ಕಳೆದ ವರ್ಷ ಜೂನ್‌ನಲ್ಲಿ ಮುಂಗಾರು ಮಳೆ ಕೈಕೊಟ್ಟಾಗ ಶುರುವಾದ ಬರಕ್ಕೆ 7 ತಿಂಗಳು ಕಾಲ ಕೊಡಲೋ ಬೇಡವೋ ಎಂದು ಮೀನ-ಮೇಷ ಎಣಿಸಿ ಕಡೆಗೆ ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ’ ಕೇವಲ 105 ಕೋಟಿ ರೂ. ಬಿಡುಗಡೆ ಮಾಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ವಿರೋಧ ಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಕಂದಾಯ ಸಚಿವನಾಗಿದ್ದಾಗ 2022 ನೇ ಸಾಲಿನಲ್ಲಿ 13,09,421 ಹೆಕ್ಟೇರ್ ಕೃಷಿ ಜಮೀನಿನಲ್ಲಿ ಬೆಳೆ ಹಾನಿಯಾಗಿತ್ತು. ಆಗ 14.62 ಲಕ್ಷಕ್ಕೂ ಹೆಚ್ಚು ರೈತರಿಗೆ 2031.15 ಕೋಟಿ ರೂ. ನೀಡಲಾಯಿತು ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್ʼ ಮಕ್ಕಳೇ ಕೊಡುವಂತಾಗಬೇಕು
ಮಳೆಯಾಶ್ರಿತ ಜಮೀನಿಗೆ ಹೆಕ್ಟೇರ್‌ಗೆ 6,800 ರೂ. ಮಾರ್ಗಸೂಚಿ ದರವಿದ್ದು, ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 6,800 ರೂ. ಸೇರಿಸಿ, ಒಟ್ಟು 13,600 ರೂ. ನೀಡಲಾಯಿತು. ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 13,500 ರೂ. ಮಾರ್ಗಸೂಚಿ ದರವಿದ್ದು, ಅದಕ್ಕೆ ರಾಜ್ಯ ಸರ್ಕಾರದಿಂದ 11,500 ರೂ. ಸೇರಿಸಿ ಒಟ್ಟು 25,000 ರೂ. ನೀಡಲಾಯಿತು. ಬಹುವಾರ್ಷಿಕ ಬೆಳೆ ಜಮೀನಿಗೆ 18,000 ರೂ. ಮಾರ್ಗಸೂಚಿ ದರವಿದ್ದು, ರಾಜ್ಯ ಸರ್ಕಾರದಿಂದ 10,000 ರೂ. ಸೇರಿಸಿ ಒಟ್ಟು 28,000 ರೂ. ನೀಡಲಾಯಿತು ಎಂದು ಆರ್ ಅಶೋಕ್ ಹೇಳಿದರು.
ಆದರೆ ಸಿದ್ದರಾಮಯ್ಯನವರ ಸರ್ಕಾರ ಕೇವಲ 105 ಕೋಟಿ ರೂ. ನೀಡಿ ರೈತರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿದೆ ವಿಪಕ್ಷ ನಾಯಕ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಅಧಿಕಾರದಲ್ಲಿ ಇದ್ದಾಗ,,,ರೈತರ ನೆನಪಾಗಲಿಲ್ಲ,,, ಈಗಲೂ ತಪ್ಪೇನಿಲ್ಲ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ರಾಜ್ಯದ ಬಾಕಿ ಇರುವ ಜಿ ಎಸ್ ಟಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ,,,, ಒತ್ತಾಯ ಮಾಡುವಿರಾ,,, ಧೈರ್ಯ ಇದ್ದರೆ,,,, ಅವರು ಚುನಾವಣೆ ಸಮಯದಲ್ಲಿ ರೋಡ್ ಶೋ ಮಾಡುವಾಗ ಬ್ಯಾರಿಕೇಡ್ ಹಿಂದೆ ನಿಂತು ಜೋತು ಮುಖ ಹಾಕಿಕೊಂಡು ನಿಂತಿರುವುದು ರಾಜ್ಯದ ಜನ ನೋಡಿ,,, ನಿಮ್ಮಿಂದ ರಾಜ್ಯದ ಹಿತಾಸಕ್ತಿ ಗೋವಿಂದ ಅಂತಾ ಗೊತ್ತಾಗಿಯೇ ನಿಮಗೆ ವಿಶ್ರಾಂತಿ ಕೊಟ್ಟರು