ಕವಿ, ಪರಿಸರ ಕಾರ್ಯಕರ್ತ ಎಲ್ ಸಿ ನಾಗರಾಜ್ ನಿಧನ

Date:

ಕನ್ನಡದ ಪ್ರಸಿದ್ಧ ಕವಿ, ಅನುವಾದಕ, ಪರಿಸರ ಕಾರ್ಯಕರ್ತ ಹಾಗೂ ನೈಸರ್ಗಿಕ ಕೃಷಿಕರಾಗಿದ್ದ ಎಲ್ ಸಿ ನಾಗರಾಜ್ (63) ಅವರು ಜುಲೈ 23ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆ ಸಮೀಪದ ಸೊಂಡೆಕೊಪ್ಪದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಅವರು ಕೊನೆಯುಸಿರೆಳೆದರು.

- Advertisement -

ಈ ಬಗ್ಗೆ ಅವರದ್ದೇ ಫೇಸ್‌ಬುಕ್ ಖಾತೆಯಲ್ಲಿ ಕುಟುಂಬಸ್ಥರು ಪೋಸ್ಟ್ ಮಾಡಿದ್ದಾರೆ. “ತೀವ್ರ ದುಃಖದಿಂದ ತಿಳಿಸುತ್ತಿದ್ದೇವೆ, ನಮ್ಮ ಪ್ರೀತಿಯ. ಸ್ನೇಹಿತ ಎಲ್.ಸಿ ನಾಗರಾಜ್ ಇಂದು ವಿಧಿವಶರಾಗಿದ್ದಾರೆ. ಅವರ ಅಗಲಿಕೆಯಿಂದ ನಮ್ಮ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಹಾಗೂ ನಮ್ಮ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇವೆ. ನಾಳೆ ಮಧ್ಯಾಹ್ನ 12.30 ನಂತರ ಮಂಟನಕುರ್ಚಿ ತೋಟದ ಮನೆಯಲ್ಲಿ ಅಂತಿಮ ಕಾರ್ಯವನ್ನು ನೆರವೇರಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಎಲ್. ಸಿ. ನಾಗರಾಜ್ ಅವರು ಕನ್ನಡದ ಪ್ರಮುಖ ಕವಿ, ಲೇಖಕ ಮತ್ತು ಚಿಂತಕರಾಗಿದ್ದರು. ಇವರ ಕವಿತೆಗಳು ಮತ್ತು ಬರಹಗಳು ವಿವಿಧ ಸಾಹಿತ್ಯಿಕ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ‘ಗಾಳಿಯ ದೈವಿಕ ಹಾಡುಗಳು’ ಅವರ ಪ್ರಸಿದ್ಧ ಅನುವಾದ ಕವಿತೆಗಳ ಸಂಕಲನವಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ಎಲ್.ಸಿ.ಚಿಕ್ಕಬೈರಪ್ಪ-ಪುಟ್ಟಮ್ಮ ದಂಪತಿಯ ಏಳು ಮಕ್ಕಳಲ್ಲಿ ಮೂರನೆಯವರು ಎಲ್‌ ಸಿ ನಾಗರಾಜ್. ರಾಮನಗರದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಪಡೆದ ಅವರು, ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ ಪೂರೈಸಿದ್ದಾರೆ.

ಕೈಗಾ ವಿರೋಧಿ ಚಳವಳಿಯಲ್ಲಿ ಪಾಲ್ಗೊಂಡಿದ್ದ ನಾಗರಾಜ್ ಅವರು ಸ್ವಯಂಸೇವಾ ಸಂಸ್ಥೆಗಳ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಹಾಗೆಯೇ ತಮ್ಮ ತಾಯಿಯ ನಿಧನದ ಬಳಿಕ ತಮ್ಮ ತೋಟದಲ್ಲಿ ಏಕಾಂಗಿಯಾಗಿ ಉಳಿದು ನೈಸರ್ಗಿಕ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ವರ್ಷಗಳ ಬಳಿಕ ಮಗನೊಂದಿಗೆ ಮ್ಯಾನ್ಮಾರ್‌ ನಾಯಕಿ ಆಂಗ್ ಸಾನ್ ಸೂ ಕಿ ಮಾತು; ಯಾರೀ ʼಶಾಂತಿʼ ದೂತೆ?

ಮ್ಯಾನ್ಮಾರ್‌ನ ಪ್ರಜಾಪ್ರಭುತ್ವದ ಧೀಮಂತ ನಾಯಕಿ ಹಾಗೂ ನೋಬೆಲ್ ಶಾಂತಿ ಪ್ರಶಸ್ತಿ ವಿಜೇತೆ...

WhatsApp ‘ಎಐ’ ಗುಟ್ಟು ರಟ್ಟು: ಬಳಕೆದಾರರಿಂದ ಬಚ್ಚಿಡಲಾಗಿದ್ದ ರಹಸ್ಯ ಸೂಚನೆಗಳು ಬಯಲು

WhatsApp ತನ್ನ ಎಐ (AI) ಚಾಟ್‌ಬಾಟ್‌ಗೆ ನೀಡಿದ್ದ ರಹಸ್ಯ ಸೂಚನೆಗಳು ಆಕಸ್ಮಿಕವಾಗಿ...

ಮಧುಮೇಹಿಗಳಿಗೆ ಸಿಹಿಸುದ್ದಿ: ಇನ್ಸುಲಿನ್, ಮಾತ್ರೆಗಳ ಹಂಗಿಲ್ಲದೆ ‘ಶುಗರ್’ ನಿಯಂತ್ರಿಸುವ ಹೊಸ ಸಾಧನ!

ಇನ್ಸುಲಿನ್ ಮತ್ತು ನಿರಂತರ ಮಾತ್ರೆಗಳ ಹಂಗಿಲ್ಲದೆ ಮಧುಮೇಹವನ್ನು (ಸಕ್ಕರೆ ಕಾಯಿಲೆ) ಪರಿಣಾಮಕಾರಿಯಾಗಿ...

ಶಾಂತಿ ಮಾತುಕತೆ ಬೆನ್ನಲ್ಲೇ ಕೀವ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 2 ಸಾವು, 34 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಕುರಿತು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆದ ಕೆಲವೇ...