ಸ್ಥಳೀಯ ಸಂಸ್ಥೆ ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಪರಿಗಣನೆ ಸಾಧ್ಯತೆ: ಈಶ್ವರ್ ಖಂಡ್ರೆ

Date:

ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ (SIR) ಮತದಾರರ ಪಟ್ಟಿಯ ಬದಲಿಗೆ ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಸುವ ಸಾಧ್ಯತೆಯಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

- Advertisement -

ಬೀದರ್‌ನಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯಡಿ ಸಿದ್ಧಪಡಿಸಿರುವ ಹೊಸ ಮತದಾರರ ಪಟ್ಟಿ ಇನ್ನೂ ಅಧಿಕೃತವಾಗಿ ಸರ್ಕಾರದ ಕೈ ಸೇರಿಲ್ಲ. ಅಲ್ಲದೆ, ಪರಿಷ್ಕೃತ ಪಟ್ಟಿಯಲ್ಲಿ ಸಾವಿರಾರು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಹಳೆಯ ಮತ್ತು ಹೊಸ ಮತದಾರರ ಪಟ್ಟಿಗಳಲ್ಲಿನ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಮುಂಬರುವ ಜನವರಿಯಲ್ಲಿ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸಲು ಸರ್ಕಾರ ಬದ್ಧವಾಗಿದೆ. ಆದರೆ, ಚುನಾವಣೆಗೆ ಹಳೆಯ ಅಥವಾ ಹೊಸ ಮತದಾರರ ಪಟ್ಟಿಯನ್ನು ಬಳಸಬೇಕೆಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ತಿಂಗಳಿಗೆ ಲಕ್ಷಾಂತರ ಲಾಭದ ಆಮಿಷವೊಡ್ಡಿ 11.46 ಕೋಟಿ ವಂಚನೆ; ಶಿವಮೊಗ್ಗ ದಂಪತಿ ವಿರುದ್ಧ ಕೇಸ್

ಕರ್ನಾಟಕದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಅವಧಿ ಮುಗಿದು ಹಲವು ವರ್ಷಗಳೇ ಕಳೆದಿವೆ. ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ಗೊಂದಲಗಳಿಂದಾಗಿ ಚುನಾವಣೆಗಳು ನಿರಂತರವಾಗಿ ಮುಂದೂಡಲ್ಪಡುತ್ತ ಬಂದಿದ್ದವು. ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಮುಖಾಂತರವೇ ಗ್ರಾಮೀಣಾಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಇದರಿಂದ ಸ್ಥಳೀಯ ಮಟ್ಟದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿತ್ತು. ಸದ್ಯ ಚುನಾವಣೆ ಘೋಷಿಸಿರುವುದು ಒಳ್ಳೆಯದೇ. ಆದರೆ ಚುನಾವಣೆಗೆ ಯಾವ ಮತದಾರರ ಪಟ್ಟಿಯನ್ನು ಪರಿಗಣಿಸಲಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ಯಾಚಾರ ಆರೋಪ ಎದುರಿಸುತ್ತಿರುವ ಪೋಕ್ಸೋ ನ್ಯಾಯಾಧೀಶರ ತೆರವಿಗೆ ಅರ್ಜಿ; ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ನೋಟಿಸ್

ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅಲಹಾಬಾದ್‌ನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ (ADJ)...

ಯುವ ಪಡೆಗೆ ಗಿಲ್ ಸಾರಥ್ಯ: ಕಿವೀಸ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಸಜ್ಜು

ಇತ್ತೀಚೆಗಷ್ಟೇ ಮುಕ್ತಾಯವಾದ ಐದು ಪಂದ್ಯಗಳ ಟಿ20 ಸರಣಿಯನ್ನು 3-2 ಅಂತರದಿಂದ ರೋಚಕವಾಗಿ...

EPFO ಸದಸ್ಯರಿಗೆ ಸಿಹಿಸುದ್ದಿ: Whatsappನಲ್ಲೇ ಸಿಗಲಿದೆ ಇಪಿಎಫ್‌ ಖಾತೆ ವಿವರ

ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) ತನ್ನ ಕೋಟ್ಯಂತರ ಸದಸ್ಯರ...

‘SIR ಹೋರಾಟದಲ್ಲಿ ನೀವೇಕೆ ಭಾಗವಹಿಸಿದಿರಿ’; ಬೇಷರತ್ ಕ್ಷಮೆ ಕೇಳುವಂತೆ ನಟ ಇಮ್ರಾನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಸೂಚನೆ

ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮುಂಬೈನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದಕ್ಕೆ...