ಕೈ-ಕಾಲು ಕತ್ತರಿಸುವ ಭಯವಿದ್ದರೆ ಮಾತ್ರ ಜನ ಕಾನೂನು ಪಾಲಿಸುತ್ತಾರೆ: ಕರ್ನಾಟಕ ಹೈಕೋರ್ಟ್

Date:

ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ, ನಮ್ಮ ಕಾನೂನುಗಳು ಹಲ್ಲು ಕಳೆದುಕೊಂಡಿವೆ. ಅಪರಾಧ ಎಸಗುವುದು ಸುಲಭ ಎನ್ನಿಸಿಬಿಟ್ಟಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳ ರೀತಿ, ನಮ್ಮಲ್ಲಿಯೂ ಕೈ–ಕಾಲು ಕತ್ತರಿಸುವ ಕಠಿಣ ಕ್ರಮಗಳಿದ್ದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

- Advertisement -

ನ್ಯಾಯಮೂರ್ತಿಗಳು ಹಿಂಸಾತ್ಮಕ ಕ್ರಮಗಳು ಮತ್ತು ಪ್ರಜಾಪ್ರಭುತ್ವದ ಕುರಿತು ಲಘುವಾಗಿ ಮಾತನಾಡಿರುವುದು ಸಾರ್ವಜನಿಕ ಆಕ್ಷೇಪಕ್ಕೆ ಕಾರಣವಾಗಿದೆ. ನ್ಯಾಯಂಗವು ಇಂತಹ ಅಭಿಪ್ರಾಯ ವ್ಯಕ್ತಪಡಿಸುವುದು ಥರವಲ್ಲ. ಈ ಅಭಿಪ್ರಾಯವು ಹಿಂಸೆಯನ್ನು ಪ್ರಚೋದಿಸುವಂತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅತ್ಯಾಚಾರ ಆರೋಪದಲ್ಲಿ ಬಂಧಿಸಲಾಗಿರುವ ಆರೋಪಿ ಗೋಪಿ ರೆಡ್ಡಿ ಕಾರ್ತಿಕ್‌ ರೆಡ್ಡಿ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಆರ್ ನಟರಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. ಜಾಮೀನು ಅರ್ಜಿಯನ್ನು ತಿರಸ್ಕರಿಸುವಾಗ ನ್ಯಾಯಮೂರ್ತಿ ನಟರಾಜ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

“ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ತಮಗೆ ಲಭ್ಯವಿರುವ ಹಕ್ಕುಗಳನ್ನು ಜನರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಾವು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ, ಕಾನೂನು ತನ್ನ ಹಲ್ಲುಗಳನ್ನು ಕಳೆದುಕೊಂಡಿದೆ. ಅದಕ್ಕಾಗಿಯೇ, ಮಧ್ಯಪ್ರಾಚ್ಯ ದೇಶಗಳಿಗೆ ಹೋಲಿಸಿದರೆ ಇಲ್ಲಿ ಅಪರಾಧ ಎಸಗುವುದು ತುಂಬಾ ಸುಲಭವಾಗಿದೆ. ಒಂದು ವೇಳೆ, ಇಲ್ಲಿಯೂ ಕೈ ಅಥವಾ ಕಾಲು ಕತ್ತರಿಸಿದರೆ, ಬಹುಶಃ ಆಗ ಮಾತ್ರ ಜನ ಕಾನೂನನ್ನು ಪಾಲಿಸಬೇಕು ಎಂಬುದನ್ನು ಅರಿತುಕೊಳ್ಳುತ್ತಾರೆ. ನಮ್ಮಲ್ಲಿ ಪ್ರಜಾಪ್ರಭುತ್ವ ಇರುವುದರಿಂದ ಪ್ರತಿಯೊಬ್ಬರೂ ಇದನ್ನು ಲಘುವಾಗಿ ಪರಿಗಣಿಸುತ್ತಾರೆ,” ಎಂದು ಹೇಳಿದ್ದಾರೆ.

