ಪಿಡಿಒಗಳನ್ನು ಇನ್ಮುಂದೆ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲಾಗುವುದು: ಸಚಿವ ಪ್ರಿಯಾಂಕ್‌ ಖರ್ಗೆ

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ತನ್ನ ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸತನವನ್ನು ತುಂಬಿಕೊಳ್ಳಲಿದೆ. 2024-25ನೆ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲು ಸೇವಾ ನಿಯಮಗಳನ್ನು ರೂಪಿಸುತ್ತಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರು ಶನಿವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಖಾತೆಯನ್ನು ವಹಿಸಿಕೊಂಡ ಆರಂಭದಲ್ಲಿಯೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತಿ ಕಾರ್ಯದರ್ಶಿಗಳ ವರ್ಗಾವಣೆಗಳಲ್ಲಿ ಪಾರದರ್ಶಕತೆಯನ್ನು ತರುವ ಸಲುವಾಗಿ ಕೌನ್ಸೆಲಿಂಗ್‌ ಪದ್ಧತಿಯನ್ನು ಜಾರಿಗೆ ತರುವುದಾಗಿ ಹೇಳಿದ್ದರು. ಪೂರಕ ಚಟುವಟಿಕೆಗಳು ಆರಂಭಗೊಂಡಿದ್ದು ಈ ಸಂಬಂಧದ ಸೇವಾ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯ ಹಂತ ತಲುಪಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

“ನೌಕರರ ಹಾಗೂ ಸರ್ಕಾರದ ಹಿತದೃಷ್ಟಿಯನ್ನು ಇರಿಸಿಕೊಂಡು ಕೌನ್ಸೆಲಿಂಗ್‌ ಮಾದರಿ ವರ್ಗಾವಣೆಗಳನ್ನು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೊಳಿಸಲಾಗುವುದು, ಪಂಚಾಯತಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ತಮ್ಮ ಆದ್ಯತೆಯಾಗಿದೆ” ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ಗೆ ಯೋಗೇಶ್ವರ್ ಸೇರ್ಪಡೆ; ಕೆಪಿಸಿಸಿ ಕಚೇರಿಯಲ್ಲಿ ಗರಿಗೆದರಿದ ಚಟುವಟಿಕೆಗಳು

ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಕೊಡದ ಕಾರಣ ಮಾಜಿ ಸಚಿವ ಸಿ.ಪಿ...

ಕಾಂಗ್ರೆಸ್ ಸೇರ್ಪಡೆಗೊಂಡ ಸಿ ಪಿ ಯೋಗೇಶ್ವರ್; ಚನ್ನಪಟ್ಟಣದಿಂದ ಸ್ಪರ್ಧೆ

ದಿಢೀರ್‌ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ...

ಬಿಜೆಪಿ ಸಿ ಪಿ ಯೋಗೇಶ್ವರ್ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಮತ್ತಷ್ಟು ರಂಗೇರುತ್ತಿದೆ. ಎರಡು ದಿನಗಳ...

ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭಾರಿ ಮಳೆ: ಹವಾಮಾನ ಇಲಾಖೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ...