ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾಗಿರುವ ತುಳಸಿ ಗೌಡ ಅವರು ಇಂದು (ಡಿ.16) ಅನಾರೋಗ್ಯದಿಂದ 87 ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ತುಳಸಿ ಗೌಡ, ಸಾಲು ಸಾಲು ಗಿಡ ನೆಟ್ಟು ಪೋಷಿಸಿದ ಹಿರಿಮೆ ಇವರಿಗಿದೆ. ಪರಿಸರ ಕಾಳಜಿಯಿಂದಾಗಿ 2020 ರಲ್ಲಿ ತುಳಸಿ ಗೌಡ ಅವರು ಪದ್ಮಶ್ರೀ ಪ್ರಶಸ್ತಿಗೂ ಭಾಜನರಾಗಿದ್ದರು.
ಸಾವಿರಾರು ಮರಗಳನ್ನು ನೆಟ್ಟು ಪೋಷಿಸಿದ ಮಹಾತಾಯಿ ತುಳಸಿ ಗೌಡ ಇಹಲೋಕ ತ್ಯಜಿಸಿದ್ದಾರೆ. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕಾಂಗ್ರೆಸ್ ಒಂದು ಪಕ್ಷವಾಗುವುದು’ ಯಾವಾಗ?
ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ತುಳಸಿ ಗೌಡ ಅವರು ಅಗಲಿದ್ದಾರೆ.
ಚಿಕ್ಕ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡು ಇಬ್ಬರು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ್ದರು. ಇವರು ಅಲ್ಲಿಯೇ ಗಿಡಗಳ ಆರೈಕೆ ಪೋಷಣೆ ಮಾಡುತ್ತಾ ಇಲಾಖೆಯಿಂದ ಸಂಬಳ ಬಯಸದೇ ಸೇವೆ ರೂಪದಲ್ಲಿ ಅರಣ್ಯ ಬೆಳಸುವ ಕಾಯಕಕ್ಕೆ ಕೈಹಾಕಿದರು. ಇದಲ್ಲದೇ ಅರಣ್ಯದಲ್ಲಿ ಅಳವಿನಂಚಿನಲ್ಲಿ ಇರುವ ಹಲವು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದರು.