ರೆಡ್ಡಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಮೂರ್ತಿಗಳು, “ಉಪ್ಪು ತಿಂದವರು ನೀರು ಕುಡಿಯಲೇಬೇಕು. ಅವನು ಇನ್ನೊಂದು ನಾಲ್ಕೈದು ದಿನ ಜೈಲಿನಲ್ಲೇ ಇರಲಿ. ಜೈಲಿನ ವಾತಾವರಣ ಅವನಿಗೆ ರೂಢಿಯಾಗಲಿ. ಯಾರಿಗೆ ಗೊತ್ತು, ಒಂದು ವೇಳೆ ಶಿಕ್ಷೆಯಾದರೆ ನೀನು ಮತ್ತೆ ಅಲ್ಲಿಗೇ ಹೋಗಬೇಕಾಗಬಹುದು,” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಪ್ರಜಾಪ್ರಭುತ್ವ ದಮನಕ್ಕೆ ಮೋದಿ ‘SIR’ ಅಸ್ತ್ರ ಬಳಸುತ್ತಿರುವುದು ಯಾಕೆ?

ಆರೋಪಿಯ ಪರ ಹಾಜರಾಗಿದ್ದ ವಕೀಲೆ ಅಯಂತಿಕಾ ಮೊಂಡಲ್, “ಆರೋಪಿ ಕಳೆದ ಸುಮಾರು 2 ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಆತ ಯಾವುದೇ ಅಪರಾಧ ಎಸಗಿಲ್ಲ. ಈ ಆರೋಪವು ಸುಮಾರು 3 ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದ್ದಾಗಿದ್ದು, ಆತನನ್ನು ಹೀಗೆಯೇ ಬಂಧನದಲ್ಲಿಟ್ಟಿರುವುದು ಅರ್ಜಿದಾರನ ವೃತ್ತಿಪರ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ,” ಎಂದು ವಾದಿಸಿದರು.

ಪ್ರಕರಣವೇನು?

ಪ್ರಾಸಿಕ್ಯೂಷನ್ ಪ್ರಕಾರ, ದೂರುದಾರೆ ಮತ್ತು ಆರೋಪಿ ಇಬ್ಬರೂ ಮಣಿಪಾಲದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಹಪಾಠಿಗಳಾಗಿದ್ದರು. 2023ರ ಜುಲೈನಲ್ಲಿ ಸಂತ್ರಸ್ತೆಯ ಬಳಿ ಆರೋಪಿ ತನ್ನ ಪ್ರೀತಿ ವಿಚಾರ ಹೇಳಿಕೊಂಡಿದ್ದನು. ಯುವತಿ ಆತನ ಪ್ರೀತಿಯನ್ನು ಒಪ್ಪಿಕೊಂಡಿದ್ದರು. ಆದರೆ, ನಂತರ ಆತನ ನಡತೆಯ ಬಗ್ಗೆ ಅನುಮಾನಗೊಂಡು ಆತನಿಂದ ದೂರ ಸರಿದಿದ್ದರು.

2023ರ ಸೆಪ್ಟೆಂಬರ್ 12 ರಂದು ಆರೋಪಿ ತಮ್ಮ ಸಂಬಂಧದ ಬಗ್ಗೆ ಚರ್ಚಿಸಲು ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ಬರುವಂತೆ ಆಕೆಯನ್ನು ಕೇಳಿಕೊಂಡಿದ್ದನು. ಅಲ್ಲಿಗೆ ಹೋದ ನಂತರ, ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಘಟನೆಯಿಂದ ತಾನು ತೀವ್ರ ಆಘಾತ ಮತ್ತು ಖಿನ್ನತೆಗೆ ಒಳಗಾಗಿದ್ದು, ಇದಕ್ಕಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ದೂರುದಾರೆ ತಿಳಿಸಿದ್ದಾರೆ. ಆರೋಪಿ ವಿರುದ್ಧ ದೂರು ದಾಖಲಿಸಲು ಬೆಂಗಳೂರಿನ ರಾಷ್ಟ್ರೀಯ ಮಹಿಳಾ ಆಯೋಗವನ್ನು ಸಂಪರ್ಕಿಸಿದ್ದಾಗಿಯೂ ಅವರು ಹೇಳಿಕೊಂಡಿದ್ದಾರೆ.

ಯುವತಿಯ ದೂರಿನ ಆಧಾರದ ಮೇಲೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 375(a) ಮತ್ತು 376 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...