ಮಹಿಳೆ ಮೇಲೆ ಪೊಲೀಸರ ಹಲ್ಲೆ, ವರದಿ ನೀಡಲು ಕಮಿಷನರ್‌ಗೆ ‌ಸಚಿವ ಪರಮೇಶ್ವರ್ ಸೂಚನೆ

Date:

ಮನೆ ಕೆಲಸದ ಮಹಿಳೆಯನ್ನು ಅಕ್ರಮ ಬಂಧನದಲ್ಲಿಟ್ಟು ವರ್ತೂರು ಠಾಣೆ ಪೊಲೀಸರು ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

- Advertisement -

ಬೆಂಗಳೂರು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಘಟನೆಯು ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸ್ ಆಯುಕ್ತರಿಂದ ವರದಿ ಕೇಳಿದ್ದೇನೆ. ವರದಿ ಬಂದ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಏನೇ ಆದರೂ ಹೈಕಮಾಂಡ್ ತೀರ್ಮಾನ ಎಂಬುದನ್ನು ನಾನು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕಮಾಂಡ್ ತೀರ್ಮಾನವನ್ನು ಗೌರವಿಸುತ್ತೇವೆ. ಈ ಬಗ್ಗೆ ಪದೇಪದೆ ಹೇಳುತ್ತಿದ್ದರು, ನೀವು ಅದನ್ನು ಕೆದಕುತ್ತೀರಿ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ನಲ್ಲಿ ಶಿಸ್ತು ಇದೆ. ಅಲ್ಲಿ ಏನು ತೀರ್ಮಾನ ಆಗುತ್ತದೆ, ಅದನ್ನು ಪಾಲಿಸಿಕೊಂಡು ಹೋಗುತ್ತೇವೆ. ಯಾರು ಪಾಲಿಸುವುದಿಲ್ಲ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತಾರೆ. ಇದು ಮೊದಲಿನಿಂದಲೂ‌ ನಡೆದುಕೊಂಡು ಬಂದಿರುವ ಪದ್ಧತಿ” ಎಂದು ಹೇಳಿದರು.

“ಹೈಕಮಾಂಡ್ ಏನು ಹೇಳುತ್ತಾರೆ, ಅದನ್ನು ನಾನು ಪಾಲಿಸುತ್ತೇನೆ ಎಂಬ ಸಿಎಂ ಅವರ ಹೇಳಿಕೆ ಸರಿ ಇದೆ. ಈ ಮಾತನ್ನು ಅವರು ಮೊದಲಿನಿಂದಲೂ ಹೇಳಿದ್ದಾರೆ. ಈಗಲೂ ಅದೇ ಮಾತನ್ನು ಹೇಳಿದ್ದಾರೆ‌” ಎಂದು ಸಮರ್ಥಿಸಿದರು.

“ಮುಖ್ಯಮಂತ್ರಿಯವರು ತುಮಕೂರಿಗೆ ಬಂದಾಗ ಎರಡು-ಮೂರು ಬಾರಿ ಕೆ.ಎನ್.ರಾಜಣ್ಣ ಅವರ ಮನೆಗೆ ಊಟಕ್ಕೆ ಹೋಗಿದ್ದಾರೆ. ಈಗಲೂ ನಾವೆಲ್ಲ ಹೋಗುತ್ತೇವೆ. ದೆಹಲಿಗೆ ಯಾರು ಹೋಗುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ನಾನು ದೆಹಲಿಗೆ ಹೋಗುವ ಬಗ್ಗೆ ಯೋಚನೆ ಮಾಡಿಲ್ಲ. ಅವಶ್ಯಕತೆ ಬಿದ್ದರೆ ಹೋಗುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಹಿರಿಯ ಸಚಿವರಿಗೆ‌ ಕ್ಯಾಬಿನೆಟ್‌ನಿಂದ ಕೋಕ್ ನೀಡುವುದರಿಂದ ವರ್ಗಾವಣೆ ನಿಂತಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಅಗತ್ಯತೆ ನೋಡಿಕೊಂಡು ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡುತ್ತಾರೆ. ಪೊಲೀಸ್ ಇಲಾಖೆ ಹೊರತುಪಡಿಸಿ, ಎಲ್ಲ ಇಲಾಖೆಗಳಲ್ಲಿ ವರ್ಗಾವಣೆ ನಿಂತಿದೆ. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಗೆ ಯಾವುದೇ ಟೈಂ ಫ್ರೇಮ್ ಇಲ್ಲ. ಅಗತ್ಯತೆ ಮೇರೆಗೆ ನಿರಂತರವಾಗಿ ವರ್ಗಾವಣೆ ನಡೆಯುತ್ತಿರುತ್ತದೆ” ಎಂದು ತಿಳಿಸಿದರು.

“ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈಬಿಡುವ ವಿಚಾರವನ್ನು ನಾವು ಹೇಳಲು ಆಗುವುದಿಲ್ಲ. ಇದು ಮುಖ್ಯಮಂತ್ರಿಗಳು ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ” ಎಂದು ಹೇಳಿದರು.

“ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸಂಬಂಧಿಸಿದಂತೆ ಸಕ್ಕರೆ ಖಾತೆ ಸಚಿವರಾದ ಶಿವಾನಂದ ಪಾಟೀಲ್ ಅವರ ಜೊತೆ ಮಾತನಾಡಿದ್ದೇನೆ. ಆದಷ್ಟು ಬೇಗ ಕಬ್ಬು ಬೆಲೆ ನಿಯಂತ್ರಣ ಮತ್ತು ಬೆಲೆ ತೀರ್ಮಾನ ಮಾಡಿ, ಬಗೆಹರಿಸುವ ಬಗ್ಗೆ ಮಾತನಾಡಿದ್ದೇನೆ. ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಆ ಭಾಗದ ಸಚಿವರು ಸಭೆ ಕರೆದು ಬಗೆಹರಿಸುವುದಾಗಿ ತಿಳಿಸಿದ್ದಾರೆ” ಎಂದರು.

“ನಿನ್ನೆ ಪ್ರತಿಭಟನೆ ವೇಳೆ ರೈತರೊಬ್ಬರು ವಿಷ ಕುಡಿದು, ಆತ್ಮಹತ್ಯೆಗೆ ಯತ್ನಿಸಿದ್ದರು. ನಮ್ಮ‌ ಪೊಲೀಸರು ರಕ್ಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಆಗಬಾರದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...