ಪಥಸಂಚಲನ ಪಾಲಿಟಿಕ್ಸ್‌ | RSS ನಾಯಕರ ಜೊತೆ ಎಜಿ ಕಚೇರಿಯಲ್ಲಿ ನಡೆದ ಶಾಂತಿ ಸಭೆ

Date:

ಸಚಿವ ಪ್ರಿಯಾಂಕ್‌ ಖರ್ಗೆ ಕ್ಷೇತ್ರವಾದ ಚಿತ್ತಾಪುರದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ ಪಥಸಂಚಲನ ಮತ್ತು ಭೀಮ್ ಆರ್ಮಿ ಸೇರಿದಂತೆ ವಿವಿಧ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ (ನ.5) ಬೆಂಗಳೂರಿನಲ್ಲಿ ಎಜಿ ಕಚೇರಿಯಲ್ಲಿ ಶಾಂತಿ ಸಭೆ ನಡೆದಿದೆ.

- Advertisement -

ಹೈಕೋರ್ಟ್​ ಆದೇಶದ ಮೇರೆಗೆ ಶಾಂತಿ ಸಭೆ ನಡೆದಿದೆ. ಈ ವೇಳೆ ಅರ್ಜಿದಾರರು ಪ್ರಸ್ತಾವನೆ ಸಲ್ಲಿಸಿದ್ದು, ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ಕೋರಿದ್ದಾರೆ. ಪಥಸಂಚಲನ ವಿಚಾರವಾಗಿ ನಡೆದ ಎರಡನೇ ಶಾಂತಿ ಸಭೆ ಇದಾಗಿದ್ದು, ಅಕ್ಟೋಬರ್ 28ರಂದು ಕಲಬುರಗಿಯಲ್ಲಿ ನಡೆದಿದ್ದ ಮೊದಲ ಸಭೆ ವಿಫಲವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಬೆಂಗಳೂರಿನ‌ ಅಡ್ವೊಕೇಟ್ ಜನರಲ್ ಎಜಿ ಶಶಿಕಿರಣ್ ಶೆಟ್ಟಿ ಕಚೇರಿಯಲ್ಲಿ ಅರ್ಜಿದಾರ ಅಶೋಕ್ ಪಾಟೀಲ್, ಹಿರಿಯ ವಕೀಲ ಅರುಣ್ ಶ್ಯಾಮ್, ಕಡ್ಲೂರ್ ಸತ್ಯನಾರಾಯಣಾಚಾರ್ಯ, ಎಜಿ ಶಶಿಕಿರಣ್ ಶೆಟ್ಟಿ, ಕಲಬುರಗಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗಿಯಾಗಿದ್ದರು. ಅಧಿಕಾರಿಗಳು ಭಾಗಿಯಾಗಿದ್ದರು. ಇಂದಿನ ಸಭೆಯಲ್ಲಾದ ತೀರ್ಮಾನದ ವರದಿಯನ್ನ ನ.7ರಂದು ಹೈಕೋರ್ಟ್​ಗೆ ಎಜಿ ತಿಳಿಸಲಿದ್ದಾರೆ.

ಆರ್ ಎಸ್ಎಸ್ ಮುಖಂಡ ಪ್ರಹ್ಲಾದ್ ವಿಶ್ವಕರ್ಮ ಸಭೆಯಲ್ಲಿ ರೂಟ್ ಮ್ಯಾಪ್ ಬಗ್ಗೆ ಮಾಹಿತಿ, ನವೆಂಬರ್ 13 ಅಥವಾ 16 ರಂದು ಪಥಸಂಚಲನ ಮಾಡುವುದಾಗಿ ತಿಳಿಸಿದರು. ಗಣವೇಷಧಾರಿಗಳು ಮಾತ್ರ ಪಥ ಸಂಚಲದಲ್ಲಿ ಭಾಗಿಯಾಗಲಿದ್ದಾರೆ. 850 ಮಂದಿ ಮಾತ್ರ ಗಣವೇಷಧಾರಿಗಾಳು ಮಾತ್ರ ಇರಲಿದ್ದಾರೆ. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ ಮಾತ್ರ ಪಥಸಂಚಲನ ಮಾಡಲಿದ್ದೇವೆ. ಜೊತೆಗೆ ನಾಲ್ಕು ಲೈನ್ ಪಥಸಂಚಲನದ ಬದಲಿಗೆ ಮೂರು ಲೈನ್ ನಲ್ಲಿ ಹೋಗುತ್ತೇವೆ” ಎಂದು ಹೇಳಿದರು.

