಾಟಿಸಿದ್ದರು. ದಸರಾ ನಾಡಹಬ್ಬ ಹಾಗೂ ಸಾಂಸ್ಕೃತಿಕ ಹಬ್ಬ. ಇದನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕು ಎಂದೇನಿಲ್ಲ. ಹಿಂದೆ ಮಹಾರಾಜರ ಆಳ್ವಿಕೆ ಇಲ್ಲದಿರುವಾಗ ಹೈದರ್‌ ಆಲಿ, ಟಿಪ್ಪು ಸುಲ್ತಾನ್‌ ನಡೆಸಿರಲಿಲ್ಲವೇ? ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದಾದ ವಿಜೃಂಭಣೆಯಿಂದ ಮಾಡುತ್ತಿರಲಿಲ್ಲವೇ? ಇದು ಧರ್ಮಾತೀತ, ಜಾತ್ಯತೀತವಾದ ಹಬ್ಬ. ಎಲ್ಲ ಧರ್ಮದವರೂ ಆಚರಿಸುತ್ತಾರೆ‌’ ಎಂದು ಪ್ರತಿಪಾದಿಸಿದರು.

‘ಕರ್ನಾಟಕದಲ್ಲಿ ಬೂಕರ್‌ ಪ್ರಶಸ್ತಿ ಪುರಸ್ಕೃತರು ಬಹಳ ಕಡಿಮೆ. ಹೀಗಾಗಿ, ಬಾನು ಅವರಿಗೆ ಅವಕಾಶ ಕೊಟ್ಟಿದ್ದೇವೆ. ಇದನ್ನು ಕೆಲವು ಧರ್ಮಾಂಧರು ಮಾತ್ರ ವಿರೋಧಿಸುತ್ತಿದ್ದಾರೆ. ಅಂಥವರು ಇತಿಹಾಸ ತಿಳಿದುಕೊಳ್ಳಲಿ’ ಎಂದು ‍ಪ್ರತಿಕ್ರಿಯಿಸಿದರು.
‘ಬಾನು ಅವರು ಹಿಂದೆ ಮಾಡಿದ್ದ ಭಾಷಣಕ್ಕೂ– ಈಗ ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೂ ಏನು ಸಂಬಂಧ? ಕನ್ನಡಾಂಬೆಯ ಬಗ್ಗೆ ಗೌರವವಿಲ್ಲದೇ ಕನ್ನಡದಲ್ಲಿ ಬರೆಯುತ್ತಿದ್ದಾರೆಯೇ? ಅವರು ಸಾಹಿತ್ಯ ರಚಿಸಿರುವುದು ಕನ್ನಡದಲ್ಲಿಯೇ ಅಲ್ಲವೇ? ‘ಎದೆಯ ಹಣತೆ’ ಯಾವ ಭಾಷೆಯಲ್ಲಿದೆ? ಕನ್ನಡದ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದಿದ್ದರೆ ಕನ್ನಡದಲ್ಲಿ ಬರೆಯಲು ಸಾಧ್ಯವೇ?’ ಎಂದು ಕೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

‘ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆ, ಕುಂಟು ನೆಪ ಹುಡುಕುತ್ತಿದ್ದಾರೆ’ ಎಂದು ಟೀಕಿಸಿದರು.

‘ದನದ ಮಾಂಸ ತಿಂದು ಬಂದು ದಸರಾ ಉದ್ಘಾಟಿಸಿ ಬಿಡುತ್ತಾರೇನೋ? ಎಂಬಂತಹ ಹೇಳಿಕೆಗಳನ್ನು ಡೋಂಗಿಗಳಷ್ಟೆ ನೀಡಲು ಸಾಧ್ಯ. ರಾಜಕೀಯಕ್ಕಾಗಿ ಮಾತನಾಡುವವರಿಗೆ ಉತ್ತರ ಕೊಡುವುದಿಲ್ಲ’ ಎಂದರು.

‘ಬೂಕರ್ ಪ್ರಶಸ್ತಿ ಹಂಚಿಕೊಂಡಿರುವ ಅನುವಾದಕಿ ದೀಪಾ ಭಾಸ್ತಿ ಅವರನ್ನೂ ಉದ್ಘಾಟನೆಗೆ ಆಹ್ವಾನಿಸಬೇಕಿತ್ತು’ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ದಸರೆಯನ್ನು ಇಬ್ಬರು ಉದ್ಘಾಟಿಸಲು ಆಗುತ್ತದೆಯೇ? ನಮ್ಮ ಸರ್ಕಾರ ಈಗಾಗಲೇ ಇಬ್ಬರಿಗೂ ತಲಾ ₹ 10 ಲಕ್ಷ ನೀಡಿ ಗೌರವ ಸಲ್ಲಿಸಿದೆ’ ಎಂದು ಹೇಳಿದರು.

ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮದ್ ಖಾನ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್‌, ಕಾಂಗ್ರೆಸ್‌ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್, ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ, ಮುಖಂಡ ಅಜೀಜ್‌ಉಲ್ಲಾ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X