ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ತನ್ನ ಮೇಲೆ ಒತ್ತಡ ಹೇರಿರುವುದಾಗಿ ಮಹಿಳೆಯೊಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಹಿಳೆಯೊಬ್ಬರು ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು ಬೆದರಿಕೆ ಹಾಕಿದ್ದು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಲಾಗುತ್ತಿದೆ.
ಸಿವಿಲ್ ಧರಿಸಿನಲ್ಲಿ ಬಂದಿದ್ದ ಮೂವರು ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡುವಂತೆ ಒತ್ತಡ ಹಾಕಿದ್ದಾರೆ. ಅದಲ್ಲದೆ ಬೇರೆ ಬೇರೆ ದೂರವಾಣಿ ಸಂಖ್ಯೆಗಳಿಂದ ಮಹಿಳೆಗೆ ನಿರಂತರ ಕರೆ ಮಾಡಿದ್ದು, ಪ್ರಜ್ವಲ್ ವಿರುದ್ಧ ದೂರು ನೀಡುವಂತೆ ಒತ್ತಡ ಹಾಕಿದ್ದಾರೆ ಎಂದು ಮಹಿಳೆಯು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ
ಸಂಭಾವ್ಯ ಕಿರುಕುಳ ಮತ್ತು ಸುಳ್ಳು ಪರಿಣಾಮಗಳ ಬೆದರಿಕೆಯ ಅಡಿಯಲ್ಲಿ ದೂರು ದಾಖಲಿಸಲು ಒತ್ತಾಯಿಸಲಾಗಿದೆ. ಸಂತ್ರಸ್ತೆಯು ತನ್ನ ಕುಟುಂಬದ ಯೋಗಕ್ಷೇಮಕ್ಕಾಗಿ ರಕ್ಷಣೆ ಕೋರಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಸೇರಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದೂರುಗಳ ದಾಖಲಾಗಿದ್ದು, ಎಸ್‌ಐಟಿ ತಂಡ ತನಿಖೆ ನಡೆಸುತ್ತಿದೆ. ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣನನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.
