ಅರಮನೆ ಟಿಡಿಆರ್‌ | ಸುಪ್ರೀಂ ಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್

Date:

ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ದೊರೆತಿದೆ.

- Advertisement -

ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15.39 ಎಕರೆಗೆ ₹3,400 ಕೋಟಿ ಮೌಲ್ಯದ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಕೂಡಲೇ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಗುರುವಾರ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದ್ದು, ಮರುಪರಿಶೀಲನಾ ಅರ್ಜಿಯ ಮುಂದಿನ ವಿಚಾರಣೆಯನ್ನು ಜುಲೈ 21ಕ್ಕೆ ಹಾಗೂ ಮುಖ್ಯ ಸಿವಿಲ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 18ಕ್ಕೆ ನಿಗದಿಪಡಿಸಿದೆ.

ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15.36 ಎಕರೆಗೆ ₹3,400 ಕೋಟಿ ಮೌಲ್ಯದ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಕೂಡಲೇ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಮೇ 22ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದರಿಂದಾಗಿ, ಟಿಡಿಆರ್ ನೀಡಿಕೆಯಿಂದ ತಪ್ಪಿಸಿಕೊಳ್ಳಲು ನಾನಾ ಕಸರತ್ತು ನಡೆಸಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಟಿಡಿಆರ್ ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಕೂಡಲೇ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೊಸದಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದು, ಗುರುವಾರ ಅರ್ಜಿ ವಿಚಾರಣೆ ನಡೆಯಿತು. ಕರ್ನಾಟಕ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ ಶಶಿ ಕಿರಣ್ ಶೆಟ್ಟಿ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ್ ವಿಚಾರಣೆಗೆ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....