ಪೊಲೀಸರು ‘ಡೀಲ್’ ಮತ್ತು ಅಪರಾಧಗಳಲ್ಲಿ ಭಾಗಿಯಾಗಬಾರದು: ಸಿಎಂ ಡಿ ಕೆ ಶಿವಕುಮಾರ್

Date:

ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

- Advertisement -

ವಿಧಾನಸೌಧದ ಆವರಣದಲ್ಲಿ ಇಂದು ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್ ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

“ಇದು ನಮ್ಮ ಪೊಲೀಸ್ ಇಲಾಖೆಗೆ ಹೊಸ ಶಕ್ತಿ ತುಂಬಲಾಗುತ್ತಿದೆ. ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿದೆ. ನಿಮಗೆ ಸರ್ಕಾರದ ಪರವಾಗಿ ಅಭಿನಂದನೆಗಳು. ಸಾಧನೆ ಸಾಮರ್ಥ್ಯಕ್ಕಿಂತ ನಿಮ್ಮ ಗುರಿ ನಿರ್ಧಾರ ಮಾಡಿದಾಗ ಜಯ ನಿಮ್ಮದಾಗಲಿದೆ” ಎಂದರು.

“ನಮ್ಮ ಪೊಲೀಸರು ಒಂದು ವರ್ಷದಲ್ಲಿ 375 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು 1500 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಇದು ದೊಡ್ಡ ದಾಖಲೆ. ಇಡೀ ದೇಶ ಕರ್ನಾಟಕವನ್ನು ಗಮನಿಸುತ್ತಿದೆ. ಡ್ರಗ್ಸ್ ಜಾಲವನ್ನು ಬೇಧಿಸಿದ ತಂಡಕ್ಕೆ ಸರ್ಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಿದೆ. ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರತಿಯೊಬ್ಬ ನಾಗರಿಕನೂ ಇಲಾಖೆ ಮೇಲೆ ಗೌರವ ಇಟ್ಟುಕೊಳ್ಳುವಂತೆ ಕೆಲಸ ಮಾಡಬೇಕು. ನಿಮ್ಮ ಯಶಸ್ಸೇ ಸರ್ಕಾರದ ಯಶಸ್ಸು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಸುರಕ್ಷತೆ ಕೇವಲ ರಾಜಕೀಯ ಭಾಷಣದ ಸರಕಾಗದಿರಲಿ

“ಇತ್ತೀಚೆಗೆ ಕೇರಳ ಗೃಹಸಚಿವರಾದ ರಮೇಶ್ ಚೆನ್ನಿತ್ತಾಲ ಅವರು ನನ್ನನ್ನ ಭೇಟಿ ಮಾಡಿ ಕರ್ನಾಟಕ ಗಡಿ ದಾಟಿ ಯಾವುದೇ ಮಾದಕ ವಸ್ತು ಕೇರಳ ಗಡಿ ಮೂಲಕ ಹೋಗಬಾರದು ಎಂಬ ವಿಚಾರವಾಗಿ ಕೆಲವು ಮಾಹಿತಿ ಹಾಗೂ ಮನವಿ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾದಕ ವಸ್ತು ಬರದಂತೆ ತಡೆಯಲಾಗುವುದು ಎಂದು ಅವರಿಗೆ ಆಶ್ವಾಸನೆ ನೀಡಿದ್ದೇನೆ” ಎಂದು ತಿಳಿಸಿದರು.

“ನಮ್ಮ ಪೊಲೀಸ್ ಇಲಾಖೆಗೆ ದೇಶದಲ್ಲೇ ದಕ್ಷ ಇಲಾಖೆ ಎಂದು ಹೆಸರು ಪಡೆದಿದೆ. ಪೊಲೀಸ್ ಸಿಬ್ಬಂದಿಗಳ ಪರಿಶ್ರಮ, ನಿಷ್ಠೆ, ಕಾರ್ಯಕ್ಷಮತೆಯಿಂದ ಈ ಹೆಸರು ಬಂದಿದೆ. ಹಗಲು ರಾತ್ರಿ ನಿಮ್ಮ ಸೇವೆಗೆ ಸರ್ಕಾರ ನಿಮ್ಮ ಪರವಾಗಿ ನಿಲ್ಲಲಿದೆ. ಕೆಲವು ಸಂದರ್ಭದಲ್ಲಿ ಅನಾಹುತಗಳು ಆಗುತ್ತವೆ. ಅಂತಹ ಪರಿಸ್ಥಿತಿಯಲ್ಲೂ ನಾನು ಹಾಗೂ ನಮ್ಮ ಸರ್ಕಾರ ನಿಮ್ಮ ಆತ್ಮಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಲಾಗಿದೆ. ಕಾನೂನು ಕಾಯುತ್ತೀರಿ, ಸಮಾಜದ ಹಿತ ಕಾಪಾಡುತ್ತೀರಿ. ಅಪರಾಧಗಳಲ್ಲಿ ವಿವಿಧ ರೂಪಗಳಿವೆ. ತಂತ್ರಜ್ಞಾನ, ಎಐ ಬಂದ ಬಳಿಕ ಅಪರಾಧ ಪತ್ತೆಹಚ್ಚಲು ಅನೇಕ ಕ್ರಮ ಕೈಗೊಳ್ಳಲಾಗಿದೆ. ಗೂಂಡಾಗಿರಿ ತಡೆಗಟ್ಟಲು, ಎಲ್ಲಾ ಠಾಣೆಗಳಲ್ಲಿ ಪಡೆ ರಚಿಸಲು ನಿರ್ದೇಶನ ನೀಡಿದ್ದೇನೆ” ಎಂದರು.

