ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ; ಪರಪ್ಪನ ಅಗ್ರಹಾರ ಜೈಲಿಗೂ ಸಿದ್ಧರಾಗಿ ಎಂದ ಪ್ರಿಯಾಂಕ್‌ ಖರ್ಗೆ

Date:

ಪೋಲಿಸ್ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಮತ್ತು ಸಮಾಜದ ಸ್ವಾಸ್ಥ್ಯ ಕೆಡಿಸಲು ಯತ್ನಿಸುವವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

ಇತ್ತೀಚೆಗೆ, ಟಿ ನರಸೀಪುರ ಪೊಲೀಸರ ವಿರುದ್ಧ ಮಾತನಾಡಿದ್ದ ಪ್ರತಾಪ್ ಸಿಂಹ, ‘ನಾನು ಪೊಲೀಸ್‌ ಠಾಣೆಗೆ ನುಗ್ಗುತ್ತೇನೆ’ ಎಂದು ಸವಾಲು ಹಾಕಿದ್ದರು. ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರಕ್ರಿಯಿಸಿ ‘ಟ್ವೀಟ್‌ ಮಾಡಿರುವ ಪ್ರಿಯಾಂಕ್‌ ಖರ್ಗೆ, “ಯಾರಾದರೂ ಠಾಣೆಗೆ ನುಗ್ಗುವ ದುಸ್ಸಾಹಸಕ್ಕೆ ಕೈಹಾಕಿದರೆ, ಅಲ್ಲಿಂದ ನೇರವಾಗಿ ಪರಪ್ಪನ ಅಗ್ರಹಾರ ಕೇಂದ್ರ ಜೈಲಿಗೂ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಮಾಡಲಾಗುವುದು” ಎಂದು ವ್ಯಂಗ್ಯಭರಿತ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪ್ರತಾಪ್ ಸಿಂಹ ಅವರ ಹೆಸರು ಉಲ್ಲೇಖಿಸದೆ ‘ಮೈಸೂರಿನ ಕೊನೆಯ ಪೇಟೆ ರೌಡಿ’ ಎಂದು ಪ್ರಿಯಾಂಕ್‌ ಖರ್ಗೆ ಲೇವಡಿ ಮಾಡಿದ್ದಾರೆ. “ರಾಜಕೀಯವಾಗಿ ಅಸ್ತಿತ್ವ ಕಳೆದುಕೊಂಡು ನರಳುತ್ತಿರುವ ವ್ಯಕ್ತಿಯೊಬ್ಬರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಾರಕ್ಕೊಮ್ಮೆ ಮಾಧ್ಯಮಗಳ ಮುಂದೆ ಚಿಲ್ಲರೆ ಹೇಳಿಕೆ ನೀಡುತ್ತಿದ್ದಾರೆ. ಪೊಲೀಸರಿಗೆ ಬೆದರಿಕೆ ಹಾಕಿ ಅವರ ನೈತಿಕ ಸ್ಥೈರ್ಯ ಕುಗ್ಗಿಸುವ ಯತ್ನವನ್ನು ಸರ್ಕಾರ ಸಹಿಸುವುದಿಲ್ಲ” ಎಂದಿದ್ದಾರೆ.

“ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬೆದರಿಕೆ ಒಡ್ಡುವ ಪ್ರವೃತ್ತಿಗೆ ಕಡಿವಾಣ ಹಾಕಲಾಗುವುದು. ಸೂಕ್ಷ್ಮ ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಶಾಂತಿ ಕದಡಲು ಯತ್ನಿಸುವ ಯಾವುದೇ ಶಕ್ತಿಯ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...