ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ ಡಾ. ಎಚ್. ದಂಡಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಬರವಣಿಗೆಯ ಶೈಲಿಯಿಂದ ಗುರುತಿಸಿಕೊಂಡಿರುವ ಡಾ. ಎಚ್. ದಂಡಪ್ಪ ಅವರು ಸಂಶೋಧನೆ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ತೊಡಗಿಸಿಕೊಂಡಿರುವ ಅವರು, ತಮ್ಮ ಸಾಹಿತ್ಯಿಕ ಸಾಧನೆಗಾಗಿ ಹಲವು ಪ್ರತಿಷ್ಠಿತ ಗೌರವ ಹಾಗೂ ಸನ್ಮಾನಗಳಿಗೆ ಪಾತ್ರರಾಗಿದ್ದಾರೆ.
ಡಾ. ಬಂಜಗೆರೆ ಜಯಪ್ರಕಾಶ್ ಅವರ ನೇತೃತ್ವದ ಆಯ್ಕೆ ಸಮಿತಿಯು ವಿವಿಧ ಕ್ಷೇತ್ರಗಳ ಸಾಧನೆಗಳನ್ನು ಪರಿಗಣಿಸಿ ಡಾ. ಎಚ್. ದಂಡಪ್ಪ ಅವರನ್ನು ಈ ಸಾಲಿನ ಕನಕಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ
ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು
ನವೆಂಬರ್ 27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಸಂತಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಎಚ್. ದಂಡಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ ಸಂಕಟ: ನೀರಿಲ್ಲದ ಕಾಡು-ಆಹಾರವಿಲ್ಲದ ವನ್ಯಜೀವಿ!



