₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವವರಿಗೆ ಪಿಂಚಣಿ ಮುಂದುವರಿಸಲು ಆದೇಶ

Date:

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ ₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

- Advertisement -

ಈ ಬಗ್ಗೆ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು, ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದುವೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಅದನ್ನು ₹1,20,000 ಗಳಿಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿವರಣೆ : ಕುಟುಂಬ ದತ್ತಾಂಶದಿಂದ ಪಡೆದ ಮಾಹಿತಿಗಳನ್ನು ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯೊಂದಿಗೆ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್‌ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು. ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಗ್ರಾಮ ಆಡಳಿತ ಅಧಿಕಾರಿಗಳು ಸಂಯೋಜನೆ ಮೊಬೈಲ್‌ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು ₹32,000 ಕ್ಕಿಂತ ಹೆಚ್ಚಿರುವುದು ಕಂಡುಬಂದಿರುತ್ತದೆ.

23,14,544 ಮಂದಿಯ ಪೈಕಿ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಸೂಚಿಸಿದ್ದರು.

ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ಕಂದಾಯ ಇಲಾಖೆಯು ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...