‘ಕೇಸ್ ಹಾಕದೆ ಮುದ್ದಿಸಿ, ಲಾಲಿ ಹಾಡಿ ಮಲಗಿಸಬೇಕೆ’: ಬಿಜೆಪಿ ನಾಯಕರ ನಂಜು ನಾಲಿಗೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

Date:

ಬಿಜೆಪಿಗರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಪೊಲೀಸರನ್ನು ಸಾಕಿದ ನಾಯಿಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ನೀಡಿರುವ ಹೇಳಿಕೆಯು ಸದ್ಯ ತೀವ್ರ ವಿವಾದಕ್ಕೀಡಾಗಿದೆ. ‘ಪೊಲೀಸರು ನಾಯಿಗಳಲ್ಲ, ಕಾನೂನು ಪಾಲಕರು’ ಎಂದು ಬಿಜೆಪಿಯ ನಾಯಕರ ನಾಲಿಗೆ ಹರಿತಕ್ಕೆ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, “ಸಮಾಜಘಾತುಕತನವನ್ನು ಕಣಕಣದಲ್ಲೂ ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನೂ ಓದಿ: ಪ್ರಿಯಾಂಕ್‌ ಖರ್ಗೆ ಮನೆಗೆ ಮುತ್ತಿಗೆ | ಬಿಜೆಪಿಗರಿಗೆ ಮಜ್ಜಿಗೆ, ಎಳನೀರು ಕೊಟ್ಟ ಕೈ ಕಾರ್ಯಕರ್ತರು

“ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು. ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಭರತ್ ಶೆಟ್ಟಿ ಬಿಜೆಪಿಯ ‘ಸುಸಂಸ್ಕೃತ’ ಪರಂಪರೆಯ ರಾಯಭಾರಿಯಾಗಿ ಮಾತನಾಡಿದ್ದಾರೆ” ಎಂದು ಖರ್ಗೆ ಟೀಕಿಸಿದ್ದಾರೆ.

“ಸಿಟಿ ರವಿ, ಯಶ್‌ಪಾಲ್ ಸುವರ್ಣ ಬಿಜೆಪಿ ಸಂಸ್ಕೃತಿಯ ರಾಯಭಾರಿ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವಾಗಲೇ ಭರತ್ ಶೆಟ್ಟಿಯವರೂ ನಾನೇನೂ ಕಮ್ಮಿ ಇಲ್ಲ ಎಂದು ಅಖಾಡಕ್ಕೆ ಇಳಿದಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಶಾಸಕ, ಸಂಸದರಂತಹ ಎಷ್ಟೇ ಪ್ರಭಾವಿ ಸ್ಥಾನದಲ್ಲಿದ್ದರೂ ಕಾನೂನು ಪಾಲನೆಯ ಕರ್ತವ್ಯ ಮಾಡಿದ ಪೊಲೀಸರನ್ನು ಜನತೆ ಶ್ಲಾಘಿಸುತ್ತಿದ್ದಾರೆ, ನಿಂದನೆಗೆ ಇಳಿದಿರುವ ಬಿಜೆಪಿಗರಿಗೆ ತಿಳಿದಿರಲಿ, ಪೊಲೀಸರು ಖಾಕಿ ಹಾಕಿಕೊಂಡು ಕಾನೂನು ಪಾಲನೆ ಮಾಡುತ್ತಿದ್ದಾರೆಯೇ ಹೊರತು ಬಿಜೆಪಿಗರಂತೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿಲ್ಲ” ಎಂದು ತಿಳಿಸಿದ್ದಾರೆ.

“ಬಿಜೆಪಿಗರು ತಾವು ಸಂವಿಧಾನ, ಕಾನೂನು, ನಿಯಮಗಳಿಗೆ ಅತೀತರು ಎಂದು ಭಾವಿಸಿಕೊಂಡಿದ್ದಾರೆ, ಈ ಭ್ರಮೆಯಿಂದ ಹೊರಬಂದು ಸಭ್ಯರಾಗದೇ ಇದ್ದಲ್ಲಿ ಕಾನೂನು ತನ್ನ ಕೆಲಸವನ್ನು ಮಾಡುತ್ತದೆ, ಇದಕ್ಕೆ ಯಾರೂ ಹೊರತಲ್ಲ. ಬಿಜೆಪಿ ನಾಯಕರಾಗಲಿ, ಕಾರ್ಯಕರ್ತರೇ ಆಗಿರಲಿ, ಕಾನೂನು ಕ್ರಮ ಜರುಗಿಸಬಾರದು ಎಂದರೆ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಮಾತು ಮತ್ತು ಕೃತಿಗಳನ್ನು ನಿರ್ವಹಿಸಬೇಕು” ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಕರ್ನಾಟಕ ನಾಯಕರು ಕರ್ನಾಟಕದ ಪೊಲೀಸರನ್ನು ನಾಯಿಗೆ ಹೋಲಿಸುವ ಮಾತುಗಳು ಅವರ ದುರಹಂಕಾರದ ಪರಮಾವಧಿಯನ್ನು ಸೂಚಿಸುತ್ತದೆ. ನಮ್ಮ ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಯಾವುದೇ ಪ್ರಯತ್ನಗಳನ್ನೂ ನಾನು ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...