ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ; ಸರ್ಕಾರದ ಮಹತ್ವದ ನಿರ್ಧಾರ

Date:

ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕಳೆದ ಕೆಲವು ವರ್ಷಗಳಿಂದ ತೀವ್ರ ಸಂಚಲನ ಮೂಡಿಸಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮಹತ್ವದ ತೀರ್ಮಾನ ಪ್ರಕಟಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಯಾವುದೇ ಅಡೆತಡೆ ಇರುವುದಿಲ್ಲ ಮತ್ತು ಇದಕ್ಕೆ ಮುಕ್ತ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮಹತ್ವದ ಬದಲಾವಣೆಯು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದ್ದು, ವಿದ್ಯಾರ್ಥಿನಿಯರು ತಮ್ಮ ಇಷ್ಟದಂತೆ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ.

- Advertisement -

ಪೇಟ ಅಥವಾ ಟರ್ಬನ್, ಜನಿವಾರ, ಶಿವದಾರ ಮತ್ತು ರುದ್ರಾಕ್ಷಿಯನ್ನೂ ಧರಿಸಲು ಅವಕಾಶ ನೀಡಲಾಗಿದೆ. ಆದಾಗ್ಯೂ, ಹಿಂದುತ್ವ ಕೋಮುವಾದಿಗಳು ಪ್ರತಿಪಾದಿಸುವ ಕೇಸರಿ ಶಾಲು ಧರಿಸಲು ಅವಕಾಶವಿಲ್ಲ ಎಂದು ಸರ್ಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕುರಿತು ವಿವರಣೆ ನೀಡಿರುವ ಸಚಿವರು, “ಶಿಕ್ಷಣ ಎಂಬುದು ಸಮಾನತೆಯ ಸಂಕೇತವಾಗಬೇಕು ಮತ್ತು ಯಾವುದೇ ಕಾರಣಕ್ಕೂ ಧಾರ್ಮಿಕ ಆಚರಣೆ ಅಥವಾ ಬಟ್ಟೆಯ ವಿಚಾರವಾಗಿ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಸ್ಪಷ್ಟ ನಿಲುವಾಗಿದೆ” ಎಂದು ತಿಳಿಸಿದರು.

“ಈ ಹಿಂದೆ ಜಾರಿಯಲ್ಲಿದ್ದ ಹಿಜಾಬ್ ನಿಷೇಧದ ನಿರ್ಧಾರದಿಂದಾಗಿ ಅನೇಕ ಪ್ರತಿಭಾವಂತ ವಿದ್ಯಾರ್ಥಿನಿಯರು ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದ್ದರು ಅಥವಾ ಪರೀಕ್ಷೆಗಳಿಗೆ ಹಾಜರಾಗಲು ಹಿಂದೇಟು ಹಾಕಿದ್ದರು. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಸರ್ಕಾರ ಮುಂದಾಗಿದ್ದು, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಎತ್ತಿ ಹಿಡಿಯಲು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ವಿವರಿಸಿದರು.

Advertisements

ಸರ್ಕಾರದ ಈ ನೂತನ ಆದೇಶದ ಪ್ರಕಾರ, ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ತಡೆಯುವಂತಿಲ್ಲ. ಸಮವಸ್ತ್ರದ ನಿಯಮಗಳನ್ನು ಗೌರವಿಸುತ್ತಲೇ, ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿರ್ಧಾರವು ರಾಜ್ಯದ ಶೈಕ್ಷಣಿಕ ವಾತಾವರಣದಲ್ಲಿ ಹೆಚ್ಚಿನ ಒಳಗೊಳ್ಳುವಿಕೆಯನ್ನು ತರಲಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಮತ್ತೆ ಶಾಲಾ-ಕಾಲೇಜುಗಳತ್ತ ಮುಖ ಮಾಡುವಂತೆ ಮಾಡುತ್ತದೆ ಎಂಬ ಆಶಯವನ್ನು ಸರ್ಕಾರ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...