​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಕ್ಟೋಬರ್ 25ರಂದು ನಡೆಯಲಿರುವ ವಿಜಯದಶಮಿ ಪಥಸಂಚಲನಕ್ಕೆ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯುವಂತೆ ಸೂಚಿಸಿದ್ದಾರೆ.

- Advertisement -

ಪಥಸಂಚಲನ ನಡೆಸುವ ಕುರಿತು ಆರ್‌ಎಸ್‌ಎಸ್ ಕೇವಲ ಪೊಲೀಸರಿಗೆ ‘ಮಾಹಿತಿ’ ನೀಡುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ” ಎಂದು ಪತ್ರಕರ್ತರ ಮುಂದೆ ಕಟುವಾಗಿ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...

ಇದಕ್ಕೂ ಮುನ್ನ, ಮಹಾಲಕ್ಷ್ಮಿ ಲೇಔಟ್ ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣೆಗಳಿಗೆ ಆರ್‌ಎಸ್‌ಎಸ್ ಪ್ರತಿನಿಧಿಗಳು ಬರೆದಿದ್ದ ಎರಡು ಪತ್ರಗಳನ್ನು ಖರ್ಗೆ ಅವರು ಟ್ವೀಟ್ ಮಾಡಿದ್ದರು. ಮೊದಲ ಪತ್ರದಲ್ಲಿ ಕಾರ್ಯಕ್ರಮಕ್ಕೆ ‘ಸಹಕಾರ’ ಕೋರಿದ್ದರೆ, ಎರಡನೇ ಪತ್ರದಲ್ಲಿ ಕೇವಲ ‘ಮಾಹಿತಿ’ (ಇಂಟಿಮೇಷನ್) ನೀಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಆರ್‌ಎಸ್‌ಎಸ್‌ನ ನನ್ನ ಪ್ರೀತಿಯ ಸ್ವಯಂಸೇವಕರೇ, ಗೃಹ ಇಲಾಖೆಗೆ ಕೇವಲ ಮಾಹಿತಿ ನೀಡುವುದು ಅಥವಾ ಅಗತ್ಯ ವ್ಯವಸ್ಥೆ ಮಾಡಲು ಹೇಳುವುದು ಅನುಮತಿ ಪಡೆದಂತೆ ಆಗುವುದಿಲ್ಲ. ದಯವಿಟ್ಟು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ, ಸಕ್ಷಮ ಪ್ರಾಧಿಕಾರದಿಂದ ಔಪಚಾರಿಕ ಅನುಮತಿಗಾಗಿ ಕಾಯಿರಿ” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದರು.

Advertisements

ಅಖಿಲ ಭಾರತೀಯ ಪ್ರತಿನಿಧಿ ಸಭಾದ 2025-26ನೇ ಸಾಲಿನ ವಾರ್ಷಿಕ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಖರ್ಗೆ, ಕರ್ನಾಟಕದಾದ್ಯಂತ ಆರ್‌ಎಸ್‌ಎಸ್ 562 ಪಥಸಂಚಲನಗಳನ್ನು ನಡೆಸಿದ್ದು, ಅದರಲ್ಲಿ 2.21 ಲಕ್ಷ ಸಮವಸ್ತ್ರಧಾರಿಗಳು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು. “ಒಂದೇ ದಿನ ಲಕ್ಷಾಂತರ ಮಂದಿ ಬೀದಿಗಿಳಿದು ಪಥಸಂಚಲನ ನಡೆಸುವಾಗ, ಪೊಲೀಸ್ ಇಲಾಖೆಯು ಸಿಬ್ಬಂದಿ ನಿಯೋಜನೆ, ಸಾರಿಗೆ, ಸಂಚಾರ ನಿರ್ವಹಣೆ ಮತ್ತು ಭದ್ರತೆ ಸೇರಿದಂತೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಪೂರ್ವಯೋಜನೆ, ಮಾನವ ಸಂಪನ್ಮೂಲ ಹಾಗೂ ಸಾರ್ವಜನಿಕ ಸಂಪನ್ಮೂಲಗಳ ಅಗತ್ಯವಿರುತ್ತದೆ” ಎಂದು ಅವರು ವಿವರಿಸಿದರು. ಹೀಗಾಗಿ ಅರ್ಜಿ ಸಲ್ಲಿಸಿ ಔಪಚಾರಿಕ ಅನುಮತಿ ಪಡೆಯಿರಿ ಎಂದು ಅವರು ಸೂಚಿಸಿದರು.

“ಆರ್‌ಎಸ್‌ಎಸ್ ಕಾನೂನಿಗಿಂತ ಮೇಲಿಲ್ಲ. ಗಣೇಶ ಮೆರವಣಿಗೆ ಅಥವಾ ರಸ್ತೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಕ್ಕೆ ನೀವು ಅನುಮತಿ ಪಡೆಯುವುದಿಲ್ಲವೇ? ಅದೇ ಕಾನೂನು ಆರ್‌ಎಸ್‌ಎಸ್‌ಗೂ ಅನ್ವಯಿಸುತ್ತದೆ” ಎಂದು ಅವರು ಸ್ಪಷ್ಟಪಡಿಸಿದರು. “ನಾವು ಸರ್ಕಾರ ನಡೆಸುತ್ತಿದ್ದೇವೆ. ನನಗೂ ಸೇರಿದಂತೆ ಎಲ್ಲರಿಗೂ ಒಂದೇ ನಿಯಮವಿದೆ. ನಿಮ್ಮ ಕೋರಿಕೆ ಸೂಕ್ತವಾಗಿದ್ದರೆ ಖಂಡಿತಾ ಅನುಮತಿ ನೀಡುತ್ತೇವೆ, ನಾವು ಅನುಮತಿ ನಿರಾಕರಿಸುವುದಿಲ್ಲ” ಎಂದು ಅವರು ಭರವಸೆ ನೀಡಿದರು.

ಇದರ ಜೊತೆಗೆ, ಆರ್‌ಎಸ್‌ಎಸ್ ಅನ್ನು ಸರ್ಕಾರದೊಂದಿಗೆ ಅಧಿಕೃತವಾಗಿ ನೋಂದಾಯಿಸಿಕೊಳ್ಳುವಂತೆಯೂ ಪ್ರಿಯಾಂಕ್ ಖರ್ಗೆ ಸತತವಾಗಿ ಪಟ್ಟು ಹಿಡಿದಿದ್ದಾರೆ. ಇದೇ ವರ್ಷದ ಆಗಸ್ಟ್‌ನಲ್ಲಿ, ಸರ್ಕಾರಿ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆಯನ್ನು ನಿಯಂತ್ರಿಸುವ ಮಸೂದೆಯೊಂದಕ್ಕೆ ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಅನಧಿಕೃತವಾಗಿ ಸಾರ್ವಜನಿಕ ಆಸ್ತಿ ಬಳಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ ಮತ್ತು ವಾರಂಟ್ ಇಲ್ಲದೆ ಬಂಧಿಸುವ ಕಠಿಣ ಕ್ರಮಗಳನ್ನು ಪ್ರಸ್ತಾಪಿಸಲಾಗಿದೆ ಎಂಬುದು ಇಲ್ಲಿ ಗಮನಾರ್ಹ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ...

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...