ಮುಂಗಾರಿನಲ್ಲಿ ಬಂದ ಬರಕ್ಕೆ ಸಂಕ್ರಾಂತಿಯಲ್ಲಿ ಬಿಡಿಗಾಸು ಪರಿಹಾರ: ಆರ್‌ ಅಶೋಕ್

Date:

ಕಳೆದ ವರ್ಷ ಜೂನ್‌ನಲ್ಲಿ ಮುಂಗಾರು ಮಳೆ ಕೈಕೊಟ್ಟಾಗ ಶುರುವಾದ ಬರಕ್ಕೆ 7 ತಿಂಗಳು ಕಾಲ ಕೊಡಲೋ ಬೇಡವೋ ಎಂದು ಮೀನ-ಮೇಷ ಎಣಿಸಿ ಕಡೆಗೆ ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ’ ಕೇವಲ 105 ಕೋಟಿ ರೂ. ಬಿಡುಗಡೆ ಮಾಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ವಿರೋಧ ಪಕ್ಷ ನಾಯಕ ಆರ್‌ ಅಶೋಕ್ ಹೇಳಿದ್ದಾರೆ.

- Advertisement -

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಾನು ಕಂದಾಯ ಸಚಿವನಾಗಿದ್ದಾಗ 2022 ನೇ ಸಾಲಿನಲ್ಲಿ 13,09,421 ಹೆಕ್ಟೇರ್‌ ಕೃಷಿ ಜಮೀನಿನಲ್ಲಿ ಬೆಳೆ ಹಾನಿಯಾಗಿತ್ತು. ಆಗ 14.62 ಲಕ್ಷಕ್ಕೂ ಹೆಚ್ಚು ರೈತರಿಗೆ 2031.15 ಕೋಟಿ ರೂ. ನೀಡಲಾಯಿತು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಮಳೆಯಾಶ್ರಿತ ಜಮೀನಿಗೆ ಹೆಕ್ಟೇರ್‌ಗೆ 6,800 ರೂ. ಮಾರ್ಗಸೂಚಿ ದರವಿದ್ದು, ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 6,800 ರೂ. ಸೇರಿಸಿ, ಒಟ್ಟು 13,600 ರೂ. ನೀಡಲಾಯಿತು. ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 13,500 ರೂ. ಮಾರ್ಗಸೂಚಿ ದರವಿದ್ದು, ಅದಕ್ಕೆ ರಾಜ್ಯ ಸರ್ಕಾರದಿಂದ 11,500 ರೂ. ಸೇರಿಸಿ ಒಟ್ಟು 25,000 ರೂ. ನೀಡಲಾಯಿತು. ಬಹುವಾರ್ಷಿಕ ಬೆಳೆ ಜಮೀನಿಗೆ 18,000 ರೂ. ಮಾರ್ಗಸೂಚಿ ದರವಿದ್ದು, ರಾಜ್ಯ ಸರ್ಕಾರದಿಂದ 10,000 ರೂ. ಸೇರಿಸಿ ಒಟ್ಟು 28,000 ರೂ. ನೀಡಲಾಯಿತು ಎಂದು ಆರ್‌ ಅಶೋಕ್ ಹೇಳಿದರು.

ಆದರೆ ಸಿದ್ದರಾಮಯ್ಯನವರ ಸರ್ಕಾರ ಕೇವಲ 105 ಕೋಟಿ ರೂ. ನೀಡಿ ರೈತರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿದೆ ವಿಪಕ್ಷ ನಾಯಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...