ಗೃಹಲಕ್ಷ್ಮಿಗೆ ಬಯೋಮೆಟ್ರಿಕ್ ಕಡ್ಡಾಯ: ‘ಗ್ಯಾರಂಟಿ’ ಕೈಬಿಡುವ ಹುನ್ನಾರ ಎಂದ ವಿಪಕ್ಷಗಳು

Date:

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಿರುವುದು ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಸರ್ಕಾರ ಮೃತರನ್ನು ಫಲಾನುಭವಿ ಪಟ್ಟಿಯಿಂದ ಕೈಬಿಡಲು ಈ ಕ್ರಮ ಅಗತ್ಯ ಎಂದು ಹೇಳುತ್ತಿದೆ. ಇನ್ನೊಂದೆಡೆ ವಿಪಕ್ಷಗಳು ‘ಗ್ಯಾರಂಟಿ’ ಯೋಜನೆಯನ್ನು ಕೈಬಿಡುವ ಹುನ್ನಾರ ಎಂದು ದೂರುತ್ತಿದೆ.

- Advertisement -

ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರಿಗೆ ಸಹಾಯವಾಗಿರುವ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿಯಲ್ಲಿ ಮಹಿಳೆಯರು ಮಾಸಿಕ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯ ಪಡೆಯುತ್ತಿದ್ದಾರೆ. ಯೋಜನೆಯ ಹಣವು ಮಧ್ಯವರ್ತಿಗಳಿಲ್ಲದೆ ನೇರವಾಗಿ ಮಹಿಳೆಯ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಇದು ಮಹಿಳೆಯರು ದೈನಂದಿನ ಗೃಹಬಳಕೆಯ ಖರ್ಚುಗಳನ್ನು ನಿರ್ವಹಿಸಲು ಸಹಕಾರಿಯಾಗಿದೆ ಎಂದು ಲೋಕನೀತಿ-ಸಿಎಸ್‌ಡಿಸಿ ಸಮೀಕ್ಷೆಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನು ಓದಿದ್ದೀರಾ? ಗ್ಯಾರಂಟಿ vs ಸರ್ಕಾರಿ ಉದ್ಯೋಗ: ಹುಸಿ ಕಥನಕ್ಕೆ ಬಲಿಯಾಗುತ್ತಿದ್ದಾರೆಯೇ ಉದ್ಯೋಗಕಾಂಕ್ಷಿಗಳು?

ಗ್ಯಾರಂಟಿಗಳ ಮೂಲಕವೇ ಜನರ ಗಮನ ಸೆಳೆದ ಕಾಂಗ್ರೆಸ್ ಸರ್ಕಾರ ಈಗ ತಮ್ಮ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ನಿಧಾನವಾಗಿ ಕೈಬಿಡಲು ಮುಂದಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅದರ ಭಾಗವೇ ಗೃಹಲಕ್ಷ್ಮಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಿರುವುದು ಎಂದು ದೂರಲಾಗುತ್ತಿದೆ.

ಆದರೆ ಸರ್ಕಾರ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ. “ಈಗಾಗಲೇ ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗುತ್ತಿದೆ. ಇದನ್ನು ತಡೆಯುವುದು ಸರ್ಕಾರದ ಮುಖ್ಯ ಉದ್ದೇಶ. ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆಯುತ್ತಿರುವುದನ್ನು ಪತ್ತೆ ಹಚ್ಚಿ, ಕೇವಲ ಅರ್ಹ ಮತ್ತು ಜೀವಂತವಾಗಿರುವ ಮಹಿಳೆಯರಿಗೆ ಮಾತ್ರ ಯೋಜನೆಯ ಲಾಭ ಸಿಗುವಂತೆ ಮಾಡಲು ಬಯೋಮೆಟ್ರಿಕ್ (ಇ-ಕೆವೈಸಿ) ಪ್ರಕ್ರಿಯೆ ನಡೆಸಲಾಗುತ್ತಿದೆ” ಎಂದು ಸರ್ಕಾರ ಹೇಳಿದೆ.

