ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ| ವಿಡಿಯೋ ಹಂಚಿಕೊಂಡರೆ ಕಾನೂನು ಕ್ರಮ: ಎಸ್‌ಐಟಿ ಎಚ್ಚರಿಕೆ

Date:

Advertisements

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಂಡವು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಬಿಜಯ್ ಕುಮಾರ್ ಸಿಂಗ್, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ?  ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಸಂತ್ರಸ್ತರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

Advertisements

“ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದು ಸಂಬಂಧಿಸಿದ ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು” ಎಂದು ಎಸ್‌ಐಟಿ ತಂಡ ಎಚ್ಚರಿಕೆ ನೀಡಿದೆ.

ಎಸ್‌ಐಟಿ

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಎಸ್‌ಐಟಿ ಸೂಚಿಸಿದೆ. ಜೊತೆಗೆ ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದೆ.

“ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು, ಹಿಂಜರಿಯಬೇಕಾದ್ದು, ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ” ಎಂದು ಎಸ್‌ಐಟಿ ತಂಡ ಅಭಿಪ್ರಾಯಿಸಿದೆ.

ಇದನ್ನು ಓದಿದ್ದೀರಾ?  ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಜಿ ಪರಮೇಶ್ವರ್‌

“ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರುಗಳು, ವೈದ್ಯರುಗಳು, ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ” ಎಂದು ಮನವಿ ಮಾಡಿದೆ.

ಸಂತ್ರಸ್ತೆಯರಿಗೆ ಸಹಾಯವಾಣಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಎಸ್‌ಐಟಿ ಸಹಾಯವಾಣಿಯನ್ನು ಆರಂಭಿಸಿದೆ. “ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಪ್‌ಲೈನ್ 6360938947 ಈ ನಂಬರ್ ಅನ್ನು ಬೆಳಿಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ” ಎಂದು ಎಸ್‌ಐಟಿ ತಿಳಿಸಿದೆ.

“ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು” ಎಂದು ತಂಡ ಹೇಳಿದೆ.

ಇನ್ನು ಸಂತ್ರಸ್ತೆಯರಿಗೆ ಸಹಾಯವಾಣಿ ಕುರಿತಾಗಿ ಪ್ರತ್ಯೇಕ ಪ್ರಕಟಣೆಯನ್ನು ಎಸ್‌ಐಟಿ ಬಿಡುಗಡೆ ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X