ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.
ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಕಾಯ್ದಿರಿಸಿದ್ದು, ವಿಚಾರಣೆ ಪೂರ್ಣವಾಗಿದೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ
ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದು, ಸಂತ್ರಸ್ತರ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, “ಎಫ್‌ಐಆರ್ ದಾಖಲಿಸುವಾಗ ಪ್ರಜ್ವಲ್ ವಿರುದ್ಧ ಯಾವುದೇ ಆರೋಪ ಇರಲಿಲ್ಲ. ಅವರ ತಂದೆಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಲಾಗಿತ್ತು. ನಾಲ್ಕು ವರ್ಷ ಸಂತ್ರಸ್ತೆ ಏನು ಮಾಡುತ್ತಿದ್ದರು” ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಉತ್ತರ ನೀಡಿದ ಸಂತ್ರಸ್ತೆ ಪರ ವಕೀಲರು, “ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಲಾಗಿದೆ. ಆಕೆಯ ಮಕ್ಕಳು, ಕುಟುಂಬಸ್ಥರ ಕೊಲೆ ಮಾಡುವ ಬೆದರಿಕೆ ಹಾಕಲಾಗಿದೆ. ಇದರಿಂದ ಆತಂಕಪಟ್ಟು ಇಷ್ಟವರೆಗೆ ದೂರು ದಾಖಲಿಸಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ವಾದ ವಿವಾದವನ್ನು ಆಲಿಸಿದ ಪೀಠವು, ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿದೆ.
ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ನಡೆಸಲಿದೆ.@iPrajwalRevanna #PrajwalRevannavideo #prajwalreevana pic.twitter.com/hN8mKeRhKW
— ಬಾರ್ & ಬೆಂಚ್ – Kannada Bar & Bench (@Kbarandbench) September 19, 2024
