ಬಾನು ಮುಷ್ತಾಕ್ ದಸರಾ ಉದ್ಘಾಟಿಸದಂತೆ ತಡೆ ಕೋರಿ ಹೈಕೋರ್ಟ್‌ ಮೊರೆ ಹೋದ ಪ್ರತಾಪ್ ಸಿಂಹ

Date:

Advertisements

ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿಗೆ ಭಾಜನರಾದ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ಕೊಟ್ಟ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ. ಮೈಸೂರಿನ ರಾಜಮನೆತನದವರು ಕೂಡ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಬಾನು ಮುಷ್ತಾಕ್ ರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶಿಸುವಂತೆ ಹೈಕೋರ್ಟ್​ಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರನ್ನು ಆಯ್ಕೆ ಮಾಡಿದ ವಿಚಾರವಾಗಿ ವಿವಾದವಾಗಿ ಮಾರ್ಪಟ್ಟಿದೆ. ಭುವನೇಶ್ವರಿ ಬಗ್ಗೆ ಬಾನು ಮುಷ್ತಾಕ್ ಮಾತಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಹಿಂದೂ ಸಂಘಟನೆ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದೆ.

ಅಧಿಕೃತ ಆಹ್ವಾನ ಬಳಿಕ ಪ್ರತಿಕ್ರಿಯಿಸಿದ್ದ ಬಾನು ಮುಷ್ತಾಕ್, “ಆಹ್ವಾನ ಕೊಟ್ಟಿರೋದಕ್ಕೆ ಜಿಲ್ಲಾಡಳಿತಕ್ಕೆ ಧನ್ಯವಾದ. ದಸರಾ ನಮ್ಮ ಎಲ್ಲರ ಮನೆಯ ಹಬ್ಬ” ಎಂದು ಬಣ್ಣಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X