ಕರ್ನಾಟಕದ 85% ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಅಳತೆಯಲ್ಲಿ ಮೋಸ

Date:

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ಅಳತೆಯಲ್ಲಿ ಮೋಸವಾಗುತ್ತಿದೆ. ಇದನ್ನು ತಡೆಗಟ್ಟಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ.

- Advertisement -

ರಾಜ್ಯಾದ್ಯಂತ ಒಟ್ಟು 805 ಪೆಟ್ರೋಲ್ ಬಂಕ್‌ಗಳನ್ನು ಇಲಾಖೆಹಳು ಪರಿಶೀಲಿಸಿವೆ‌. ಈ ಪೈಕಿ ಬರೋಬ್ಬರಿ 768 ಪೆಟ್ರೋಲ್ ಬಂಕ್‌ಗಳಲ್ಲಿ ಅಳತೆಯ ವ್ಯತ್ಯಾಸ ಕಂಡುಬಂದಿದೆ. ವಾಹನಗಳಿಗೆ ಇಂಧನ ತುಂಬಿಸುವ ನೋಝಲ್/ಗನ್‌ಗಳನ್ನು ತಪಾಸಣೆ ಮಾಡಲಾಗಿದೆ. ತಪಾಸಣೆಗೆ ಒಳಗಾದ ಒಟ್ಟು 3,071 ಇಂಧನ ಗನ್‌ಗಳಲ್ಲಿ 2,618 ನೋಝಲ್‌ಗಳು (85.2%) ನಿಗದಿಗಿಂತ ಕಡಿಮೆ ಇಂಧನ ಪೂರೈಕೆ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಇಲಾಖೆಯ ವರದಿಯನ್ನು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ನಿಯಮಿತ ಪರಿಮಿತಿಗಿಂತ (5 ಲೀಟರ್‌ಗೆ 25 ಮಿ.ಲೀ) ಹೆಚ್ಚಿನ ಪ್ರಮಾಣದ ವ್ಯತ್ಯಾಸ ಮತ್ತು ಗ್ರಾಹಕರಿಗೆ ವಂಚನೆ ಎಸಗುತ್ತಿದ್ದ 101 ಪೆಟ್ರೋಲ್ ಬಂಕ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.‌ ಇವುಗಳಿಗೆ ಒಟ್ಟು 6.66 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್, “ಗ್ರಾಹಕರಿಗೆ ಒಂದು ತೊಟ್ಟು ಇಂಧನವೂ ನಷ್ಟವಾಗದಂತೆ ನೋಡಿಕೊಳ್ಳಲಾಗುವುದು. ವಂಚಿಸುವ ಬಂಕ್‌ಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.

2026ರ ಡಿಸೆಂಬರ್ ವೇಳೆಗೆ ರಾಜ್ಯದ ಎಲ್ಲ 5,900ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ನೋಝಲ್‌ಗಳ ಮರುಪರಿಶೀಲನೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೆಟ್ರೋಲ್ ಬಂಕ್‌ನಲ್ಲಿ ಅಳತೆಯ ಬಗ್ಗೆ ಅನುಮಾನ ಬಂದರೆ ಸ್ಥಳದಲ್ಲೇ ಪರಿಶೀಲಿಸಲು (5 ಲೀಟರ್ ಪ್ರಮಾಣಿತ ಕ್ಯಾನ್ ಬಳಸಿ) ಗ್ರಾಹಕರಿಗೆ ಹಕ್ಕಿದೆ. ಯಾವುದೇ ಅಕ್ರಮ ಕಂಡುಬಂದಲ್ಲಿ ಉಚಿತ ಸಹಾಯವಾಣಿ 1800 599 1100 ಅಥವಾ ಇಮೇಲ್ [email protected] ಮೂಲಕ ದೂರು ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...