“ರಾಮಮಂದಿರದಲ್ಲಿ ಯಾವ ರೀತಿ ಕಳ್ಳತನವಾಗಿದೆ ಎಂದು ಗಮನಿಸಿದ್ದೀರಿ. ನಮ್ಮ ರಾಜ್ಯದಲ್ಲಿ ಮುಂಜಾಗ್ರತೆಯಿಂದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಸ್ಥಳೀಯ ಮುಖಂಡರು, ಪೊಲೀಸ್ ಅಧಿಕಾರಿಗಳು ಸೇರಿ ಹುಂಡಿ ತೆಗೆಯುವುದರಿಂದ, ಹಣ ಏಣಿಕೆ ಮಾಡುವುದು ಸೇರಿ ಅವುಗಳನ್ನು ಬ್ಯಾಂಕಿಗೆ ಸಲ್ಲಿಸುವವರೆಗೂ ಎಲ್ಲವನ್ನು ವಿಡಿಯೋ ದಾಖಲಾತಿ ಮಾಡಬೇಕು ಎಂದು ಮಾರ್ಗದರ್ಶನ ನೀಡಿದ್ದೇನೆ. ಇದರ ಬಗ್ಗೆ ಬೆಳಗಾವಿಯಲ್ಲಿ ಘೋಷಣೆ ಮಾಡಲಾಗಿದೆ. ಸಧ್ಯದಲ್ಲೇ ಆದೇಶ ಹೊರಡಿಸಲಾಗುವುದು. ನಮ್ಮ ರಾಜ್ಯದಲ್ಲಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾಗಿರುವುದು ಮುಖ್ಯ. ಯಾವುದೇ ಧರ್ಮದ ದೇವಾಲಯವಿದ್ದರೂ ಸರ್ಕಾರದ ವ್ಯಾಪ್ತಿಯಲ್ಲಿದ್ದರೆ ಅವುಗಳ ರಕ್ಷಣೆ ನಮ್ಮ ಕರ್ತವ್ಯವಾಗಲಿದೆ. ಅಪರಾಧವಾದ ಬಳಿಕ ಹುಡುಕುವುದಕ್ಕಿಂತ ಅಪರಾಧ ನಡೆಯದಂತೆ ಎಚ್ಚರಿಕೆ ವಹಿಸಬೇಕು. ನಮ್ಮ ತೀರ್ಮಾನ ನೋಡಿ, ಖಾಸಗಿ ದೇವಾಲಯ ಹಾಗೂ ಮಠ ಮಾನ್ಯಗಳು ಎಚ್ಚರಿಕೆ ವಹಿಸಬೇಕಾಗುತ್ತದೆ” ಎಂದು ತಿಳಿಸಿದರು.

“ಪ್ರಿಯಾಂಕ್ ಖರ್ಗೆ ಅವರು ಈ ಇಲಾಖೆ ಬಗ್ಗೆ ಬಹಳ ಆಸಕ್ತಿ ಹೊಂದಿದ್ದರು. ಕಳೆದ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣವನ್ನು ತಮ್ಮದೇ ಆದ ರೀತಿ ತನಿಖೆ ಮಾಡಿ ಸರ್ಕಾರ ಹಾಗೂ ಜನರ ಗಮನ ಸೆಳೆದಿದ್ದರು. ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು, ಯಾರೊಬ್ಬರೂ ಲಂಚ ಕೊಟ್ಟು ಕೆಲಸಕ್ಕೆ ಸೇರಬಾರದು. ಅರ್ಹತೆಯೇ ಹುದ್ದೆಯ ನೇಮಕಾತಿಗೆ ಮುಖ್ಯ ಮಾನದಂಡ ಎಂಬ ಅಡಿಪಾಯ ಹಾಕಿದ್ದಾರೆ. ಸರ್ಕಾರ ನಿಮ್ಮ ಜೊತೆ ಇರುತ್ತದೆ. ನೀವು ನಿಮ್ಮ ಕರ್ತವ್ಯನ್ನು ಸರಿಯಾಗಿ ನಿಭಾಯಿಸಿ” ಎಂದು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...