ಪ್ರಜ್ವಲ್ ಲೈಂಗಿಕ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪ್ರೊಫೆಸರ್ ರವಿವರ್ಮ ನೇಮಕ

Date:

ಜೆಡಿಎಸ್ ನಾಯಕರಾದ ಎಚ್‌ಡಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ- ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ನೇಮಿಸಿದೆ.

- Advertisement -

ಕುಮಾರ್ ಅವರು ಈ ಹಿಂದೆ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ ಹಿಜಾಬ್ ನಿಷೇಧ ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಾದಿಸಿದವರು ಕುಮಾರ್. 2013ರಿಂದ 2015ರವರೆಗೆ ಕರ್ನಾಟಕದ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಎಸ್‌ಪಿಪಿಯಾಗಿ ಬಿ.ಎನ್.ಜಗದೀಶ ಅವರನ್ನು ನೇಮಿಸಲಾಗಿತ್ತು. ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ.

ಇದನ್ನು ಓದಿದ್ದೀರಾ?  ಲೈಂಗಿಕ ಹಗರಣ | ಪ್ರಜ್ವಲ್ ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಎಸ್‌ಐಟಿ ಪತ್ರ

ಇನ್ನು ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮೇ 8ರಂದು ಎಸ್‌ಐಟಿಗೆ ಮೂರು ದಿನಗಳ ಕಸ್ಟಡಿಗೆ ಒಳಗಾಗಿದ್ದ ಹೆಚ್‌ಡಿ ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಹೆಚ್‌ಡಿ ರೇವಣ್ಣ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ಆದೇಶಗಳಲ್ಲಿ ಜಾಮೀನು ಪಡೆದಿದ್ದಾರೆ.

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿ ಅದನ್ನು ಚಿತ್ರೀಕರಿಸಿದ ಆರೋಪವನ್ನು ಪ್ರಜ್ವಲ್ ರೇವಣ್ಣ ಹೊತ್ತಿದ್ದಾರೆ. 2,900ಕ್ಕೂ ಹೆಚ್ಚು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಚುನಾವಣೆ ಮುಗಿದ ಕೂಡಲೇ ಏಪ್ರಿಲ್ 26ರಂದು ಪ್ರಜ್ವಲ್ ರೇವಣ್ಣ ಜರ್ಮನಿಗೆ ಪಲಾಯನ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಹಾಸನ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ; ಮೇ 30ರಂದು ಜನಪರ ಚಳವಳಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಹಿರಿಯ ಅಧಿಕಾರಿ ಬಿಕೆ ಸಿಂಗ್ ನೇತೃತ್ವದ ಎಸ್‌ಐಟಿ ತಂಡವು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಸಮನ್ಸ್ ನೀಡಿದೆ.

ಇನ್ನು ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಎಸ್ಐಟಿ ಪತ್ರ ಬರೆದಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...