ಈ ನಡುವೆ ವಿಪಕ್ಷಗಳು ಸರ್ಕಾರ ‘ಗ್ಯಾರಂಟಿ’ ಕೈಬಿಡುವ ಹುನ್ನಾರ ನಡೆಸುತ್ತಿದೆ ಎಂದು ದೂರಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸರ್ಕಾರದ ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. “ಮೃತರನ್ನು ಕೈಬಿಡುವ ನೆಪದಲ್ಲಿ ಸರ್ಕಾರ ‘ವಿಶೇಷ ಅಭಿಯಾನ’ ನಡೆಸಿ, ಲಕ್ಷಾಂತರ ಬಡ ಮಹಿಳೆಯರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲು ಸಂಚು ರೂಪಿಸಿದೆ. ರ್ಕಾರದ ಬಳಿ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಬಯೋಮೆಟ್ರಿಕ್, ಸರ್ವರ್ ಸಮಸ್ಯೆ, ತಾಂತ್ರಿಕ ದೋಷಗಳ ಹೆಸರಿನಲ್ಲಿ ಫಲಾನುಭವಿಗಳ ಸಂಖ್ಯೆಯನ್ನು ಕಡಿತಗೊಳಿಸಿ ಯೋಜನೆಯನ್ನೇ ಹಂತಹಂತವಾಗಿ ನಿಲ್ಲಿಸಲು ಸರ್ಕಾರ ನೋಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಗೃಹಜ್ಯೋತಿ ಯೋಜನೆ | ಗ್ಯಾರಂಟಿ ಯೋಜನೆ ಲಾಭ ಪಡೆಯುವ ಕುಟುಂಬಗಳೆಷ್ಟು ಗೊತ್ತೇ?

ಆದರೆ ಗ್ಯಾರಂಟಿ ಯೋಜನೆ ಆರಂಭಿಸುವಾಗಲೇ ಅದನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ ನಾಯಕರು ಈಗ ಗ್ಯಾರಂಟಿ ಪರವಾಗಿ ಮಾತನಾಡುತ್ತಿರುವುದೇ ಎಂದು ಕಾಂಗ್ರೆಸ್ ನಾಯಕರುಗಳು ಪ್ರಶ್ನಿಸುತ್ತಿದ್ದಾರೆ. ಜತೆಗೆ ಗ್ಯಾರಂಟಿಯಿಂದಾಗಿ ಸರ್ಕಾರಕ್ಕೆ ಯಾವುದೇ ಹೊರೆಯಾಗಿಲ್ಲ ಎಂದಿದೆ. ಅಷ್ಟಕ್ಕೂ ₹1,21,598 ಕೋಟಿ ದೊಡ್ಡ ಮೊತ್ತವೇನಲ್ಲ. ಗ್ಯಾರಂಟಿಗೆ ನೀಡಿದ ಹಣ ನಮ್ಮ ಆರ್ಥಿಕತೆಗೆಯೇ ಸಹಕಾರಿ ಎಂಬುದು ಪ್ರಜ್ಞಾವಂತ ಆರ್ಥಿಕ ತಜ್ಞರುಗಳು ಹೇಳುವ ಮಾತು.

ಇವೆಲ್ಲವುದರ ನಡುವೆ ಸದ್ಯಕ್ಕೆ ಸರ್ಕಾರ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಗ್ರಾಮೀಣ ಭಾಗದ ಮಹಿಳೆಯರಿಗೆ ಬಯೋಮೆಟ್ರಿಕ್ ಮಾಡಿಸುವುದು ದೊಡ್ಡ ಸವಾಲಾಗಿ ಪರಿಣಮಿಸುವ ಸಾಧ್ಯತೆಯಿದೆ. ಸರ್ವರ್ ಸಮಸ್ಯೆ ಹಾಗೂ ಬ್ಯಾಂಕ್ ಲಿಂಕ್ ಲೋಪಗಳಿಂದಾಗಿ ನಿಜವಾದ ಫಲಾನುಭವಿಗಳೂ ತೊಂದರೆ ಅನುಭವಿಸಬಾರದು ಎಂಬುದು ಜನಪರ ಹೋರಾಟಗಾರರ ಆಶಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700 ಕೋಟಿ ನಾಮ!

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ...