ಪ್ರಜ್ವಲ್ ಚಾಲಕ, ಡಿಕೆಶಿ ಭೇಟಿಯ ದಾಖಲೆ ಬಿಡುಗಡೆ: ಇದು ಬರೀ ‘ಟ್ರೈಲರ್’, ಸಿನಿಮಾ ಮುಂದಿದೆ ಎಂದ ಎಚ್‌ಡಿಕೆ

Date:

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋಗಳು ಸಾರ್ವಜನಿಕವಾಗಿ ಹೊರಬರುವ ಮುನ್ನ ಪ್ರಜ್ವಲ್‌ನ ಮಾಜಿ ಕಾರು ಚಾಲಕ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭೇಟಿಯಾಗಿದ್ದರು ಎಂದು ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್‌ ಡಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಈ ಸಂಬಂಧ ಎಚ್‌ಡಿಕೆ ದಾಖಲೆ ಬಿಡುಗಡೆ ಮಾಡಿದ್ದು, ಇದು ಬರೀ ‘ಟ್ರೈಲರ್’, ಸಿನಿಮಾ ಮುಂದಿದೆ ಎಂದು ಹೇಳಿದ್ದಾರೆ.

- Advertisement -

ಇಂದು (ನವೆಂಬರ್ 2) ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ರಾಜ್ಯ ಕಚೇರಿ ‘ಜೆಪಿ ಭವನ’ದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಎಚ್‌ಡಿಕೆ ನಡೆಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಪ್ರಜ್ವಲ್‌ನ ಮಾಜಿ ಕಾರು ಚಾಲಕ ಈ ಹಿಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಕಟವರ್ತಿಗಳನ್ನು ಭೇಟಿಯಾಗಿದ್ದ ‘ಕಾಲ್ ಡಿಟೇಲ್ ರೆಕಾರ್ಡ್ಸ್’ (CDR) ಅನ್ನು ಬಹಿರಂಗಪಡಿಸಿದರು. “ಇಡೀ ಪ್ರಕರಣದ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರವಿದೆ” ಎಂದು ನೇರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಇದನ್ನೂ ಓದಿ: ಎಚ್‌ಎಂಟಿ ಕೈಗಡಿಯಾರಕ್ಕೆ ಮುಗಿಬಿದ್ದ ಜನ: ಕರ್ನಾಟಕದ ಉದ್ಯಮದ ಪುನಶ್ಚೇತನಕ್ಕೆ ಎಚ್‌ಡಿಕೆ ಹೆಜ್ಜೆ

“ನಾನು ಬಿಡುಗಡೆ ಮಾಡಿರುವ ದಾಖಲೆಗಳು ಕೇವಲ ಟ್ರೈಲರ್ ಮಾತ್ರ. ಸರ್ಕಾರಕ್ಕೆ ತಾಕತ್ತಿದ್ದರೆ ನಿಷ್ಪಕ್ಷಪಾತ ತನಿಖೆ ಮಾಡಿಸಲಿ, ಮುಂದಿನ ದಿನಗಳಲ್ಲಿ ಇಡೀ ಸರ್ಕಾರದ ಅಸಲಿಯತ್ತನ್ನು ಜನರೆದುರು ತರಲಿದ್ದೇನೆ” ಎಂದು ಸವಾಲು ಎಸೆದರು.

ಇನ್ನು ಇತ್ತೀಚೆಗೆ ಸಚಿವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ತನಿಖಾ ಸಂಸ್ಥೆಗಳನ್ನು ತಮಗೆ ಬೇಕಾದಂತೆ ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೈಜ ರೂವಾರಿಗಳನ್ನು ಮತ್ತು ಷಡ್ಯಂತ್ರ ನಡೆಸಿದ ಪ್ರಭಾವಿ ನಾಯಕರನ್ನು ರಕ್ಷಿಸಿ, ಪ್ರಕರಣದ ದಿಕ್ಕು ತಪ್ಪಿಸಲು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.

“ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಯಾಗಿರುವ ಕೃಪಾ ಆಳ್ವ ಅವರನ್ನು ತರಾತುರಿಯಲ್ಲಿ ವಿದೇಶಕ್ಕೆ ಕಳುಹಿಸಿದ್ದು ಏಕೆ? ಸರ್ಕಾರ ಯಾರನ್ನು ರಕ್ಷಿಸಲು ಈ ಹುನ್ನಾರ ನಡೆಸುತ್ತಿದೆ” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ತಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಅಥವಾ ವಶಕ್ಕೆ ಪಡೆಯಲು ಸರ್ಕಾರ ಹುನ್ನಾರ ನಡೆಸುತ್ತಿದೆ ಎಂಬ ವದಂತಿಗಳ ಕುರಿತು ಪ್ರತಿಕ್ರಿಯಿಸಿದ ಎಚ್‌ಡಿಕೆ, “ನಾನು ಯಾವುದಕ್ಕೂ ಅಂಜುವವನಲ್ಲ. ಕಮಿಷನರ್ ಆಫೀಸ್ ಅಥವಾ ಯಾವುದೇ ತನಿಖಾ ಸಂಸ್ಥೆ ಮುಂದೆ ಹೋಗಲು ಸಿದ್ಧ” ಎಂದು ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ (NDA) ಮೈತ್ರಿಯೊಂದಿಗೆ ಸರ್ಕಾರದ ಈ ದುರಾಡಳಿತ ಮತ್ತು ದುಷ್ಟ ಶಕ್ತಿಗಳ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಕೋರ್ಟ್ ಆದೇಶ ಆಧರಿಸಿ ಬೆಟ್ಟಿಂಗ್ ವೆಬ್‌ಸೈಟ್‌ ಬ್ಲಾಕ್‌: ಟೆಲಿಕಾಂ ಕಾರ್ಯದರ್ಶಿಗೆ ಪ್ರಧಾನಿ ಕಚೇರಿ ಸಮನ್ಸ್

ನಕಲಿ ನ್ಯಾಯಾಲಯದ ಆದೇಶಗಳನ್ನು ಆಧರಿಸಿ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ (ಬ್ಲಾಕ್)...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸಹಕರಿಸಬೇಕು: ಡಿಕೆಶಿ

"ತಮಿಳುನಾಡಿನ 177 ಟಿಎಂಸಿ ನೀರಿನ ಹಕ್ಕಿನ ರಕ್ಷಣೆಯ ಜೊತೆಗೆ ಕರ್ನಾಟಕದ ಹಿತಾಸಕ್ತಿ...

ಶಿವಮೊಗ್ಗ | ಚಿನ್ನಕ್ಕೆ ತುಕ್ಕು ಹಿಡಿಯುವ ಕಾಲ ಬಂದಿದೆ: ಮಹಮ್ಮದ್ ಕುಂಞಿ

ಚಿನ್ನದಂತಹ ಮನಸ್ಸು ಹೊಂದಿದ್ದ ಭಾರತೀಯರು ಇಂದು ಪರಸ್ಪರ ಜನಾಂಗ ದ್ವೇಷ ಮಾಡುವ...

ಅಮೆರಿಕದ ವಕೀಲರಿಗೆ ಡಿಜಿಟಲ್ ಅರೆಸ್ಟ್ ಬಲೆ: ₹4 ಕೋಟಿ ಕಳೆದುಕೊಂಡ ಅತುಲ್ ತಲ್ವಾರ್!

ನ್ಯೂಯಾರ್ಕ್‌ನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಮಿಕ ವಕೀಲರಾಗಿ ಸೇವೆ ಸಲ್ಲಿಸಿ,...