ಪೋಕ್ಸೋ ಪ್ರಕರಣ | ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ : ಮುರುಘಾಶ್ರೀ ಮತ್ತೆ ಜೈಲಿಗೆ

Date:

Advertisements

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಶ್ರೀಯವರ ಜಾಮೀನು ರದ್ದುಗೊಳಿಸಿಸಿರುವ ಸುಪ್ರೀಂ ಕೋರ್ಟ್‌, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟಿನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಇದೇ ವೇಳೆ ಆದೇಶಿಸಿದೆ.

ಮುರುಘಾಶ್ರೀಯವರನ್ನು 4 ತಿಂಗಳ ಕಾಲಾವಧಿಗೆ ಜೈಲಿಗೆ ಕಳುಹಿಸಬೇಕು. ಈ ಅವಧಿಯೊಳಗೆ ಸಂತ್ರಸ್ತೆಯರು ಹಾಗೂ ಪೋಷಕರ ವಿಚಾರಣೆಗೆ ಮುಗಿಸಬೇಕು. ಒಂದು ವೇಳೆ ಪ್ರಕರಣದ ವಿಚಾರಣೆಯು ಮುಗಿಯದೇ ಇದ್ದಲ್ಲಿ ಜೈಲು ಶಿಕ್ಷೆಯ ಅವಧಿಯನ್ನು ಮತ್ತೆ ಎರಡು ತಿಂಗಳ ಕಾಲ ವಿಸ್ತರಣೆ ಮಾಡುವ ಕುರಿತು ಸುಪ್ರೀಂ ಕೋರ್ಟ್‌ ಗಮನಕ್ಕೆ ತರಬೇಕು ಎಂದು ಆದೇಶಿಸಲಾಗಿದೆ.

Advertisements

ಮುರುಘಾಶ್ರೀಗಳನ್ನು ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಅತ್ಯಾಚಾರ ಆರೋಪವನ್ನೇ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದ ಮುರುಘಾ ಶ್ರೀ

ಮುರುಘಾ ಶ್ರೀಗಳು ಜೈಲಿನಿಂದ ಹೊರಗೆ ಬರುತ್ತಿದ್ದಂತೆಯೇ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಕಳೆದ ಮಾರಚ್‌ ತಿಂಗಳಲ್ಲಿ ವಿಚಾರಣೆ ಮಾಡಿದ್ದ ಹೈಕೋರ್ಟ್‌ ಮುರುಘಾ ಶರಣರ ಅರ್ಜಿಯನ್ನು ನಿರಾಕರಿಸಿತ್ತು.

ಈ ವೇಳೆ ಪೋಕ್ಸೋ ಪ್ರಕರಣಗಳ ವಿಶೇಷ ನ್ಯಾಯಾಲಯ ಪ್ರಾಸಿಕ್ಯೂಷನ್‌ನ ‘ಪೋಸ್ಟ್ ಆಫೀಸ್’ ಆಗಿ ಕಾರ್ಯ ನಿರ್ವಹಿಸಬಾರದು ಎಂದ ಹೈಕೋರ್ಟ್, ಧಾರ್ಮಿಕ ಸಂಸ್ಥೆಗಳ(ದುರುಪಯೋಗ ತಡೆ) ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದಂತೆ ಶ್ರೀಗಳ ವಿರುದ್ಧದ ಆರೋಪಗಳನ್ನು ಮರುಪರಿಶೀಲಿಸುವಂತೆ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ. ಅಲ್ಲದೆ, ಶ್ರೀಗಳ ವಿರುದ್ಧದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದಂತೆ ಕಾನೂನಿನ ಪ್ರಕಾರ ಮುಂದುವರಿಯುವಂತೆ ಆದೇಶಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X