ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಜಾಮೀನು ಮತ್ತು ಇನ್ನಿತರ ಎರಡು ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದೆ.
ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು. ಇದನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಹೇಳಿತ್ತು.
ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು “ಗೌಪ್ಯ ವಿಚಾರಣೆ ನಡೆಸುವುದಿಲ್ಲ. ಪ್ರಜ್ವಲ್ ರೇವಣ್ಣ ಬಗ್ಗೆ ವಿಶೇಷ ಏನಿಲ್ಲ” ಎಂದು ಹೇಳಿದೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಪಿಐಎಲ್
ವಿಚಾರಣೆ ವೇಳೆ ಆಕ್ಷೇಪಾರ್ಹವಾದ ವಿಚಾರ, ಹೆಸರು ಉಲ್ಲೇಖಿಸದಂತೆ ವಕೀಲರಿಗೆ ನ್ಯಾಯಾಲಯವು ಮನವಿ ಮಾಡಿದೆ.
ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಕೋರಿಕೆಯಂತೆ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ನ್ಯಾಯಾಲಯ ಮುಂದೂಡಿದೆ.
