ಜಾತಿ ಬಿಟ್ಟು ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿ ಕೆ ಶಿವಕುಮಾರ್ ಸಲಹೆ

Date:

ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

- Advertisement -

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ. ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು

“ಸಂಘಟನೆ ಬಹಳ ಮುಖ್ಯ. ಶಿಕ್ಷಣ ಇಲಾಖೆಯಲ್ಲಿ 50%ಗೂ ಹೆಚ್ಚು ಜನ ಇದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ. ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. ನನಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನನಗಿಂತ ಹೆಚ್ಚು ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಅವರು ಈಗ ಮಾಡಿರುವ ಸಾಧನೆ ನಾನು ಆ ವಯಸ್ಸಿನಲ್ಲಿ ಮಾಡಿರಲಿಲ್ಲ” ಎಂದು ಬಣ್ಣಿಸಿದರು.

“ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ಡಿಜಿಯಾಗಿ, ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ಆಡಳಿತದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ. ನೀವುಗಳು ದೂರಿನ ಪೆಟ್ಟಿಗೆಯಂತೆ ಆಗಬಾರದು. ನಿಮ್ಮ ಹಕ್ಕನ್ನು ಚಲಾಯಿಸಬೇಕು. ಹೆಣ್ಣು ಕುಟುಂಬದ ಕಣ್ಣು ಎಂದು ನಾವು ನಂಬಿದ್ದೇವೆ. ನಾವು ಎಲ್ಲೇ ಹೋದರು, ಗ್ರಾಮ ದೇವತೆ ಯಾವುದು ಎಂದು ಕೇಳುತ್ತೇವೆ. ಬೆಂಗಳೂರಿನ ಗ್ರಾಮ ದೇವತೆ ಅಣ್ಣಮ್ಮ. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ನಾಡ ದೇವತೆ ಚಾಮುಂಡೇಶ್ವರಿ ಎಂದು ಪರಿಗಣಿಸಿದ್ದೇವೆ. ಹೀಗೆ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗಿದೆ” ಎಂದು ತಿಳಿಸಿದರು.

ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಿ

“ನೀವು ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ. ಇದರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 70 ಕ್ಷೇತ್ರಗಳಲ್ಲಿ ಮಹಿಳಾ ಶಾಸಕಿಯರು ಆಯ್ಕೆಯಾಗಲಿದ್ದಾರೆ. ನಾಯಕತ್ವ ಗುಣ ಇರುವ ಸರ್ಕಾರಿ ಮಹಿಳಾ ನೌಕರರಿಗೆ ನಾವು ಟಿಕೆಟ್ ನೀಡಿ ಗೆಲ್ಲಿಸಿದ್ದೇವೆ. ಹಲವರು ಶಾಸಕಿಯರಾಗಿದ್ದಾರೆ. ಮೀಸಲಾತಿ ಬಂದ ನಂತರ ಯಾರು ನಾಯಕಿಯರಾಗುತ್ತೀರೋ ಗೊತ್ತಿಲ್ಲ” ಎಂದು ಹೇಳಿದರು.

ನಿಮ್ಮ ಬೇಡಿಕೆಯಂತೆ ಸಂಘಕ್ಕೆ ಅಗತ್ಯವಾದ ಭೂಮಿ ನೀಡಲಾಗುವುದು

“ಮಹಿಳಾ ನೌಕಕರ ಸಂಘಕ್ಕೆ ಜಾಗದ ಮನವಿ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಹಾಗೂ ನನ್ನ ಬಳಿ ಪ್ರಸ್ತಾಪ ಮಾಡಿದರು. ಸಿಎಂ ಅವರು ಜಾಗ ನೀಡಿ ಎಂದು ಮುಕ್ತವಾಗಿ ಹೇಳಿದ್ದಾರೆ. ನಿಮಗೆ ಅಗತ್ಯವಾಗಿರುವ ಜಾಗವನ್ನು ನೀಡುತ್ತೇವೆ. ಹೆಣ್ಣು ಮಗು ಕಲಿತರೆ ಒಂದು ಕುಟುಂಬ ಹಾಗೂ ಸಮಾಜವೇ ಕಲಿತಂತೆ ಎಂದು ನೆಹರೂ ಅವರು ನಮಗೆ ಸಂದೇಶ ನೀಡಿದ್ದಾರೆ. ಮಹಿಳೆಯರು ಸಹಕಾರ ನೀಡದಿದ್ದರೆ ನಮಗೆ ರಾಜಕಾರಣ ಮಾಡಲು ಸಾಧ್ಯವಾಗುವುದಿಲ್ಲ” ಎಂದು ತಿಳಿಸಿದರು.

“ಮುಂದಿನ ಒಂದು ವರ್ಷದಲ್ಲಿ ಅರಮನೆ ಮೈದಾನದಲ್ಲಿ ದೊಡ್ಡ ಮಟ್ಟದ ಮಹಿಳಾ ಸಮಾವೇಶವನ್ನು ಮಾಡಲು ನೀವು ರೂಪುರೇಷೆ ಸಿದ್ಧಮಾಡಿಕೊಳ್ಳಿ. ಅದಕ್ಕೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತಂದು ಮಹಿಳೆಯರಿಗೆ ಶಕ್ತಿ ತುಂಬಬೇಕು ಎಂದು ಹೆಚ್.ಕೆ ಪಾಟೀಲ್ ಅವರು ನನ್ನ ಬಳಿ ಹೇಳಿದ್ದಾರೆ” ಎಂದು ತಿಳಿಸಿದರು.

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ

“ನಾನು ಹಾಗೂ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಮೊದಲು ಜಾರಿಗೆ ತಂದಿದ್ದೆ, ಮಹಿಳೆಯರಿಗಾಗಿ ಘೋಷಣೆಯಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರಿ ನೌಕರರಾದರೂ ನಿಮಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆಯಲ್ಲವೇ? ಸರ್ಕಾರಿ ಮಹಿಳಾ ನೌಕರರು ಶಕ್ತಿ ಯೋಜನೆ ಮೂಲಕ ಉಚಿತ ಪ್ರಯಾಣ ಮಾಡಬಹುದಲ್ಲವೇ? ಬಡ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ ಅಲ್ಲವೇ? ನಮ್ಮ ಯೋಜನೆ ನೋಡಿ ಇಡೀ ದೇಶದಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದಾರಲ್ಲವೇ? ಹೀಗಾಗಿ ಮಹಿಳಾ ಸಬಲೀಕರಣ ವಿಚಾರದಲ್ಲಿ ನಾವು ಭದ್ರ ಅಡಿಪಾಯ ಹಾಕಿದ್ದೇವೆ. ಮಹಿಳೆಯರ ಪರವಾಗಿ ಚಿಂತನೆ ಮಾಡಿರುವ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ ಮಾತ್ರ. ಮಹಿಳೆಯರು ಉಪಕಾರ ಸ್ಮರಣೆ ಇಟ್ಟುಕೊಂಡಿರುತ್ತಾರೆ. ತಾಯಿ ಹೃದಯದವರು, ಸಹಾಯ ಮಾಡಿದವರನ್ನು ಸ್ಮರಿಸುತ್ತೀರಿ ಎಂದು ನಾವು ಮಹಿಳೆಯರಿಗಾಗಿ ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...