371(ಜೆ) ಅಡಿ ಆದೇಶ | ಒಂದೇ ಜೇಷ್ಠತಾ ಪಟ್ಟಿ ತಯಾರಿಸಲು ಸಚಿವ ಸಂಪುಟ ಉಪಸಮಿತಿ ಸೂಚನೆ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆಯನ್ನು ತೋರಿಸುತ್ತಿಲ್ಲ ಎಂದು ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ ಮತ್ತು ಸಚಿವ ಪ್ರಿಯಾಂಕ್‌ ಆಕ್ಷೇಪಿಸಿದರು.

- Advertisement -

ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ರಚಿಸಲಾಗಿರುವ ಸಂಪುಟ ಉಪಸಮಿತಿಯ ಸಭೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಅಧಿಕಾರಿಗಳು ತಮ್ಮ ವಿಳಂಬ ಧೋರಣೆಯನ್ನು ಬದಿಗಿರಿಸಿ ಕಾರ್ಯಪ್ರವೃತ್ತರಾಗಬೇಕು. ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಬಂಧ ಚರ್ಚೆ ನಡೆಸಿ ಅವುಗಳನ್ನು ಶೀಘ್ರದಲ್ಲಿ ಜಾರಿಗೊಳಿಸಿ” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಮುಂಬಡ್ತಿ ನೀಡುವಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಜೇಷ್ಠತಾ ಪಟ್ಟಯನ್ನು ಪ್ರಕಟಿಸಲು ಸಚಿವ ಸಂಪುಟ ಉಪ ಸಮಿತಿಯು ಸಿಬ್ಬಂದಿ ಹಾಗೂ ಆಡಳಿತ ಸುಧಾರಣ ಇಲಾಖೆಗೆ ಈಗಾಗಲೆ ಸೂಚಿಸಿದ್ದು, ಅದರಂತೆ ಒಂದೇ ಜೇಷ್ಠತಾ ಪಟ್ಟಿ ಪ್ರಕಟಿಸಬೇಕು” ಎಂದರು.

“ಸಚಿವಾಲಯದ ಅಧಿಕಾರಿ ಹಾಗೂ ನೌಕರರ ಜೇಷ್ಠತೆಯನ್ನು 2014ರ ಏಪ್ರಿಲ್‌ 21ರಿಂದ ಜಾರಿಗೆ ಬರುವಂತೆ ಕಾಲ್ಪನಿಕ ಜೇಷ್ಠತೆ ಪಟ್ಟಿಯನ್ನು ಸಿದ್ಧಪಡಿಸಲು ನೀಡಲಾಗಿದ್ದ ಸೂಚನೆಗೆ ಅನುಗುಣವಾಗಿ ಸಹಾಯಕ, ಹಿರಿಯ ಸಹಾಯಕ, ಶಾಖಾಧಿಕಾರಿ, ಶೀಘ್ರಲಿಪಿಗಾರರು ಹಾಗೂ ಪತ್ರಾಂಕಿತ ಆಪ್ತ ಸಹಾಯಕ ವೃಂದದ ಅಧಿಕಾರಿ/ನೌಕರರ ಜೇಷ್ಠತೆಯನ್ನು ಮರು ನಿಗದಿಪಡಿಸಲಾಗಿದೆ” ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಅಧಿಕಾರಿಗಳು ಸಂಪುಟ ಉಪ ಸಮಿತಿಯ ಮುಂದೆ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಪೈಕಿ, 5000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, 4193 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ, ಈ ಪೈಕಿ 3837 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ನ್ಯಾಯಾಲಯದ ಮುಂದಿದ್ದು, ಅಂತಹ ಪ್ರಕರಣಗಳ ಸ್ವರೂಪ, ಪ್ರಸ್ತುತ ಸ್ಥಿತಿ ಗತಿ ಕುರಿತ ಮಾಹಿತಿ ನೀಡುವುದರ ಜೊತೆಗೆ ಅವುಗಳ ಇತ್ಯರ್ಥಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಪೂರ್ಣ ವಿವರಗಳನ್ನು ಒಂದು ವಾರದ ಒಳಗಾಗಿ ಸಂಪುಟ ಉಪ ಸಮಿತಿಗೆ ಸಲ್ಲಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿದರು.

ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ, ಕಾರಣ ಕೇಳಿ ನೋಟಿಸ್‌ ನೀಡಲು ಸೂಚಿಸಿದ ಸಚಿವರು ಅನುಪಾಲನ ವರದಿ ಸಲ್ಲಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಂಪಟ ಉಪಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌, ಸಣ್ಣ ನೀರಾವರಿ ಸಚಿವ ಬೋಸರಾಜು, ಪೌರಾಡಳಿತ ಸಚಿವ ರಹೀಂಖಾನ್ ಸಭೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...