ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

Date:

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಸ್ಪಷ್ಟಪಡಿಸಿದೆ.

- Advertisement -

ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ ಹಾಗೂ ಪ್ರಜ್ವಲ್‌ ತಂದೆ ಎಚ್‌ ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ರೇವಣ್ಣ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು “ರೇವಣ್ಣ ಅವರಿಗೆ ಸೀಮಿತವಾಗಿ ಈ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಪ್ರಜ್ವಲ್‌ ವಿರುದ್ಧ ವಿಚಾರಣೆ ಮುಂದುವರಿಸಲು ಯಾವುದೇ ಅಡ್ಡಿಯಿಲ್ಲ” ಎಂದರು. ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಧ್ವನಿಗೂಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರೇ ಹೇಳಿ- ಅಘೋಷಿತ ತುರ್ತುಪರಿಸ್ಥಿತಿ ಮುಗಿಯುವುದು ಯಾವಾಗ?

ಇದನ್ನು ಆಲಿಸಿದ ಪೀಠವು “ರೇವಣ್ಣ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಲಾಗಿದೆ. ಹೀಗಾಗಿ, ಪ್ರಜ್ವಲ್‌ ವಿರುದ್ಧ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆ ಮುಂದುವರಿಸಲು ಈ ಆದೇಶ ಅಡ್ಡಿಯಾಗದು” ಎಂದು ಸ್ಪಷ್ಟಪಡಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು.

ಪ್ರಜ್ವಲ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಪ್ರಜ್ವಲ್‌ ಜಾಮೀನು ಅರ್ಜಿಗೆ ಪ್ರೊ. ರವಿವರ್ಮ ಕುಮಾರ್‌ ಆಕ್ಷೇಪಿಸಿದರು. ಇದೇ ರೀತಿಯ ಆರೋಪಗಳನ್ನು ಒಳಗೊಂಡಿರುವ ಇನ್ನೊಂದು ಪ್ರಕರಣದಲ್ಲಿ ವಿಚಾರಣೆ ಬಹುತೇಕ ಮುಗಿದಿದೆ. ಆ ಪ್ರಕರಣ ಮುಗಿದ ತಕ್ಷಣ ಈ ಪ್ರಕರಣ ಕೈಗೆತ್ತಿಕೊಳ್ಳುವಂತೆ ವಿಚಾರಣಾಧೀನ ನ್ಯಾಯಾಲಯವನ್ನು ಕೋರಿದ್ದೇವೆ. ಇದು ಮುಂದಿನ ವಾರ ಅಥವಾ 15 ದಿನಗಳಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದರು.

ಇದಕ್ಕೆ ಆಕ್ಷೇಪಿಸಿದ ಪ್ರಜ್ವಲ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪ್ರಜ್ವಲ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. 157 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ಮೊದಲ ಜಾಮೀನು ಅರ್ಜಿ ತಿರಸ್ಕೃತವಾದಾಗಿನಿಂದ ಒಂದೇ ಒಂದು ಇಂಚೂ ಪ್ರಕರಣ ಮುಂದುವರಿದಿಲ್ಲ. ದೂರುದಾರೆಯ ಘನತೆಗೆ ಹಾನಿ ಮಾಡಿದ್ದೇವೆ ಎಂಬ ಆರೋಪವಿದೆ. ಸಂವಿಧಾನ 21ನೇ ವಿಧಿಯಡಿಯೂ ವಾದಿಸುತ್ತೇನೆ. ಪ್ರಜ್ವಲ್‌ ಜೈಲಿನಲ್ಲಿ ಕೊಳೆಯುವಂತೆ ಮಾಡಲಾಗದು” ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಜೂನ್‌ 24ಕ್ಕೆ ಮುಂದೂಡಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...

ನಾಗರಹೊಳೆ: ಜೇನುಕುರುಬ ಕುಟುಂಬಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಸರ್ಕಾರದ ಕ್ರಮಕ್ಕೆ ಆದಿವಾಸಿಗಳ ಆಕ್ರೋಶ

ಕೊಡಗು ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ‘ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ’ದಲ್ಲಿ...

ಕಾಂಗ್ರೆಸ್ ಭರವಸೆ ಈಡೇರಿಕೆಗೆ ಆಗ್ರಹ: ನ. 12ರಂದು ಬೆಂಗಳೂರಿನಲ್ಲಿ ‘ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ’ ಸಮಾವೇಶ

ಕಳೆದ 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಪ್ರಮುಖ ಭರವಸೆಗಳನ್ನು...