ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ನಡೆಸಿದ್ದು, ಗೌಪ್ಯ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಆದೇಶ ಪಡೆಯಲಾಗುವುದು ಎಂದು ತಿಳಿಸಿದೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಪಿಐಎಲ್
ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು. ಇದನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಹೇಳಿತ್ತು.
ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದಾರೆ. “ನಮಗೆ ಆರೋಪ ಪಟ್ಟಿ ನೀಡಿಲ್ಲ. ಆರೋಪ ಪಟ್ಟಿ ನೀಡಬೇಕು” ಎಂದು ಹೇಳಿದ್ದಾರೆ. “ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿದ ಬಳಿಕ ನಿಮಗೆ ಆರೋಪ ಪಟ್ಟಿ ನೀಡಲಿದೆ” ಎಂದು ಪೀಠ ಹೇಳಿದೆ.
“ನಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವುದೇ ಸರಿಯಲ್ಲ. ಮೊದಲಿಗೆ ದೂರಿನಲ್ಲಿ ಅತ್ಯಾಚಾರ ಆರೋಪ ಇರಲಿಲ್ಲ. ವಿಚಾರಣಾ ಹಂತದಲ್ಲಿ ಅತ್ಯಾಚಾರ ಆರೋಪ ಮಾಡಲಾಗಿದೆ” ಎಂದು ಪ್ರಜ್ವಲ್ ರೇವಣ್ಣ ಪರ ವಕೀಲರು ವಾದಿಸಿದ್ದಾರೆ.
High Court says it will take Revanna's bail plea and all connected matters in September 12.
— Bar and Bench (@barandbench) September 9, 2024
Nagaprasanna J says an in-camera hearing order will be secured from the Chief Justice and counsels will be informed.
Says, "Any ignominy should not be caused to the prosecutrix."
