ಬೆಂಗಳೂರಿಗೆ ಕುಡಿಯಲು 24 ಟಿಎಂಸಿ ಕಾವೇರಿ ನೀರು ಮೀಸಲಿರಿಸಿ ಆದೇಶ

Date:

  • ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರ ಚರ್ಚೆ: ಡಿಕೆ ಶಿವಕುಮಾರ್‌
  • ‘ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ಆದೇಶ ಪಾಲಿಸುತ್ತಿದ್ದೇವೆ’

ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಕಾವೇರಿ ನೀರನ್ನು ಮೀಸಲಾಗಿಡಲು ಮತ್ತು ಬಿಡಬ್ಲ್ಯೂಎಸ್ಎಸ್‌ಬಿ ಅದನ್ನು ಬಳಸಿಕೊಳ್ಳಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಿವಕುಮಾರ್, “2018 ರಲ್ಲಿ ಸುಪ್ರೀಂಕೋರ್ಟ್ ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 24 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ಎಂದು ನಿಗದಿ ಮಾಡಿತ್ತು. ಆದರೆ ಇದುವರೆಗೂ ಯಾರೂ ಸಹ ಈ ವಿಚಾರವಾಗಿ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಈ ಮೊದಲು ಕಡಿಮೆ ನೀರು ನಿಗದಿ ಮಾಡಲಾಗಿತ್ತು. ಈಗ ಉಳಿಕೆ 6 ಟಿಎಂಸಿ ನೀರನ್ನು ಬಳಸಿಕೊಂಡು, ಒಟ್ಟಾರೆ ಕುಡಿಯುವ ಉದ್ದೇಶಕ್ಕೆ 24 ಟಿಎಂಸಿ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

“ಪ್ರಸ್ತುತ ನಮ್ಮ ಕಾಂಗ್ರೆಸ್ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 89ನೇ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು, ಮೇಕೆದಾಟು ಅಣೆಕಟ್ಟು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರವಾಗಿ ಚರ್ಚೆ ನಡೆಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

“ಪ್ರಾಧಿಕಾರ, ಸುಪ್ರೀಂ ಕೋರ್ಟ್ ಮುಂದೆ ಮೇಕೆದಾಟು ಯೋಜನೆ ಪ್ರಾರಂಭ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡುತ್ತೇವೆ. ಸಂಕಷ್ಟದ ಸಂದರ್ಭದಲ್ಲಿ ನೀರು ಹರಿಸಲು ಈ ಯೋಜನೆ ಸಹಕಾರಿಯಾಗುತ್ತದೆ, ಅಲ್ಲದೇ ತಮಿಳುನಾಡಿಗೆ ಈ ಯೋಜನೆಯಿಂದ ಹೆಚ್ಚು ಪ್ರಯೋಜನವಿದೆ. ಕಾವೇರಿ ನೀರು ಎಷ್ಟು ಪ್ರಮಾಣ ಉಳಿದುಕೊಳ್ಳುತ್ತದೆ, ಎಷ್ಟು ಹರಿದು ಹೋಗುತ್ತದೆ, ಎಷ್ಟು ಬಳಕೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಾಧಿಕಾರದ ಮುಂದೆ ಪ್ರಾತ್ಯಕ್ಷಿಕೆ ನೀಡುವ ವೇಳೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಪ್ರಧಾನ ಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರಿಗೆ 24 ಟಿಎಂಸಿ ನೀರು ಬಳಕೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದರೆ ಎಂದು ಕೇಳಿದಾಗ “ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆ, ಸುಪ್ರೀಂ ಕೋರ್ಟ್ ಕೊಟ್ಟಿರುವ ಆದೇಶವನ್ನು ಪಾಲಿಸುತ್ತಿದ್ದೇವೆ. ಅವರು ಏನಾದರೂ ಆಕ್ಷೇಪ ವ್ಯಕ್ತಪಡಿಸಲಿ, ನಮ್ಮ ಹಕ್ಕನ್ನು ನಾವೇಕೆ ಬಿಟ್ಟು ಕೊಡಬೇಕು. ಈ ಹಿಂದೆ ನೀಡಿರುವ ಆದೇಶವನ್ನೇ ಈಗ ಪಾಲಿಸುತ್ತಿದ್ದೇವೆ. ಸುಪ್ರೀಂ ಕೋರ್ಟ್ ನೀಡಿದ ಆದೇಶಕ್ಕೆ ಜೀವ ಕೊಟ್ಟಿದ್ದೇವೆ, ಕೆಆರ್ ಎಸ್ ಅಥವಾ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಭಾಗದಲ್ಲಾದರೂ ಇಷ್ಟು ಪ್ರಮಾಣದ ನೀರನ್ನು ನಾವು ಮೀಸಲಿರಿಸುತ್ತೇವೆ” ಎಂದು ಉತ್ತರಿಸಿದರು.

ಮೇಕೆದಾಟು ವಿಚಾರವಾಗಿ ಚರ್ಚೆ ನಡೆಸಲು ದಿನಾಂಕ ನಿಗದಿಯಾಗಿದೆಯೇ ಎಂದು ಪ್ರಶ್ನಿಸಿದಾಗ, “ಮುಂದಿನ ವಾರ ಚರ್ಚೆ ಮಾಡೋಣ ಎಂದು ಪ್ರಾಧಿಕಾರ ತಿಳಿಸಿದೆ. ಅವರ ಮುಂದೆ ವಿಚಾರ ಮಂಡಿಸಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಬೆಂಗಳೂರು ಬೆಳೆಯುತ್ತಿದೆ, ಇನ್ನು ಮುಂದಿನ 20 ವರ್ಷವನ್ನು ಗಮನದಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...