ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಪಿಐಎಲ್

Date:

ಕಳೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್‌ನ ಉಚ್ಚಾಟಿತ ಸಂಸದ ಪ್ರಜ್ವಲ್‌ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಎಂದು ಹೇಳಿಕೆ ನೀಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

- Advertisement -

ಈ ಪಿಐಎಲ್‌ ಅನ್ನು ಆಲ್‌ ಇಂಡಿಯಾ ದಲಿತ ಆಕ್ಷನ್‌ ಕಮಿಟಿಯು ರಾಷ್ಟ್ರೀಯ ಅಧ್ಯಕ್ಷ ಚಿ ನಾ ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್‌ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ದ್ವೇಷ ಭಾಷಣ ಮಾಡಿ ಮಹಿಳೆಯರ ಘನತೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಪ್ರಜ್ವಲ್ ಲೈಂಗಿಕ ದೌರ್ಜನ್ಯ ಹಗರಣ | ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ರಾಹುಲ್ ಗಾಂಧಿ ಅವರು ಮಹಿಳೆಯರಿಗೆ ಅವಮಾನ ಮಾಡಿ ಭಾಷಣ ಮಾಡಿದ ಕಾರಣ ಬೇಷರತ್ ಕ್ಷಮೆ ಕೇಳಲು ಸೂಚಿಸಬೇಕು, ಅವರಿಗೆ ಭಾರತೀಯ ನ್ಯಾಯ ಸಂಹಿತೆಯ ಅಡಿ ದಂಡವನ್ನು ವಿಧಿಸಬೇಕು ಎಂದು ಕೂಡಾ ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ.

2024ರ ಮೇ 2ರಂದು ಲೋಕಸಭೆ ಚುನಾವಣಾ ಪ್ರಚಾರ ನಡೆಸಿದ್ದ ರಾಹುಲ್ ಗಾಂಧಿ ಅವರು ಹಾಸನದ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಪ್ರಜ್ವಲ್‌ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ, ದರ ವಿಡಿಯೋ ಮಾಡಿದ್ದಾರೆ. ಈ ರೀತಿಯ ಅತ್ಯಾಚಾರ ಮಾಡಿರುವ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ಮೋದಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.

ರಾಹುಲ್ ಗಾಂಧಿ ಈ ಹೇಳಿಕೆ ನೀಡಿ ಮಹಿಳೆಯರ, ಅದರಲ್ಲೂ ಮುಖ್ಯವಾಗಿ ಹಾಸನದ ಮಹಿಳೆಯರ ಘನತೆಗೆ ಹಾನಿ ಉಂಟು ಮಾಡಿದ್ದಾರೆ. ಸುಳ್ಳು ಸುದ್ದಿ ಮೂಲಕ ಮತಗಳಿಸುವ ಯತ್ನ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...