ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ‌ ಪ್ರಶ್ನಿಸಿ ಮೇಲ್ಮನವಿ: ಸೂರಜ್ ರೇವಣ್ಣ

Date:

Advertisements

ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕುಟುಂಬ ಜೀವಾವಧಿ ಶಿಕ್ಷೆ ತೀರ್ಪನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ.

ಪ್ರಜ್ವಲ್ ಅವರ ಸಹೋದರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಈ ಕುರಿತು ಮಾಧ್ಯಮಗಳಿಗೆ ತಿಳಿಸಿದ್ದು, “ಪ್ರಕರಣವು ನ್ಯಾಯಾಲಯದಲ್ಲಿರುವುದರಿಂದ ಹೆಚ್ಚು ಮಾತನಾಡುವುದು ಸೂಕ್ತವಲ್ಲ, ನಾವು ಖಂಡಿತವಾಗಿಯೂ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಮೈಸೂರಿನ ಕೆ.ಆರ್. ನಗರ ಮೂಲದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದಲ್ಲಿ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್ 2ರಂದು ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೆ, ಸಂತ್ರಸ್ತ ಮಹಿಳೆಗೆ ₹7 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿದೆ.

Advertisements

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಆಗಸ್ಟ್ 1ರಂದು ಪ್ರಜ್ವಲ್ ಅವರನ್ನು ದೋಷಿ ಎಂದು ಘೋಷಿಸಿ, ಶಿಕ್ಷೆಯ ಪ್ರಮಾಣವನ್ನು ಮರುದಿನ ಪ್ರಕಟಿಸಿದ್ದರು. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376(2)(k) (ಮಹಿಳೆಯ ಮೇಲೆ ನಿಯಂತ್ರಣ ಅಥವಾ ಪ್ರಾಬಲ್ಯದ ಸ್ಥಾನದಲ್ಲಿದ್ದು ಅತ್ಯಾಚಾರ ಎಸಗುವುದು) ಮತ್ತು ಸೆಕ್ಷನ್ 376(2)(n) (ಒಬ್ಬನೇ ವ್ಯಕ್ತಿಯು ಅದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು) ಅಡಿಯಲ್ಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ವಿಧಿಸಲಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದರು.

ಈ ಮಹತ್ವದ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಿರಿಯ ವಕೀಲೆ ನಳಿನಿ ಮಾಯಗೌಡ ಅವರು ವಾದ ಮಂಡಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X