ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅನ್ನು ಎದುರಿಸಲು ಶಕ್ತಿಯಿಲ್ಲ: ಸಿಎಂ ಡಿ ಕೆ ಶಿವಕುಮಾರ್

Date:

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಅವರು ಭಾನುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸಚಿವ ನಾಗೇಂದ್ರ ಅವರ ರಾಜೀನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ. ಒಂದು ನೋಟೀಸ್ ಕೂಡ ಕೊಡದೇ ಅಧಿವೇಶನದ ಕಾರ್ಯಕಲಾಪಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಧರಣಿ ಮಾಡುವುದು ತಪ್ಪಲ್ಲ. ಆದರೆ ನೋಟೀಸು ನೀಡಿ ಚರ್ಚೆ ನಡೆಸಲಿ. ಸಚಿವರ ರಾಜೀನಾಮೆ ಏಕೆ ನೀಡಬೇಕು ಎಂಬುದನ್ನು ಚರ್ಚೆ ಮಾಡಲು ಪ್ರತಿಪಕ್ಷಗಳಿಗೆ ತಾಳ್ಮೆ ಇಲ್ಲ” ಎಂದರು.

ಇದನ್ನೂ ಓದಿ: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

“ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ. ಮಾಧ್ಯಮದವರು ದೇಶದ ಯಾವ ಸಚಿವರ ಹಾಗೂ ಯಾವ ಮುಖ್ಯಮಂತ್ರಿಗಳ ಮೇಲೆ ಎಷ್ಟು ಮೊಕದ್ದಮೆಗಳಿವೆ ಎಂಬ ದಾಖಲಾತಿಗಳೊಂದಿಗೆ ಪ್ರಶ್ನಿಸಬೇಕು” ಎಂದರು.

“ಪ್ರತಿಪಕ್ಷಗಳು ಅಂತಹ ಎಷ್ಟು ಸಚಿವರ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಯನ್ನು ಕೇಳುತ್ತಿದ್ದಾರೆ ಎಂಬುದನ್ನು ಮಾಧ್ಯಮಗಳೂ ಪರಿಶೀಲಿಸಬೇಕು. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 15 ಪರಿಶಿಷ್ಟ ವರ್ಗದ ಶಾಸಕರು ಆಯ್ಕೆಯಾಗಿದ್ದು , ಈ ಬಗ್ಗೆ ಅವರಿಗೆ ಮತ್ಸರವಿದೆ. ಅವರ ಪಕ್ಷದಲ್ಲಿ ಯಾವುದೇ ಪರಿಶಿಷ್ಟ ವರ್ಗದ ನಾಯಕರು ಹೊರಹೊಮ್ಮಲಿಲ್ಲ ಎಂಬ ಅಸಮಾಧಾನವಿರುವ ಕಾರಣ, ಈ ರೀತಿಯ ಪ್ರತಿಭಟನೆಗೆ ಮುಂದಾಗಿದ್ದಾರೆ” ಎಂದು ದೂರಿದರು.

ಉದ್ಯಮಿ ಅದಾನಿ: ಸೌಜನ್ಯದ ಭೇಟಿ

ಭಾನುವಾರ ಉದ್ಯಮಿ ಗೌತಮ್ ಅದಾನಿಯವರು ಮುಖ್ಯಮಂತ್ರಿಗಳನ್ನು ಭೇಟಿಯಾದ ಬಗ್ಗೆ ಮಾಧ್ಯದವರಿಗೆ ಪ್ರತಿಕ್ರಿಯೆ ನೀಡಿ, ನಾನು ಮುಖ್ಯಮಂತ್ರಿಯಾದ ನಂತರ ಉದ್ಯಮಿ ಗೌತಮ್ ಅದಾನಿಯವರು ಸೌಜನ್ಯದ ಭೇಟಿ ನೀಡಿ ಮಾತುಕತೆ ನಡೆಸಿದರು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...