ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ ವೆಡ್ಡಿಂಗ್ ಶೂಟ್: ವೈದ್ಯ ಅಮಾನತು

Date:

ಚಿತ್ರದುರ್ಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಮಾಡಿದ್ದ ಸರ್ಕಾರಿ ವೈದ್ಯನನ್ನು ಅಮಾನತು ಮಾಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಭರಮಸಾಗರ ಮೂಲದ ವೈದ್ಯ ಡಾ.ಅಭಿಷೇಕ್ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದು, ಈ ನಡುವೆ ಆಪರೇಷನ್ ಥಿಯೇಟರ್‌ನಲ್ಲಿ ಪ್ರೀವೆಡ್ಡಿಂಗ್ ವಿಡಿಯೋ ಶೂಟ್ ಮಾಡಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತಲ್ಲದೇ, ವೈದ್ಯರ ನಡೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, “ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಯಹ ಅಶಿಸ್ತುಗಳನ್ನು ನಾನು ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನ ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರೂ ಗಮನಹರಿಸಬೇಕು” ಎಂದು ಸಚಿವರು ತಿಳಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳಿಂದ ‘ರೀಲ್ಸ್’
ಈ ನಡುವೆ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳ ‘ರೀಲ್ಸ್’ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜಿಲ್ಲಾಸ್ಪತ್ರೆಯ ಕಾರಿಡಾರ್‌ನಲ್ಲಿ ಈ ವಿಡಿಯೋ ಮಾಡಲಾಗಿದೆ.

ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಆದೇಶಿಸಿದ್ದಾರೆ.

ಎಂಬಿಬಿಎಸ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು, ಹಿಂದಿ ಚಿತ್ರ ಗೀತೆಗಳಿಗೆ ರೀಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ರೀಲ್ಸ್ ಗಳನ್ನು ನೋಡಿ ಕೆಲವರು ಇಷ್ಟಪಟ್ಟರೆ, ಇನ್ನು ಕೆಲವರು ‘ನಿಮ್ಮ ರೀಲ್ಸ್ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ವಾ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ...

ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು...

ಶಿವಮೊಗ್ಗ | ಗೀತಾರನ್ನು ಸಂಸದೆಯಾಗಿ ನೋಡುವ ಆಸೆ ಇದೆ: ನಟ ಶಿವ ರಾಜ್‌ಕುಮಾರ್

ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ....

ಕೃಷಿ ಇಲಾಖೆಗೆ ಶೀಘ್ರದಲ್ಲೇ 750 ಹುದ್ದೆಗಳ ಭರ್ತಿ: ಸಚಿವ ಎನ್. ಚಲುವರಾಯಸ್ವಾಮಿ

ಕೃಷಿ ಇಲಾಖೆಯ ಕಾರ್ಯ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುವಾಗುವಂತೆ ಕ್ಷೇತ್ರ ಮಟ್ಟದಲ್ಲಿ...