ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

Date:

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌. ರಾಜ್ಯದ 177 ಬರಪೀಡಿತ ತಾಲೂಕುಗಳಲ್ಲಿ ಕೃಷಿ ಮತ್ತು ಬೆಳೆ ನಷ್ಟದಿಂದಾಗಿ ಸುಮಾರು 46,000 ಕೋಟಿ ರೂ.ಗಳ ಬೃಹತ್ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆಯಿದೆ. ಈ ತೀವ್ರ ಪರಿಸ್ಥಿತಿಯು ರಾಜ್ಯದ ಜಿಎಸ್‌ಟಿ ಸಂಗ್ರಹದ ಮೇಲೆಯೂ ನೇರ ಪರಿಣಾಮ ಬೀರಲಿದ್ದು, ತೆರಿಗೆ ಆದಾಯ ಕಡಿಮೆಯಾಗಬಹುದು ಎಂದು ಉಪಮುಖ್ಯಮಂತ್ರಿ, ಕಂದಾಯ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

- Advertisement -

ಕೇಂದ್ರದ ತಂಡದ ಭೇಟಿ ಹಾಗೂ ಪರಿಹಾರದ ಬೇಡಿಕೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಪ್ರಸ್ತುತ ದೇಶದಲ್ಲೇ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬರದಿಂದಾಗುವ ನಷ್ಟವನ್ನು ನಿವಾರಿಸಲು ರಾಜ್ಯ ಸರ್ಕಾರ ಅಗತ್ಯ ಹಣಕಾಸು ಮೀಸಲನ್ನು ಕಾಯ್ದುಕೊಳ್ಳುವುದರ ಜೊತೆಗೆ ಆದಾಯ ಹೆಚ್ಚಳಕ್ಕೆ ವಿವಿಧ ಮಾರ್ಗಗಳನ್ನು ಪರಿಶೀಲಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

“ರಾಜ್ಯ ಸರ್ಕಾರವು ಒಟ್ಟು 177 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇದರಲ್ಲಿ ಮೊದಲ ಹಂತದಲ್ಲಿ ಘೋಷಿಸಲಾದ 101 ತಾಲೂಕುಗಳಲ್ಲಿ ಪರಿಸ್ಥಿತಿ ಅಧ್ಯಯನ ಮಾಡಲು ಕೇಂದ್ರದ ವೀಕ್ಷಕರ ತಂಡಗಳು ಅಕ್ಟೋಬರ್ 3ರಿಂದ 6ರವರೆಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡಿವೆ. ಈ ತಂಡದ ಸದಸ್ಯರು ವಿವಿಧ ಜಿಲ್ಲೆಗಳ ಕೃಷಿ ಭೂಮಿಗಳಿಗೆ ಭೇಟಿ ನೀಡಿ, ರೈತರೊಂದಿಗೆ ನೇರ ಸಂವಾದ ನಡೆಸಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಎರಡನೇ ಹಂತದಲ್ಲಿ ಬರಪೀಡಿತವೆಂದು ಗುರುತಿಸಲಾದ ಉಳಿದ 77 ತಾಲೂಕುಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿಗಳು ಕೇಂದ್ರ ತಂಡಕ್ಕೆ ಮನವಿ ಮಾಡಿದ್ದಾರೆ” ಎಂದು ವಿವರಿಸಿದ್ದಾರೆ.

“ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದಿಂದ 10,000 ಕೋಟಿಯಿಂದ 11,000 ಕೋಟಿ ರೂ.ಗಳ ತುರ್ತು ಆರ್ಥಿಕ ನೆರವನ್ನು ರಾಜ್ಯ ಕೋರಿದೆ. ಕೇಂದ್ರ ತಂಡವು ನಾಳೆಯೊಳಗೆ ತಮ್ಮ ವರದಿಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದ್ದು, ಅಂತಿಮ ಮನವಿ ಪತ್ರ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ನೇತೃತ್ವದ ನಿಯೋಗವನ್ನು ದೆಹಲಿಗೆ ಕರೆದೊಯ್ದು ಪರಿಹಾರಕ್ಕಾಗಿ ಮಾತುಕತೆ ನಡೆಸಲು ಯೋಜಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...