“ಹೊರಗಡೆ ಅವರಿಗೆ ಬರಬೇಡಿ ಎಂದು ಸೂಚನೆ ನೀಡಿದ್ದೇವೆ. ನಮಗೆ ಅವಕಾಶ ನೀಡದ ದಿನ ಬೇರೆ ಸಂಘಟನೆಗಳಿಗೆ ಅವಕಾಶ ಕೊಡಬೇಡಿ. ಫಥಸಂಚಲನದಲ್ಲಿ ಕಲಬುರ್ಗಿಯ ಆರ್ ಎಸ್ ಎಸ್ ಕಾರ್ಯಕರ್ತರಿಗೆ ಮಾತ್ರ ಅವಕಾಶ ಕೊಡಿ” ಎಂದು ಎ ಜಿ ಶಶಿಕಿರಣ್ ಶೆಟ್ಟಿ ಅವರಿಗೆ ವಿನಂತಿಸಿದರು.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನದ ವಿಚಾರವಾಗಿ ಹೈಕೋರ್ಟ್​ ಸೂಚನೆ ಮೇರೆಗೆ ಅಕ್ಟೋಬರ್ 28ರಂದು ಕಲಬುರಗಿಯಲ್ಲಿ 10 ಸಂಘಟನೆಗಳ ಜತೆ ನಡೆದ ಸಾಂತಿಸಭೆ ವಿಫಲವಾಗಿತ್ತು. ಡಿಸಿ ಫೌಜಿಯಾ, SP ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್​ಎಸ್​ಎಸ್​ ಹಾಗೂ ಭೀಮ್ ಆರ್ಮಿ ನಡುವೆ ವಾಗ್ವಾದ ನಡೆದಿದ್ದರಿಂದ ಯಾವುದೇ ನಿರ್ಧಾರ ಆಗಿರಲಲ್ಲಿಲ್ಲ. ಈ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಕೋರ್ಟ್​ ಅಂತಿಮವಾಗಿ ನವೆಂಬರ್ 5ರಂದು ಬೆಂಗಳೂರಿನ‌ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಮತ್ತೊಂದು ಶಾಂತಿ ನಡೆಸಲು ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿತ್ತು.

ಸಭೆಯಲ್ಲಿ ಶಾಂತಿ ಭಂಗ ಉಂಟಾಗಬಹುದು ಎಂಬ ಕಾರಣದಿಂದ ಹಾಗೂ ಉಳಿದ ಸಂಘಟನೆಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ, ಭೀಮ್ ಆರ್ಮಿ ಸೇರಿದಂತೆ ಇತರ 9 ಸಂಘಟನೆಗಳಿಗೂ ಆಹ್ವಾನ ನೀಡಲಾಗಿಲ್ಲ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಆರ್‌ಎಸ್‌ಎಸ್‌ ಮುಖಂಡರಿಗೆ ಮಾತ್ರ ಹಾಜರಾಗುವಂತೆ ತಿಳಿಸಲಾಗಿದೆ. ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖಂಡರ ಮತ್ತು ವಕೀಲರ ಲಿಖಿತ ಹೇಳಿಕೆಗಳನ್ನು ಎಜಿ ಮತ್ತು ಜಿಲ್ಲಾಡಳಿತ ಪಡೆದುಕೊಂಡಿದ್ದು, ನ್ಯಾಯಾಲಯಕ್ಕೆ ಸಲ್ಲಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...