ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ಸಾಕ್ಷಿಗೆ ಬೆದರಿಕೆ ಕರೆ; ರಕ್ಷಣೆ ನೀಡಲು ಕೋರ್ಟ್‌ ಸೂಚನೆ

Date:

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಪ್ರಮುಖ ಸಾಕ್ಷಿಯೊಬ್ಬರಿಗೆ ಬೆದರಿಕೆ ಕರೆಗಳು ಬಂದಿರುವುದು ಬೆಳಕಿಗೆ ಬಂದಿದೆ. ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿದ್ದು, ತನ್ನ ಹಾಗೂ ಪುತ್ರನ ಸುರಕ್ಷತೆ ಬಗ್ಗೆ ಆತಂಕವಿದೆ ಎಂದು ಅವರು ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

- Advertisement -

ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಪ್ರಕರಣದ ವಿಚಾರಣೆ ನಡೆಯಿತು. ಪ್ರಕರಣ ಸದ್ಯ ವಿಚಾರಣೆಯ ಹಂತದಲ್ಲಿದ್ದು, ವಿಶೇಷ ಸರ್ಕಾರಿ ಅಭಿಯೋಜಕರ ಮೂಲಕ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಳೆದ ಜುಲೈ 6ರಂದು ಹಾಸನ ಜಿಲ್ಲೆಯ ಹೊಳೆನರಸೀಪುರದ 43 ವರ್ಷದ ಸಮಾಜ ಸೇವಕಿಯೊಬ್ಬರು ಪ್ರಾಸಿಕ್ಯೂಷನ್ ಸಾಕ್ಷಿ-4 ಆಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ದಾಖಲಿಸಿದ್ದರು. ಗುರುವಾರ ನಡೆದ ಪ್ರತಿಪ್ರಶ್ನೆ ವೇಳೆ, ಹಿಂದಿನ ವಿಚಾರಣೆಯಲ್ಲಿ ಮುಖ್ಯ ಸಾಕ್ಷ್ಯ ದಾಖಲಿಸಿದ ಬಳಿಕ ತಮಗೆ ಬೆದರಿಕೆ ಕರೆಗಳು ಬಂದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಸಾಕ್ಷಿಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಅಪರಾಧ ತನಿಖಾ ಇಲಾಖೆ (ಸಿಐಡಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಬೆದರಿಕೆ ಕರೆಗಳ ಕುರಿತು ತನಿಖೆ ನಡೆಸಿ ಮುಂದಿನ ವಿಚಾರಣೆಯ ವೇಳೆಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ತಮ್ಮ ಸಾಕ್ಷ್ಯ ಪೂರ್ಣಗೊಂಡ ಬಳಿಕವೂ ಸಾಕ್ಷಿ ಆತಂಕ ವ್ಯಕ್ತಪಡಿಸಿದ್ದಾರೆ. ತಮಗೆ ಅಥವಾ ತಮ್ಮ ಪುತ್ರನಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಆರೋಪಿಗಳೇ ಹೊಣೆಗಾರರಾಗಬೇಕು ಎಂದು ಅವರು ನ್ಯಾಯಾಲಯದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್‌ ಪಟ್ಟು; ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಆರೋಪಿಗಳಿಂದ ಮತ್ತಷ್ಟು ಬೆದರಿಕೆ ಎದುರಾಗುವ ಸಾಧ್ಯತೆಯಿದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನಿನ ಪ್ರಕಾರ ಸಾಕ್ಷಿಗೆ ಸೂಕ್ತ ಭದ್ರತೆ ಒದಗಿಸುವಂತೆ ನ್ಯಾಯಾಲಯ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಇತ್ತೀಚೆಗೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಹೈ ಸೆಕ್ಯುರಿಟಿ ಬ್ಯಾರಕ್‌ನಲ್ಲಿದ್ದ ಪ್ರಜ್ವಲ್‌ ರೇವಣ್ಣ ಅವರ ಸೆಲ್‌ನಿಂದ ಮೊಬೈಲ್‌ ಫೋನ್, ಚಾರ್ಜರ್‌, ಪೆನ್‌ಡ್ರೈವ್‌ ಹಾಗೂ ಬರಹದ ಪ್ಯಾಡ್‌ ವಶಪಡಿಸಿಕೊಂಡಿದ್ದರು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಸಹ ಕೈದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...