12 ವರ್ಷಗಳಿಂದ ಬಾಕಿ ಇರುವ ಪೋಕ್ಸೊ ಪ್ರಕರಣ: ತ್ವರಿತ ವಿಲೇವಾರಿಗೆ ಆದೇಶಿಸಿದ ಹೈಕೋರ್ಟ್

Date:

ಪೋಕ್ಸೊ (POCSO) ಕಾಯಿದೆಯಡಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕೆಂಬ ಕಾನೂನು ನಿಯಮವಿದ್ದರೂ, ಒಂದು ಪ್ರಕರಣ 12 ವರ್ಷಗಳಿಂದ ಬಾಕಿ ಉಳಿದಿರುವುದು ನ್ಯಾಯಾಲಯದ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

2014ರಲ್ಲಿ ಶಾಲೆಯೊಂದರಲ್ಲಿ ಓದುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಅದೇ ಶಾಲೆಯ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಕಳೆದ 12 ವರ್ಷಗಳಿಂದ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇದೆ. ಪ್ರಕರಣದ ತ್ವರಿತ ವಿಲೇವಾರಿಗೆ ಕೋರಿ ಸಂತ್ರಸ್ತೆಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಎಂಟು ವಾರಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ವಿಶೇಷ ನ್ಯಾಯಾಲಯಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದೆ.

“ಅನಿವಾರ್ಯ ಕಾರಣಗಳಿಲ್ಲದೆ ನೀಡುವ ಪ್ರತಿ ಮುಂದೂಡಿಕೆಯು ಕೇವಲ ವಿಚಾರಣೆಯನ್ನು ತಡ ಮಾಡುತ್ತಿಲ್ಲ, ಸಂತ್ರಸ್ತ ಬಾಲಕಿಯ ಆಘಾತವನ್ನು ದೀರ್ಘಗೊಳಿಸುತ್ತಿದೆ. ಇಂತಹ ಪ್ರಕರಣಗಳಲ್ಲಿ ವಿಳಂಬವಾಗುವುದು ಕೇವಲ ಕಾರ್ಯವಿಧಾನದ ಲೋಪವಲ್ಲ, ಅದು ಸಂತ್ರಸ್ತೆಯ ಮೇಲೆ ನಡೆಯುತ್ತಿರುವ ‘ಮುಂದುವರಿದ ಅನ್ಯಾಯ’ವಾಗಿದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

“ಲೈಂಗಿಕ ದೌರ್ಜನ್ಯಕ್ಕೊಳಗಾದ ಮಗುವನ್ನು ನ್ಯಾಯ ವ್ಯವಸ್ಥೆಯು ತನ್ನ ‘ಮುಂದೂಡಿಕೆ ಸಂಸ್ಕೃತಿ’ಯ ಮೂಲಕ ನರಳುವಂತೆ ಮಾಡಬಾರದು. ಅನಗತ್ಯ ಮುಂದೂಡಿಕೆಗಳು ಮೂಲ ಗಾಯವನ್ನು ಇನ್ನಷ್ಟು ಹೆಚ್ಚಿಸುತ್ತವೆ ಮತ್ತು ನ್ಯಾಯ ಪ್ರಕ್ರಿಯೆಯನ್ನೇ ದಬ್ಬಾಳಿಕೆಯ ಸಾಧನವನ್ನಾಗಿ ಪರಿವರ್ತಿಸುತ್ತವೆ” ಎಂದು ನ್ಯಾಯಾಲಯ ಕಿಡಿಕಾರಿದೆ.

ಪೋಕ್ಸೊ ಕಾಯಿದೆಯ ಸೆಕ್ಷನ್ 34(2) ರ ಪ್ರಕಾರ, ಪ್ರಕರಣ ದಾಖಲಾದ ದಿನದಿಂದ ಒಂದು ವರ್ಷದೊಳಗೆ ವಿಶೇಷ ನ್ಯಾಯಾಲಯವು ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಆದರೆ, ಈ ಪ್ರಕರಣದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆಯಾದ ಬಳಿಕವೂ 10 ವರ್ಷಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆದಿರುವುದು ನ್ಯಾಯಾಲಯದ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೋದಿಜೀ.. ಈ ವಿಷಯಗಳಲ್ಲಿ ನಿಮಗೆ ನೀವೇ ಸಾಟಿ!

ಇದೇ ವೇಳೆ, ಸಿಆರ್‌ಪಿಸಿ (CrPC) ಸೆಕ್ಷನ್ 164ರ ಅಡಿ ಸಂತ್ರಸ್ತೆ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರೀಕ್ಷಿಸಲು ಮ್ಯಾಜಿಸ್ಟ್ರೇಟ್‌ರನ್ನು ಸಾಕ್ಷಿಯಾಗಿ ಕರೆಸಬೇಕೆಂಬ ಅರ್ಜಿದಾರರ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. “ಮ್ಯಾಜಿಸ್ಟ್ರೇಟ್ ದಾಖಲಿಸಿದ ಹೇಳಿಕೆಯನ್ನು ಗುರುತಿಸಲು ಅವರನ್ನು ಕರೆಯುವ ಅಗತ್ಯವಿಲ್ಲ. ಸಾಕ್ಷಿಯು ತನ್ನ ಹೇಳಿಕೆಯನ್ನು ನಿರಾಕರಿಸಿದ ಸಂದರ್ಭದಲ್ಲಿ ಮಾತ್ರ ಅವರನ್ನು ಸಾಕ್ಷಿಯಾಗಿ ಕರೆಸಬಹುದು” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...