ಸಿಎಂ ಜನತಾ ದರ್ಶನ | ಪಿಎಸ್‌ಐ ಪರೀಕ್ಷಾರ್ಥಿಗಳನ್ನು ಬಂಧಿಸಿರುವುದು ಖಂಡನೀಯ: ಬಿ ವೈ ವಿಜಯೇಂದ್ರ

Date:

  • ‘ಮುಖ್ಯಮಂತ್ರಿಗಳು ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು’
  • ‘ಪಿಎಸ್‌ಐ ಪರೀಕ್ಷಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಬಿಜೆಪಿ ಬೆಂಬಲಿಸುತ್ತದೆ’

ಜನತಾ ದರ್ಶನದಲ್ಲಿ ಮನವಿ ಮಾಡಲು ಮುಖ್ಯಮಂತ್ರಿಗಳ ಬಳಿಗೆ ತೆರಳಿದ್ದ ಪರೀಕ್ಷಾರ್ಥಿ ನಿರುದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡು ಪೊಲೀಸ್ ಬಂಧನಕ್ಕೆ ಒಳಪಡಿಸಿರುವುದು ಅತ್ಯಂತ ಖಂಡನೀಯ ಕ್ರಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

- Advertisement -

ಈ ಕುರಿತು ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “545 ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳ ಮರು ಪರೀಕ್ಷೆಗೆ ಅತ್ಯಂತ ಕಡಿಮೆ ಕಾಲಾವಕಾಶವನ್ನು ನಿಗದಿಪಡಿಸಿರುವ ಸರ್ಕಾರದ ಅವೈಜ್ಞಾನಿಕ ನಿರ್ಧಾರವನ್ನು ಪ್ರತಿಭಟಿಸಿ, ಪರೀಕ್ಷಾ ದಿನಾಂಕವನ್ನು ಮುಂದೂಡಿ ಸಮಯ ವಿಸ್ತರಿಸುವಂತೆ ಪರೀಕ್ಷಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿದ್ದ ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು, ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ. ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸರ್ಕಾರ ಈ ಕೂಡಲೇ ಪರೀಕ್ಷೆಯನ್ನು ಮುಂದೂಡಿ ಸೂಕ್ತ ಕಾಲಾವಕಾಶ ನೀಡಬೇಕೆಂದು ಒತ್ತಾಯಿಸುತ್ತೇನೆ. ಪಿಎಸ್ಐ ಹುದ್ದೆ ಪರೀಕ್ಷಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಬಿಜೆಪಿ ಬೆಂಬಲಿಸುತ್ತದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರ ಹೆಸರು ಡಿಲೀಟ್ ಮಾಡಲು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

“ಬಿಜೆಪಿ ಶಾಸಕ ಅಭಯ್ ಪಾಟೀಲ್ ಬೆಳಗಾವಿಯಲ್ಲಿ 2,500 ಮತದಾರರ ಹೆಸರು ಡಿಲೀಟ್...

2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಸಜ್ಜು; ಎಸ್‌ಪಿ ‘ಪಿಡಿಎ ರಥಯಾತ್ರೆ’ ಶುರು

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಾರ್ಟಿ (ಎಸ್‌ಪಿ) ತನ್ನ ಪ್ರಚಾರ...

ಸೆ.25ಕ್ಕೆ ಚುನಾವಣಾ ಕಚೇರಿಗಳಿಗೆ ಕಾಂಗ್ರೆಸ್ ಮುತ್ತಿಗೆ: ಸಿಇಸಿ ಗ್ಯಾನೇಶ್ ಕುಮಾರ್ ಬಂಧನ, ವಜಾಕ್ಕೆ ಆಗ್ರಹ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು,...